ವಿಜಯಪುರ : ನ್ಯಾಯಾಲಯದ ಸಂಕೀರ್ಣದ ಮುಂದೆಯೇ ಅಪರಿಚಿತ ವ್ಯಕ್ತಿಯ ಮೇಲೆ ನಾಲ್ವರು ದುಷ್ಕರ್ಮಿಗಳು ರಾಡ್ ನಿಂದ ತಲೆಯ ಮೇಲೆ ಭೀಕರವಾಗಿ ಹಲ್ಲೆ ನಡೆಸಿರುವ ಘಟನೆ ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ತಾಲೂಕಿನಲ್ಲಿ ನಡೆದಿದೆ.
ಈ ವೇಳೆ ದಾಳಿಗೆ ಒಳಗಾದ ವ್ಯಕ್ತಿಯನ್ನು ಸಾರ್ವಜನಿಕರು, ಹಾಗೂ ವಕೀಲರು ಸೇರಿ ರಕ್ಷಿಸಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಹಲ್ಲೆ ನಡೆಸಿ ನಾಲ್ವರು ಇದೀಗ ಪರಾರಿಯಾಗಿದ್ದಾರೆ. ಗಾಯಾಳುವಿಗೆ ಮುದ್ದೇಬಿಹಾಳ ತಾಲೂಕು ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.ಮುದ್ದೇಬಿಹಾಳ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಒಂದು ಪ್ರಕರಣ ನಡೆದಿದೆ.ಘಟನೆ ಕುರಿತಂತೆ ಪೊಲೀಸರು ತನಿಖೆ ಕೈಗೊಂಡಿದ್ದಾರೆ.