ವಿಜಯಪುರ: ವಿಜಯಪುರ ಮಹಾನಗರ ಪಾಲಿಕೆಯ 35 ಸದಸ್ಯರ ಸದಸ್ಯತ್ವವನ್ನು ಅನರ್ಹಗೊಳಿಸಿ ಪ್ರಾದೇಶಿಕ ಆಯುಕ್ತರು ಆದೇಶಿಸಿದ್ದಾರೆ. ಈ ಮೂಲಕ ವಿವಿಧ ಪಕ್ಷದ ಸದಸ್ಯರಿಗೆ ಬಿಗ್ ಶಾಕ್ ನೀಡಿದ್ದಾರೆ.
ಈ ಸಂಬಂಧ ಆದೇಶ ಹೊರಡಿಸಿರುವಂತ ಬೆಳಗಾವಿಯ ಪ್ರಾದೇಶಿಕ ಆಯುಕ್ತ ಸಂಜಯ ಶೆಟ್ಟಣನವರು, ವಿಜಯಪುರ ಮಹಾನಗರ ಪಾಲಿಕೆಯ 35 ಸದಸ್ಯರ ಸದಸ್ಯತ್ವವನ್ನು ಅನರ್ಹಗೊಳಿಸಿ ಆದೇಶಿಸಿದ್ದಾರೆ.
ಬಿಜೆಪಿಯ 17 ಸದಸ್ಯರು, ಕಾಂಗ್ರೆಸ್ ಪಕ್ಷದ 10 ಸದಸ್ಯರು, ಜೆಡಿಎಸ್ ನ ಓರ್ವ ಸದಸ್ಯ, ಎಂಐಎಂ ಇಬ್ಬರು, ಐವರು ಪಕ್ಷೇತರ ಸದಸ್ಯರು ಸೇರಿದಂತೆ ಒಟ್ಟು 35 ಸದಸ್ಯರನ್ನು ಅನರ್ಹಗೊಳಿಸಿ ಆದೇಶ ಮಾಡಿದ್ದಾರೆ.
ಅಂದಹಾಗೇ 2022ರ ವಿಜಯಪುರ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಇವರೆಲ್ಲರೂ ಆಯ್ಕೆಯಾಗಿದ್ದರು. ಜನವರಿ 9, 2024ರಲ್ಲಿ ಮೇಯರ್ ಚುನಾವಣೆ ನಡೆದಿತ್ತು. ಕಾಂಗ್ರೆಸ್ ಪಕ್ಷದ ಮೆಹಜಬೀನ್ ಹೊರ್ತಿ ಮೇಯರ್ ಆಗಿದ್ದರೇ, ದಿನೇಶ್ ಹಳ್ಳಿ ಉಪಮೇಯರ್ ಆಗಿ ಆಯ್ಕೆಯಾಗಿದ್ದರು.
ವಿಜಯಪುರ ಮಹಾನಗರ ಪಾಲಿಕೆಯ ಯಾವ ಸದಸ್ಯರೂ ಕಾನೂನು ಪ್ರಕಾರ ಆಸ್ತಿ ಘೋಷಿಸಿರಲಿಲ್ಲ. ಇದನ್ನು ಪ್ರಶ್ನಿಸಿ ಕಲಬುರ್ಗಿ ಹೈಕೋರ್ಟ್ ಮೊರೆಯನ್ನು ಮಾಜಿ ಸದಸ್ಯ ಪ್ರಕಾಶ್ ಮಿರ್ಜಿ ಮೈನುದ್ದೀನ್ ಬೀಳಗಿ ಹೋಗಿದ್ದರು. ಹೈಕೋರ್ಟ್ ಸರ್ಕಾರಕ್ಕೆ ಕ್ರಮ ತೆಗೆದುಕೊಳ್ಳಲು ಸೂಚಿಸಿತ್ತು. ಈ ಹಿನ್ನಲೆಯಲ್ಲಿ ವಿಜಯಪುರ ಮಹಾನಗರ ಪಾಲಿಕೆಯ 35 ಸದಸ್ಯರ ಸದಸ್ಯತ್ವವನ್ನು ಅನರ್ಹಗೊಳಿಸಿ ಬೆಳಗಾವಿ ಪಾಲಿಕೆ ಆಯುಕ್ತರು ಆದೇಶಿಸಿದ್ದಾರೆ.
ಬೆಂಗಳೂರಿನ ‘ಬೀದಿ ಬದಿಯ ವ್ಯಾಪಾರಿ’ಗಳಿಗೆ ‘ಡಿಸಿಎಂ ಡಿ.ಕೆ ಶಿವಕುಮಾರ್’ ಗುಡ್ ನ್ಯೂಸ್
BREAKING : ನಾನು ಸೇರಿದಂತೆ ಎಲ್ಲಾ ವಿರೋಧ ಪಕ್ಷದ ನಾಯಕರ ‘ಫೋನ್ ಟ್ಯಾಪಿಂಗ್’ ಆಗ್ತಿದೆ : ಆರ್ ಅಶೋಕ್ ಸ್ಪೋಟಕ ಹೇಳಿಕೆ!
GOOD NEWS: ಮುಂದಿನ ಮಾರ್ಚ್ ತಿಂಗಳಲ್ಲಿ ಸರ್ಕಾರದ ವತಿಯಿಂದ 3000 ಮಹಿಳೆಯರಿಗೆ ಸಾಮೂಹಿಕ ಸೀಮಂತ ಕಾರ್ಯಕ್ರಮ