ಬೆಂಗಳೂರು: ದಕ್ಷಿಣ ಕನ್ನಡ ಸ್ಥಳೀಯ ಸಂಸ್ಥೆಗಳ ಕ್ಷೇತ್ರದಿಂದ ವಿಧಾನ ಪರಿಷತ್ತಿಗೆ ನಡೆಯುವ ಉಪಚುನಾವಣೆಗೆ ಬಿಜೆಪಿ (ಎನ್.ಡಿ.ಎ) ಅಭ್ಯರ್ಥಿಯಾಗಿ ಆಯ್ಕೆಯಾಗಿರುವ ಕಿಶೋರ್ ಕುಮಾರ್ ಪುತ್ತೂರು ಅವರಿಗೆ ಅಭಿನಂದನೆಗಳನ್ನು ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ತಿಳಿಸಿದ್ದಾರೆ.
ಈ ಬಗ್ಗೆ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವಂತ ಅವರು, ಭಾರತೀಯ ಜನತಾ ಪಾರ್ಟಿ ಸಾಮಾಜಿಕ ನ್ಯಾಯಕ್ಕೆ ನಿರಂತರ ಒತ್ತುಕೊಡುತ್ತಾ ಬಂದಿದೆ. ಈ ನಿಟ್ಟಿನಲ್ಲಿ ಅತಿ ಹಿಂದುಳಿದ ಸಮಾಜಕ್ಕೆ ಸೇರಿದ ಕಿಶೋರ್ ಕುಮಾರ್ ಪುತ್ತೂರು ಅವರನ್ನು ಅಭ್ಯರ್ಥಿಯಾಗಿ ಆಯ್ಕೆ ಮಾಡುವ ಮೂಲಕ ಪಕ್ಷದ ವರಿಷ್ಠರು ಸಾಮಾಜಿಕ ನ್ಯಾಯ ಹಾಗೂ ಅವಕಾಶ ವಂಚಿತ ಸಮುದಾಯಗಳಿಗೆ ರಾಜಕೀಯ ಪ್ರಾತಿನಿಧ್ಯ ಕೊಡುವ ಬದ್ಧತೆ ತೋರಿದ್ದಾರೆ ಎಂದಿದ್ದಾರೆ.
ಇದಕ್ಕಾಗಿ ಪಕ್ಷದ ವರಿಷ್ಠರಾದ ಹೆಮ್ಮೆಯ ಪ್ರಧಾನಿ ನರೇಂದ್ರ ಮೋದಿ ಜೀ ಅವರು, ರಾಷ್ಟ್ರೀಯ ಅಧ್ಯಕ್ಷರು ಹಾಗೂ ಕೇಂದ್ರ ಸಚಿವರಾದ ಜೆಪಿ ನಡ್ಡಾ ಜೀ ಅವರು ಹಾಗೂ ಕೇಂದ್ರ ಗೃಹ ಸಚಿವರಾದ ಅಮಿತ್ ಶಾ ಜೀ ಅವರು ಸೇರಿದಂತೆ ಪಕ್ಷದ ವರಿಷ್ಠರಿಗೆ ನಾನು ಕೃತಜ್ಞತಾಪೂರ್ವಕವಾಗಿ ಅಭಿನಂದಿಸಿದ್ದಾರೆ.
ಕಿಶೋರ್ ಕುಮಾರ್ ಪುತ್ತೂರು ಅವರು ಇದುವರೆಗೂ ಕ್ಷೇತ್ರವನ್ನು ಪ್ರತಿನಿಧಿಸುತ್ತಿದ್ದ ಕಿಶೋರ್ ಕುಮಾರ್ ಪುತ್ತೂರು ಅವರ ಮಾದರಿಯಲ್ಲಿಯೇ ವಿಧಾನ ಪರಿಷತ್ತಿಗೆ ಚುನಾಯಿತರಾಗಿ ಪಕ್ಷದ ಸಿದ್ಧಾಂತ ಹಾಗೂ ಜನಪರ ಕಾಳಜಿಯ ದನಿಯಾಗಲಿ ಎಂದು ಹಾರೈಸುತ್ತೇನೆ ಎಂದಿದ್ದಾರೆ.
ಸಿದ್ಧರಾಮಯ್ಯ ಮೂಡಾ ಹಗರಣದ ನೈತಿಕ ಹೊಣೆ ಹೊತ್ತು, ರಾಜೀನಾಮೆ ನೀಡಬೇಕು: ಛಲವಾದಿ ನಾರಾಯಸ್ವಾಮಿ
BREAKING : ಬೆಳಗಾವಿಯಲ್ಲಿ ಹೃದಯ ವಿದ್ರಾವಕ ಘಟನೆ : 17 ತಿಂಗಳ ಮಗುವಿನೊಂದಿಗೆ ಬಾವಿಗೆ ಹಾರಿ ತಾಯಿ ಆತ್ಮಹತ್ಯೆ!