ವಿಜಯಪುರ : ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಮಾದರಿ ನೀತಿ ಸಂಹಿತೆಯನ್ನು ಜಾರಿಗೆ ಮಾಡಿದ್ದು ಅಕ್ರಮವಾಗಿ ಹಣ ಮದ್ಯ ಸೇರಿದಂತೆ ಇತರೆ ವಸ್ತುಗಳನ್ನು ಸಾಗಾಟ ಮಾಡುವವರ ಮೇಲೆ ಅಧಿಕಾರಿಗಳು ಕಣ್ಣಿಟ್ಟಿದ್ದು, ಇದೀಗ ವಿಜಯಪುರ ಜಿಲ್ಲೆಯಲ್ಲಿ ದಾಖಲೆ ಇಲ್ಲದೆ ಸಾಗಿಸುತ್ತಿದ್ದ 50 ಲಕ್ಷ ಹಣವನ್ನು ಜಪ್ತಿ ಮಾಡಿಕೊಂಡಿದ್ದಾರೆ.
ವಿಜಯಪುರ ಜಿಲ್ಲೆಯ ಬಸವನ ಬಾಗೇವಾಡಿ ತಾಲೂಕಿನ ಮನಗೂಳಿ ಬಳಿ ಕಾರಿನಲ್ಲಿ ದಾಖಲೆ ಇಲ್ಲದೆ ಸಾಗಿಸುತ್ತಿದ್ದ 50 ಲಕ್ಷ ಹಣವನ್ನು ಜಪ್ತಿ ಮಾಡಿಕೊಳ್ಳಲಾಗಿದೆ. ಕೆಎ 18 ಎಂಎ 6462 ಸಂಖ್ಯೆಯ ಕಾರಿನಲ್ಲಿ ಹಣ ಸಾಗಿಸುತ್ತಿದ್ದರು. ಬಸವಣ್ಣ ಬಾಗೇವಾಡಿ ತಹಸೀಲ್ದಾರ್ ಸೋಮನಕಟ್ಟಿ ಹಾಗೂ ಪೊಲೀಸ್ ಅಧಿಕಾರಿಗಳು ಸೇರಿ 50 ಲಕ್ಷ ನಗದು ಹಾಗೂ ಕಾರನ್ನು ಜಪ್ತಿ ಮಾಡಿಕೊಳ್ಳಲಾಗಿದೆ. ಮನಗೂಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.