ಬೆಂಗಳೂರು: ನಿರ್ಮಾಣದ ಹಂತದಲ್ಲಿರುವ ವಿಜಯಪುರ ವಿಮಾನ ನಿಲ್ದಾಣಕ್ಕೆ ʻಶ್ರೀ ಜಗಜ್ಯೋತಿ ಬಸವೇಶ್ವರ ವಿಮಾನ ನಿಲ್ದಾಣʼ ಎಂದು ನಾಮಕರಣ ಮಾಡಲು ಸಚಿವ ಸಂಪುಟ ಸಭೆ ತೀರ್ಮಾನಿಸಿದೆ.
ವಿಜಯಪುರದಲ್ಲಿ ನೂತನವಾಗಿ ನಿರ್ಮಾಣವಾಗುತ್ತಿರುವ ವಿಮಾನ ನಿಲ್ದಾಣಕ್ಕೆ 12ನೇ ಶತಮಾನದ ಸಮಾಜ ಸುಧಾರಕ ಬಸವೇಶ್ವರ ಹೆಸರನ್ನು ನಾಮಕರಣ ಮಾಡಲು ರಾಜ್ಯ ಸರ್ಕಾರ ತೀರ್ಮಾನಿಸಿದೆ. ಗುರುವಾರ ಸಿಎಂ ಬೊಮ್ಮಯಿ ಅಧ್ಯಕ್ಷತೆಯಲ್ಲಿ ನಡೆದ ಸಂಪುಟ ಸಭೆಯಲ್ಲಿ ಈ ನಿರ್ಣಯ ಕೈಗೊಳ್ಳಲಾಗಿದೆ.
ವಿಜಯಪುರ ನಗರದಲ್ಲಿ ಎ.ಟಿ.ಆರ್.72 ಮಾದರಿ ವಿಮಾನ ಹಾರಾಟಕ್ಕಾಗಿ ನಿರ್ಮಾಣ ಹಂತದಲ್ಲಿರುವ ವಿಮಾನ ನಿಲ್ದಾಣವನ್ನು ಏರ್ ಬಸ್-320 ಮಾದರಿಯ ವಿಮಾನ ನಿಲ್ದಾಣವನ್ನಾಗಿ ಮೇಲ್ದರ್ಜೆಗೇರಿಸಲು 347.92 ಕೋಟಿ ರೂ. ಪರಿಷ್ಕೃತ ಅಂದಾಜು ಮೊತ್ತಕ್ಕೆ ಸಚಿವ ಸಂಪುಟದ ಆಡಳಿತಾತ್ಮಕ ಅನುಮೋದನೆ ನೀಡಲಾಗಿದೆ ಎಂದು ಅವರು ತಿಳಿಸಿದ್ದಾರೆ.
BIG NEWS: ನ. 1ರಂದು ನಟ ʻಪುನೀತ್ ರಾಜ್ಕುಮಾರ್ʼಗೆ ಮರಣೋತ್ತರ ʻಕರ್ನಾಟಕ ರತ್ನʼ ಪ್ರಶಸ್ತಿ ಪ್ರಧಾನ: ಸಿಎಂ ಬೊಮ್ಮಾಯಿ
ಭಾರತೀಯ ರೂಪಾಯಿ ಮೌಲ್ಯ ನಿರಂತರ ಕುಸಿತ: ಪ್ರಧಾನಿ ಮೋದಿ ಸರ್ಕಾರದ ವಿರುದ್ಧ ಕಾಂಗ್ರೆಸ್ ಗರಂ