ವಿಜಯಪುರ: ನಾಳೆ (Oct 31) ವಿಜಯಪುರ ಮಹಾನಗರ ಪಾಲಿಕೆ ಚುನಾವಣಾ ಫಲಿತಾಂಶ ಪ್ರಕಟವಾಗಲಿದ್ದು, 174 ಅಭ್ಯರ್ಥಿಗಳ ಭವಿಷ್ಯ ನಿರ್ಧಾರವಾಗಲಿದೆ.
ನಾಳೆ ಬೆಳಗ್ಗೆ 8 ಗಂಟೆಯಿಂದ ವಿಜಯಪುರ ದರಬಾರ್ ಸ್ಕೂಲ್ ನಲ್ಲಿ ಮತ ಎಣಿಕೆ ಕಾರ್ಯ ಆರಂಭವಾಗಲಿದ್ದು, ಮಧ್ಯಾಹ್ನದ ವೇಳೆಗೆ ಫಲಿತಾಂಶ ಪ್ರಕಟವಾಗಲಿದೆ. ಒಟ್ಟು 35 ಟೇಬಲ್ ನಲ್ಲಿ ಮತ ಎಣಿಕೆ ಕಾರ್ಯ ನಡೆಯಲಿದ್ದು, ಇದಕ್ಕಾಗಿ 179 ಸಿಬ್ಬಂದಿ ನಿಯೋಜನೆ ಮಾಡಲಾಗಿದೆ.ಹಾಗೂ 70 ಮೇಲ್ವಿಚಾರಕರನ್ನು ಮತ ಎಣಿಕೆ ಕಾರ್ಯಕ್ಕಾಗಿ ನಿಯೋಜಿಸಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.
ವಿಜಯಪುರ ಮಹಾನಗರ ಪಾಲಿಕೆಯ 35 ವಾರ್ಡ್ ಗಳಿಗೆ ಸಾರ್ವತ್ರಿಕ ಚುನಾವಣೆ ಘೋಷಿಸಿದ್ದು, ಅ. 28 ರಂದು ಮತದಾನ ನಡೆದಿತ್ತು. ಚುನಾವಣೆ ಹಿನ್ನೆಲೆಯಲ್ಲಿ ಪಾಲಿಕೆ ವ್ಯಾಪ್ತಿಯಲ್ಲಿನ ಶಾಲಾ ಕಾಲೇಜು, ಸರ್ಕಾರಿ ಕಚೇರಿ, ಸರ್ಕಾರಿ ಸಂಸ್ಥೆಗಳಲ್ಲಿ ಮತಗಟ್ಟೆಗಳನ್ನು ಸ್ಥಾಪಿಸಲಾಗಿತ್ತು. ಒಟ್ಟಿನಲ್ಲಿ ನಾಳೆ ವಿಜಯಪುರ ಮಹಾನಗರ ಪಾಲಿಕೆ ಚುನಾವಣಾ ಫಲಿತಾಂಶ ಪ್ರಕಟವಾಗಲಿದ್ದು, 174 ಮಂದಿ ಅಭ್ಯರ್ಥಿಗಳ ಭವಿಷ್ಯ ನಿರ್ಧಾರವಾಗಲಿದೆ..
BIGG NEWS ; ನಿರುದ್ಯೋಗ, ಭ್ರಷ್ಟಾಚಾರ ಕುರಿತು ನಗರ ಭಾರತೀಯರು ಹೆಚ್ಚು ಚಿಂತಿತರಾಗಿದ್ದಾರೆ ; ಸಮೀಕ್ಷೆ
BIG NEWS: ‘ಸಚಿವ ಶ್ರೀರಾಮುಲು’ಗೆ ‘ಮೊಳಕಾಲ್ಮೂರು ಕ್ಷೇತ್ರ’ದಲ್ಲಿ ಸೋಲಿನ ಭೀತಿ: ‘ಹೊಸ ಕ್ಷೇತ್ರ’ಕ್ಕೆ ಹುಡುಕಾಟ?
BIG BREAKING NEWS: ಬಸವಲಿಂಗಸ್ವಾಮೀಜಿ ವಿರುದ್ಧ ಷಡ್ಯಂತ್ರ ಆರೋಪ: ಮೃತ್ಯುಂಜಯ ಶ್ರೀಗೆ 14 ದಿನ ನ್ಯಾಯಾಂಗ ಬಂಧನ