Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING: ಗ್ರಾಹಕರಿಗೆ ಶಾಕ್ ನೀಡಿದ ಅಮೂಲ್: ನಾಳೆಯಿಂದ ದೇಶಾದ್ಯಂತ ಹಾಲಿನ ದರ ಲೀಟರ್‌ಗೆ 2 ರೂಪಾಯಿ ಏರಿಕೆ | Amul

BREAKING: ಗ್ರಾಹಕರಿಗೆ ‘ಅಮುಲ್’ ಶಾಕ್: ನಾಳೆಯಿಂದ ಹಾಲಿನ ದರ ಲೀಟರ್‌ಗೆ 2 ರೂಪಾಯಿ ಏರಿಕೆ | Amul Milk Price Hike

ದೇಶಕ್ಕಾಗಿ ಪ್ರಧಾನಿ ಮೋದಿ ಮಾದರಿ ಹೆಜ್ಜೆ: ಇಂಧನ ಉಳಿಸಲು 12ರ ಬದಲಿಗೆ ಕೇವಲ 2 ಕಾರುಗಳಲ್ಲಿ ಸಂಚಾರ | Watch video

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ವಿಕ್ರಂ ಗೌಡ ಎನ್ ಕೌಂಟರ್ ನಕಲಿ ಅಲ್ಲ; ನ್ಯಾಯಾಂಗ ತನಿಖೆ ಅವಶ್ಯಕತೆ ಇಲ್ಲ – ಸಚಿವೆ ಲಕ್ಷ್ಮೀ ಹೆಬ್ಬಾಳಕರ್
KARNATAKA

ವಿಕ್ರಂ ಗೌಡ ಎನ್ ಕೌಂಟರ್ ನಕಲಿ ಅಲ್ಲ; ನ್ಯಾಯಾಂಗ ತನಿಖೆ ಅವಶ್ಯಕತೆ ಇಲ್ಲ – ಸಚಿವೆ ಲಕ್ಷ್ಮೀ ಹೆಬ್ಬಾಳಕರ್

By ವಸಂತ ಬಿ ಈಶ್ವರಗೆರೆ

ಉಡುಪಿ: ನಕ್ಸಲ್ ವಿಕ್ರಂ ಗೌಡ ಎನ್‌ಕೌಂಟರ್ ನಕಲಿ ಅಲ್ಲ. ಎನ್‌ಕೌಂಟರ್ ನಕಲಿ ಎಂದು ಅನುಮಾನ ಪಡುವುದು ಬೇಡ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವರು ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಸ್ಪಷ್ಟಪಡಿಸಿದ್ದಾರೆ.

ಉಡುಪಿಯ ಗೃಹ ಕಚೇರಿಯಲ್ಲಿ ಶನಿವಾರ ಮಾತನಾಡಿದ ಸಚಿವರು, ಎನ್ ಕೌಂಟರ್ ಕುರಿತು ನ್ಯಾಯಾಂಗ ತನಿಖೆಯ ಅವಶ್ಯಕತೆ ಇಲ್ಲ. ಅಗತ್ಯವಿದ್ದರೆ ಮುಖ್ಯಮಂತ್ರಿ ಹಾಗೂ ಗೃಹ ಸಚಿವರೊಂದಿಗೆ ಚರ್ಚೆ ನಡೆಸಲಾಗುವುದು ಎಂದರು.

ಕಾನೂನು ಪ್ರಕಾರ ಕಾನೂನು ಚೌಕಟ್ಟಿನಲ್ಲಿ ಪೊಲೀಸರು ಕ್ರಮ ಕೈಗೊಂಡಿದ್ದಾರೆ. ವಿಕ್ರಮ್ ಗೌಡ ವಿರುದ್ಧ ಹಲವು ಪ್ರಕರಣಗಳು ಇದ್ದವು. ನಕ್ಸಲೇಟ್ ಗಳನ್ನು ಕಟ್ಟಿ ಹಾಕಬೇಕು ಎಂಬುದು ಸರ್ಕಾರದ ನಿರ್ಧಾರ. ಕೂಂಬಿಂಗ್ ಮಾಡುವ ಸಂದರ್ಭದಲ್ಲಿ ಈ ಘಟನೆ ನಡೆದಿದೆ. ವಿಕ್ರಂ ಗೌಡ ಬಳಿ ಕೂಡ ಶಸ್ತ್ರಾಸ್ತ್ರಗಳು ಇದ್ದವು. ವಿಕ್ರಂ ಗೌಡ ಒಂದು ಬಾರಿ ಫೈರಿಂಗ್ ಮಾಡಿದ್ದರಿಂದ ಪ್ರತಿ ದಾಳಿ ಮಾಡದಿದ್ದರೆ ಪೊಲೀಸರ ಜೀವಕ್ಕೆ ಹಾನಿ ಆಗುತ್ತಿತ್ತು ಎಂದರು.

