ನವದೆಹಲಿ: ಪಾರ್ಶ್ವವಾಯುವಿಗೆ ತುತ್ತಾಗಿ, ಅನಾರೋಗ್ಯದಿಂದ ಚಿಕಿತ್ಸೆ ಪಡೆಯುತ್ತಿದ್ದಂತ ಬಾಲಿವುಡ್ ನಟಿ ಜಾಕ್ವೆಲಿನ್ ಫರ್ನಾಂಡಿಸ್ ತಾಯಿ ಕಿಮ್ ಅವರು ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ.
ಕಳೆದ ಕೆಲ ದಿನಗಳಿಂದ ನಟಿ ಜಾಕ್ವೆಲಿನ್ ಅವರ ತಾಯಿ ಅನಾರೋಗ್ಯದಿಂದ ಬಳಲುತ್ತಿದ್ದರು. ಹೀಗಾಗಿ ಅವರನ್ನು ಮಾರ್ಚ್.24ರಂದು ಮುಂಬೈನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಂತ ಅವರಿಗೆ ಪಾರ್ಶ್ವವಾಯುವಿಗೂ ತುತ್ತಾಗಿದ್ದರು.
ಐಸಿಯುನಲ್ಲಿಯೇ ಬಾಲಿವುಡ್ ನಟಿ ಜಾಕ್ವೆಲಿನ್ ಫರ್ನಾಂಡಿಸ್ ಅವರ ತಾಯಿ ಕಿಮ್ ಗೆ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೇ ಇಂದು ಚಿಕಿತ್ಸೆ ಫಲಿಸದೇ ಕಿಮ್ ವಿಧಿವಶರಾಗಿದ್ದಾರೆ. ಈ ಮೂಲಕ ಇನ್ನಿಲ್ಲವಾಗಿದ್ದಾರೆ. ಕಿಮ್ ನಿಧನಕ್ಕೆ ಬಾಲಿವುಡ್ ಚಿತ್ರರಂಗದ ಗಣ್ಯರು ಸಂತಾಪ ಸೂಚಿಸಿದ್ದಾರೆ.
ಬಿಜೆಪಿ ಸ್ಥಾಪನೆ ಹಿಂದೆ ಅನೇಕ ಮಹನೀಯರ ಪರಿಶ್ರಮ, ತ್ಯಾಗ, ಬಲಿದಾನ: ಬಿವೈ ವಿಜಯೇಂದ್ರ