ವಿಜಯನಗರ : ರಾಜ್ಯದಲ್ಲಿ ಕಳೆದ ಕೆಲವು ತಿಂಗಳ ಹಿಂದೆ ಬಳ್ಳಾರಿ ಬೆಳಗಾವಿ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಸರಣಿ ಬಾಣಂತಿಯರ ಸಾವು ಪ್ರಕರಣಗಳು ನಡೆದಿತ್ತು ಇದೀಗ ವಿಜಯನಗರ ಜಿಲ್ಲೆಯಲ್ಲಿ ಕೂಡ ಹೆಣ್ಣು ಮಗುವಿಗೆ ಜನ್ಮ ನೀಡಿದ ಬಾಣಂತಿಯೋರ್ವರು ಸಾವನಪ್ಪಿದ್ದಾರೆ ಎಂದು ತಿಳಿದುಬಂದಿದೆ.
ಸಿಸೆರಿಯನ್ ಮೂಲಕ ಹೆಣ್ಣು ಶಿಶುಗೆ ಜನ್ಮ ನೀಡಿದ ಬಾಣಂತಿ ಸಾವನ್ನಪ್ಪಿದ್ದು, ವಿಜಯನಗರ ಜಿಲ್ಲೆಯ ಹೊಸಪೇಟೆಯ ತಾಯಿ ಮತ್ತು ಮಕ್ಕಳ ಆಸ್ಪತ್ರೆಯಲ್ಲಿ ಈ ಒಂದು ಘಟನೆ ನಡೆದಿದೆ.ಆಸ್ಪತ್ರೆಗೆ ದಾಖಲಾಗಿದ್ದ ಬಾಣಂತಿ ಶಾಂತ (26) ಸಾವನ್ನಪ್ಪಿದ್ದಾರೆ. ಹಗರಿಬೊಮ್ಮನಹಳ್ಳಿ ತಾಲೂಕಿನ ದಶಮಾಪುರ ಗ್ರಾಮದ ನಿವಾಸಿ ಎನ್ನಲಾಗಿದ್ದು, ವೈದ್ಯರ ನಿರ್ಲಕ್ಷದಿಂದ ಬಾಣಂತಿ ಸಾವಾಗಿದೆ ಎಂದು ಇದೀಗ ಪೋಷಕರು ಆರೋಪಿಸುತ್ತಿದ್ದಾರೆ.