ನಕ್ಸಲೈಟನ್ನು ಬೇರು ಸಮೇತ ಕಿತ್ತು ಹಾಕಬೇಕು. ಇದು ರಾಜ್ಯ ಸರ್ಕಾರ ಮತ್ತು ಕೇಂದ್ರ ಸರ್ಕಾರದ ನಿಲುವು. ಪರ ವಿರೋಧ ಚರ್ಚೆ ಎಲ್ಲಾ ಸಂದರ್ಭದಲ್ಲಿ ಇರುತ್ತದೆ. ಸರ್ಕಾರ ಕಾನೂನು ಚೌಕಟ್ಟಿನಲ್ಲಿ ಕೆಲಸ ಮಾಡಿದೆ. ಸಂಶಯ ಇದ್ದವರಿಗೆ ನಾವು ಮತ್ತೆ ಸ್ಪಷ್ಟನೆ ಕೊಡಲು ತಯಾರಿದ್ದೇವೆ ಎಂದು ಹೇಳಿದರು.

ಕಾಂಗ್ರೆಸ್ ಪಕ್ಷದಲ್ಲಿ ಭಿನ್ನಮತ ಇಲ್ಲ

ಕಾಂಗ್ರೆಸ್ ನಲ್ಲಿ ಯಾವುದೇ ಭಿನ್ನಮತ ಇಲ್ಲ.‌ ಭಿನ್ನಮತ ಇರೋದು ಬಿಜೆಪಿಯಲ್ಲಿ ಮಾತ್ರ. ಬಿಜೆಪಿ ಭಿನ್ನಮತದ ಬಗ್ಗೆ ಮಾಧ್ಯಮಗಳೇ ದಿನಾ ತೋರಿಸುತ್ತಿವೆ. ನಮ್ಮಲ್ಲಿ ಭಿನ್ನಮತ ಇಲ್ಲ ಅನ್ನೋದಕ್ಕೆ ಉಪಚುನಾವಣೆಯ ಫಲಿತಾಂಶವೇ ಉತ್ತರ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು.

ವಿಕಲ ಚೇತನರಿಗೆ ಅನುದಾನ ಕಡಿತ ಇಲ್ಲ

ವಿಕಲಾಂಗ ಚೇತನ ಹಾಗೂ ಹಿರಿಯ ನಾಗರೀಕ ಇಲಾಖೆಯ ಅನುದಾನ ಕಡಿತ ಮಾಡಲಾಗಿದೆಯೇ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿದ ಸಚಿವರು, ನಮ್ಮ ಇಲಾಖೆ 32 ಸಾವಿರ ಕೋಟಿಗಿಂತ ಹೆಚ್ಚಿನ ಗಾತ್ರದ ಬಜೆಟ್ ಹೊಂದಿದೆ. ಮಹಿಳಾ ಮತ್ತು ಮಕ್ಕಳ ಕಲ್ಯಾಣ, ವಿಕಲಾಂಗ ಚೇತನ ಯಾವುದೇ ಅನುದಾನವನ್ನು ನಾವು ಕಡಿತ ಮಾಡುವುದಿಲ್ಲ ಎಂದರು.

ಬಳ್ಳಾರಿ ಜಿಲ್ಲಾಡಳಿತದೊಂದಿಗೆ ಸಂಪರ್ಕ

ಬಳ್ಳಾರಿ ಸರ್ಕಾರಿ ಆಸ್ಪತ್ರೆಯಲ್ಲಿ ಗರ್ಭಿಣಿ ಬಾಣಂತಿ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಸಚಿವರು, ಇಂದು ಸಂಜೆ 4 ಗಂಟೆಗೆ ಮುಖ್ಯಮಂತ್ರಿಗಳ ನೇತೃತ್ವದಲ್ಲಿ ಸಭೆ ನಡೆಯಲಿದೆ. ನಾನು ಮತ್ತು ಆರೋಗ್ಯ ಸಚಿವರಾದ ದಿನೇಶ್ ಗುಂಡೂರಾವ್ ಬಳ್ಳಾರಿ ಜಿಲ್ಲಾಡಳಿತದೊಂದಿಗೆ ಸಂಪರ್ಕದಲ್ಲಿದ್ದೇವೆ ಎಂದು ತಿಳಿಸಿದರು.

