ಬೆಂಗಳೂರು: ಬಿಕ್ಲು ಶಿವ ಕೊಲೆ ಕೇಸಲ್ಲಿ ಬಂಧನಕ್ಕೆ ಒಳಗಾಗಿ ಸಿಐಟಿ ವಶದಲ್ಲಿರುವಂತ ಬಿಜೆಪಿ ಶಾಸಕ ಭೈರತಿ ಬಸವರಾಜ್ ಮನೆಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಭೇಟಿ ನೀಡಿದರು. ಈ ವೇಳೆ ಭೈರತಿ ಬಸವರಾಜ್ ಕುಟುಂಬಸ್ಥರಿಗೆ ಧೈರ್ಯವನ್ನು ತುಂಬಿದರು.
ಇಂದು ಬೆಂಗಳೂರಿನ ಕೆ ಆರ್ ಪುರಂ ಶಾಸಕರು ಹಾಗೂ ಮಾಜಿ ಸಚಿವರಾದ ಬೈರತಿ ಬಸವರಾಜ್ ಅವರ ಮನೆಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಭೇಟಿ ನೀಡಿ ಕುಟುಂಬಸ್ಥರಿಗೆ ಧೈರ್ಯ ತುಂಬಿದರು.
ಈ ಸಂದರ್ಭದಲ್ಲಿ ಮಾಜಿ ಉಪಮುಖ್ಯಮಂತ್ರಿಗಳಾದ ಗೋವಿಂದ್ ಕಾರಜೋಳ ರಾಜ್ಯ ಪ್ರಧಾನ ಕಾರ್ಯದರ್ಶಿಗಳಾದ ಪ್ರೀತಮ್ ಗೌಡ, ರಾಜ್ಯ ಕಾರ್ಯದರ್ಶಿಗಳಾದ ಶರಣು ತಲ್ಲಿಕೆರೆ, ಬೆಂಗಳೂರು ಉತ್ತರ ಜಿಲ್ಲಾಧ್ಯಕ್ಷರಾದ ಎಸ್ ಹರೀಶ್, ಮಾಜಿ ಸಚಿವರಾದ ವರ್ತೂರು ಪ್ರಕಾಶ್, ಕೆ ಆರ್ ಪುರಂ ಅಧ್ಯಕ್ಷರಾದ ಮುನೇಗೌಡ. ಮುಖಂಡರಗಳಾದ ಸಚ್ಚಿದಾನಂದ ಮೂರ್ತಿ ಹಾಗೂ ಪ್ರಮುಖರು ಉಪಸ್ಥಿತರಿದ್ದರು.








