ವಿಜಯಪುರ : ಕಳೆದ 2 ದಿನಗಳ ಹಿಂದೆ ವಿಜಯಪುರ ನಗರದಲ್ಲಿ ಹೃದಯ ವಿದ್ರಾವಕ ಘಟನೆ ನಡೆದಿದ್ದು, ಒಂಟೆಯ ಬೆನ್ನು ಹತ್ತಿ ತೆರಳಿದ್ದ ಮೂವರು ಮಕ್ಕಳು, ಇಂಡಿ ರಸ್ತೆಯಲ್ಲಿರುವ ಯುಜಿಡಿ ತ್ಯಾಜ್ಯ ನೀರಿನ ಸಂಸ್ಕರಣಾ ಘಟಕದ ನೀರಲ್ಲಿ ಶವವಾಗಿ ಪತ್ತೆಯಾಗಿದ್ದರು. ಇದೀಗ ಈ ಒಂದು ಪ್ರಕರಣಕ್ಕೆ ಸಂಬಂಧಿಸಿದಂತೆ ಮಹಾನಗರ ಪಾಲಿಕೆ ಅಧಿಕಾರಿಯಾಗಿ ಸಿಬ್ಬಂದಿಗಳ ವಿರುದ್ಧ ಎಫ್ಐಆರ್ ದಾಖಲಾಗಿದೆ.
ಹೌದು ಮೇ 12 ರಂದು ಮನೆಯಿಂದ ಒಂಟೆ ಸವಾರಿ ನೋಡಲು ಹೋಗಿದ್ದ ಮೂವರು ಮಕ್ಕಳು, ಇಂಡಿ ರಸ್ತೆಯಲ್ಲಿರುವ ಯುಜಿಡಿ ತ್ಯಾಜ್ಯ ನೀರಿನ ಸಂಸ್ಕರಣಾ ಘಟಕದ ನೀರಲ್ಲಿ ಶವವಾಗಿ ಪತ್ತೆಯಾಗಿದ್ದರು. ಇದಕ್ಕೆ ಮಹಾನಗರ ಪಾಲಿಕೆ ಅಧಿಕಾರಿ ಹಾಗೂ ಸಿಬ್ಬಂದಿಗಳ ನಿರ್ಲಕ್ಷವೇ ಕಾರಣ ಎಂದು ಮಕ್ಕಳ ಪೋಷಕರು ಆರೋಪಿಸಿದ್ದರು.
ಈ ಹಿನ್ನಲೆ ಇದೀಗ ಮಹಾನಗರ ಪಾಲಿಕೆಯ ಅಧಿಕಾರಿಗಳು ಮತ್ತು ಸಿಬ್ಬಂದಿಗಳ ಮೇಲೆ ಐಪಿಸಿ ಸೆಕ್ಷನ್ 304ಎ ಅಡಿಯಲ್ಲಿ ಆದರ್ಶ ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ಈ ಕುರಿತು ಪೊಲೀಸರು ತನಿಖೆ ಮುಂದುವರೆಸಿದ್ದಾರೆ ಎಂದು ತಿಳಿದುಬಂದಿದೆ.