ಬಳ್ಳಾರಿಗೆ ಭೇಟಿ ಕೊಟ್ಟಿಲ್ಲ ಎಂದರೆ, ಈ ಪ್ರಕರಣವನ್ನು ಹಗುರವಾಗಿ ಪರಿಗಣಿಸಿದ್ದೇವೆ ಎಂದಲ್ಲ.‌ ಸರ್ಕಾರಕ್ಕೆ ಮತ್ತು ಮಂತ್ರಿಗಳಿಗೆ ಬಹಳ ಜವಾಬ್ದಾರಿ ಇದೆ. ತಪ್ಪಿತಸ್ಥರ ವಿರುದ್ಧ ಸ್ಥಳದಲ್ಲೇ ನಿರ್ಧಾರ ಕೈಗೊಳ್ಳಲಾಗುವುದು ಎಂದರು.

ಮಾಧ್ಯಮಗಳಲ್ಲಿ ಮಾತ್ರ ಸಚಿವ ಸಂಪುಟ‌ ವಿಸ್ತರಣೆ

ಸಚಿವ ಸಂಪುಟ ವಿಸ್ತರಣೆಯ ಚರ್ಚೆ ಕಾಂಗ್ರೆಸ್ ನಲ್ಲಿ ಇಲ್ಲ.‌ ಮಾಧ್ಯಮಗಳಲ್ಲಿ ಮಾತ್ರ ಈ ಬಗ್ಗೆ ಚರ್ಚೆ ಇತ್ತು. ಸಂಪುಟ ವಿಸ್ತರಣೆ ನಿಜಾನಾ ಸುಳ್ಳ ಅಂತ ನೀವೇ (ಮಾಧ್ಯಮದವರು) ಸ್ಪಷ್ಟಪಡಿಸಬೇಕು. ಯಾರನ್ನು ತೆಗಿತೀರಾ? ಯಾರನ್ನು ಕೂರಿಸ್ತೀರಾ?ಹೊಸದಾಗಿ ಪ್ರಮಾಣವಚನ ಎಂದು ಹೇಳುತ್ತೀರಿ. ಈ ಚರ್ಚೆಗೆ ಮಾಧ್ಯಮಗಳೇ ಸ್ಪಷ್ಟನೆಯನ್ನು ಕೊಡಬೇಕು. ವಿರೋಧ ಪಕ್ಷದ ಒಳಗಿನ ಗಲಾಟೆ ನಮಗೆ ಅನುಕೂಲವಾಗುತ್ತದೆ ಎಂದರು‌‌.

ಕಳಪೆ ಆಹಾರ ಪೂರೈಸಿದರೆ ಕ್ರಮ

ರಾಜ್ಯದಲ್ಲಿ ಅಂಗನವಾಡಿಗೆ 50 ವರ್ಷದ ಇತಿಹಾಸವಿದೆ.‌ 70 ಸಾವಿರ ಅಂಗನವಾಡಿಯಲ್ಲಿ 35 ಲಕ್ಷ ಮಕ್ಕಳ ಪಾಲನೆ ಮಾಡಲಾಗುತ್ತದೆ. ಅಂಗನವಾಡಿಗಳಲ್ಲಿ ಕಳಪೆ ಅಕ್ಕಿ ವಿತರಣೆ, ಆಹಾರ ನೀಡಿದರೆ ಕ್ರಮ ಕೈಗೊಳ್ಳಲಾಗುವುದು ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಎಚ್ಚರಿಕೆ ನೀಡಿದರು.

ಫೆಂಗಲ್ ಚಂಡಮಾರುತ: ಚೆನ್ನೈ ವಿಮಾನ ನಿಲ್ದಾಣ ಸೇವೆ ತಾತ್ಕಾಲಿಕವಾಗಿ ಸ್ಥಗಿತ | Cyclone Fengal

BIG NEWS : ಯಾರು ಕಣ್ಣೀರು ಹಾಕಬಾರದು, ನಾವು ಸತ್ತಿಲ್ಲ ಸೋತಿದ್ದೇವೆ ಅಷ್ಟೇ : ನಿಖಿಲ್ ಕುಮಾರಸ್ವಾಮಿ ಹೇಳಿಕೆ

