ಶಿವಮೊಗ್ಗ: ಲೋಕಸಭೆ ಚುನಾವಣೆಯಲ್ಲಿ ಗೆದ್ದು ಬಿಜೆಪಿ ಸೇರುತ್ತೇನೆ ಎಂದು ಪಕ್ಷೇತರ ಅಭ್ಯರ್ಥಿ ಕೆ.ಎಸ್.ಈಶ್ವರಪ್ಪ ಹೇಳಿದ್ದಾರೆ. ಅವರು ಇಂದು ನಗರದಲ್ಲಿ ಸುದ್ದಿಗಾರರ ಜೊತೆಗೆ ಮಾತನಾಡುತ್ತ ಈ ಬಗ್ಗೆ ತಿಳಿಸಿದರು. ಇದೇ ವೇಳೆ ಅವರು ಮಾತನಾಡಿ, ಮಾಜಿ ಸಿಎಂ ಯಡಿಯೂರಪ್ಪ ಮತ್ತು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ (ಅಪ್ಪ-ಮಕ್ಕಳ) ಕುತಂತ್ರದಿಂದ ನನ್ನನ್ನು ಬಿಜೆಪಿಯಿಂದ ಉಚ್ಚಾಟನೆ ಮಾಡಲಾಗಿದೆಅಂತತಿಳಿಸದಿರು.
ಇನ್ನೂ ಇದೇ ವೇಳೇ ಅವರು ಮಾತನಾಡುತ್ತ, ಲೋಕಸಭೆ ಚುನಾವಣೆ ಬಳಿಕ ವಿಜಯೇಂದ್ರ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಲಿದ್ದಾರೆ. ಇದೊಂದು ಸಮಸ್ಯೆ ನಿವಾರಣೆ ಆದಂತಾಗಲಿದೆ. ಇನ್ನೂ ನಾನು ಗೆದ್ದ ಕೂಡಲೇ ವಿಜಯೇಂದ್ರನ ಅಪ್ಪ ಯಡಿಯೂರಪ್ಪ (Yediyurappa) ಬಂದು ಬಿಜೆಪಿಗೆ ಕರೆದುಕೊಂಡು ಹೋಗಲಿದ್ದಾರೆ ಎಂದು ತಿಳಿಸಿದರು.