ಶಿವಮೊಗ್ಗ : ತಮ್ಮ ಮಗನಿಗೆ ಲೋಕಸಭೆಯ ಟಿಕೆಟ್ ಕೊಡಿಸಿಲ್ಲ ಎಂಬ ಕಾರಣಕ್ಕೆ ಸ್ವಪಕ್ಷದ ವಿರುದ್ಧವೇ ಬಂಡಾಯ ವೆದಿರುವ ಕೆ ಎಸ್ ಈಶ್ವರಪ್ಪ ಅವರು ಇದೀಗ ಯಡಿಯೂರಪ್ಪ ಅವರ ಮೇಲೆ ಮತ್ತೆ ವಾಗ್ದಾಳಿ ನಡೆಸಿದ್ದು ಲೋಕಸಭೆ ಚುನಾವಣೆಯ ನಂತರ ರಾಜ್ಯ ಬಿಜೆಪಿ ಘಟಕ ಅಧ್ಯಕ್ಷ ಸ್ಥಾನಕ್ಕೆ ವಿಜಯೇಂದ್ರ ರಾಜೀನಾಮೆ ನೀಡಲಿದ್ದಾರೆ ಎಂದು ಭವಿಷ್ಯ ನುಡಿದಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು,ರಾಜ್ಯ ಬಿಜೆಪಿ ಘಟಕದ ಅಧ್ಯಕ್ಷ ಸ್ಥಾನ ಆರು ತಿಂಗಳ ಕಾಲ ಖಾಲಿ ಖಾಲಿ ಇತ್ತು, ಬಿಎಸ್ ಯಡಿಯೂರಪ್ಪ ಹಠಕ್ಕೆ ಬಿದ್ದು ವಿಜಯೇಂದ್ರಗೆ ರಾಜ್ಯಾಧ್ಯಕ್ಷ ಸ್ಥಾನವನ್ನು ಕೊಡಿಸಿದ್ದಾರೆ ಎಂದು ಶಿವಮೊಗ್ಗದಲ್ಲಿ ಮಾಜಿ ಉಪಮುಖ್ಯಮಂತ್ರಿ ಕೆ ಎಸ್ ಈಶ್ವರಪ್ಪ ಹೇಳಿಕೆ ನೀಡಿದರು.
ಲೋಕಸಭೆ ಚುನಾವಣೆಯ ಬಳಿಕ ವಿಜಯೇಂದ್ರ ರಾಜೀನಾಮೆ ನೀಡುತ್ತಾರೆ.ಚುನಾವಣೆ ಬಳಿಕ ಬದಲಾವಣೆ ಭವಿಷ್ಯ ನೋಡಿದ ಕೆ ಎಸ್ ಈಶ್ವರಪ್ಪ ಲೋಕಸಭೆ ಚುನಾವಣೆಯಲ್ಲಿ ನನಗೆ ಗೆಲುವು ಸಿಗಲಿದೆ ಎಂದು ಶಿವಮೊಗ್ಗದಲ್ಲಿ ಮಾಜಿ ಉಪಮುಖ್ಯಮಂತ್ರಿ ಕೆ ಸಿ ಈಶ್ವರಪ್ಪ ತಿಳಿಸಿದರು.