Share. Facebook Twitter LinkedIn WhatsApp Email

Related Posts

BIG BREAKING: ರಾಜ್ಯ ಸರ್ಕಾರದಿಂದ ‘ಶಾಲಾ-ಕಾಲೇಜು’ಗಳಲ್ಲಿ ‘ಹಿಜಾಬ್ ನಿಷೇಧ’ ಆದೇಶ ವಾಪಾಸ್

2 Mins Read

ರಾಜ್ಯ ಸರ್ಕಾರದಿಂದ 87 ಪೊಲೀಸ್ ಇನ್ಸ್‌ಪೆಕ್ಟರ್‌ಗಳ ಸ್ಥಳ ನಿಯುಕ್ತಿಗೊಳಿಸಿ ಆದೇಶ

6 Mins Read

ಕೋರ್ಟ್ ನಿರ್ದೇಶನದಂತೆ GBA ಪಾಲಿಕೆಗಳ ಚುನಾವಣೆ: ಡಿಸಿಎಂ ಡಿ.ಕೆ. ಶಿವಕುಮಾರ್ ಘೋಷಣೆ

1 Min Read
Recent News

BREAKING: ಗ್ರಾಹಕರಿಗೆ ಶಾಕ್ ನೀಡಿದ ಅಮೂಲ್: ನಾಳೆಯಿಂದ ದೇಶಾದ್ಯಂತ ಹಾಲಿನ ದರ ಲೀಟರ್‌ಗೆ 2 ರೂಪಾಯಿ ಏರಿಕೆ | Amul

BREAKING: ಗ್ರಾಹಕರಿಗೆ ‘ಅಮುಲ್’ ಶಾಕ್: ನಾಳೆಯಿಂದ ಹಾಲಿನ ದರ ಲೀಟರ್‌ಗೆ 2 ರೂಪಾಯಿ ಏರಿಕೆ | Amul Milk Price Hike

ದೇಶಕ್ಕಾಗಿ ಪ್ರಧಾನಿ ಮೋದಿ ಮಾದರಿ ಹೆಜ್ಜೆ: ಇಂಧನ ಉಳಿಸಲು 12ರ ಬದಲಿಗೆ ಕೇವಲ 2 ಕಾರುಗಳಲ್ಲಿ ಸಂಚಾರ | Watch video

BREAKING: ಸಾರಿಗೆ ವಾಹನಗಳಿಗೆ ಸ್ಪೀಡ್ ಗವರ್ನರ್, ಟ್ರ್ಯಾಕಿಂಗ್ ಸಾಧನ ಕಡ್ಡಾಯ; ಸುಪ್ರೀಂ ಕೋರ್ಟ್

State News
KARNATAKA

BIG BREAKING: ರಾಜ್ಯ ಸರ್ಕಾರದಿಂದ ‘ಶಾಲಾ-ಕಾಲೇಜು’ಗಳಲ್ಲಿ ‘ಹಿಜಾಬ್ ನಿಷೇಧ’ ಆದೇಶ ವಾಪಾಸ್

By ವಸಂತ ಬಿ ಈಶ್ವರಗೆರೆ KARNATAKA 2 Mins Read

ಬೆಂಗಳೂರು: ರಾಜ್ಯದ ಶಾಲಾ-ಕಾಲೇಜುಗಳಲ್ಲಿ ಏಕರೂಪತೆ, ಸಮಾನತೆ ಮತ್ತು ಜಾತ್ಯತೀತತೆಯನ್ನು ಕಾಯ್ದುಕೊಳ್ಳುವ ನಿಟ್ಟಿನಲ್ಲಿ ಕರ್ನಾಟಕ ಸರ್ಕಾರವು ಮಹತ್ವದ ನಿರ್ಧಾರವೊಂದನ್ನು ತೆಗೆದುಕೊಂಡಿದೆ. ದಿನಾಂಕ…

ರಾಜ್ಯ ಸರ್ಕಾರದಿಂದ 87 ಪೊಲೀಸ್ ಇನ್ಸ್‌ಪೆಕ್ಟರ್‌ಗಳ ಸ್ಥಳ ನಿಯುಕ್ತಿಗೊಳಿಸಿ ಆದೇಶ

ಕೋರ್ಟ್ ನಿರ್ದೇಶನದಂತೆ GBA ಪಾಲಿಕೆಗಳ ಚುನಾವಣೆ: ಡಿಸಿಎಂ ಡಿ.ಕೆ. ಶಿವಕುಮಾರ್ ಘೋಷಣೆ

BREAKING : ವೀರಶೈವ ಲಿಂಗಾಯತ ಸಾಂಪ್ರದಾಯದಂತೆ ನಟ ದಿಲೀಪ್ ರಾಜ್ ಅಂತ್ಯಕ್ರಿಯೆ | Actor Dilip Raj

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.