ತುಮಕೂರು : ಗ್ಯಾರಂಟಿ ಯೋಜನೆಯಿಂದ ಹಳ್ಳಿಯ ತಾಯಂದಿರು ದಾರಿ ತಪ್ಪಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ವಿವಾದಾತ್ಮಕ ಹೇಳಿಕೆಯನ್ನು ನೀಡಿದ್ದಾರೆ.ತುಮಕೂರು ಜಿಲ್ಲೆಯ ತುರುವೇಕೆರೆಯಲ್ಲಿ ಬಿಜೆಪಿ ಅಭ್ಯರ್ಥಿ ವಿ ಸೋಮಣ್ಣ ಅವರ ಪರವಾಗಿ ಪ್ರಚಾರದ ವೇಳೆ ಎಚ್ ಡಿ ಕುಮಾರಸ್ವಾಮಿ ಈ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.
ವಿ.ಸೋಮಣ್ಣ ಪರ ಪ್ರಚಾರ ಭಾಷಣದಲ್ಲಿ ಮಾತನಾಡಿದ ಅವರು, ಗ್ಯಾರಂಟಿಗಾಗಿ ಯಾವ ಜೇಬಿಗೆ ಕೈ ಹಾಕಿದ್ದಾರೆ ಎಂದು ಹೇಳುತ್ತಾ, ಇವತ್ತಿನ ಸರ್ಕಾರ ಕಳೆದ ಚುನಾವಣೆಯಲ್ಲಿ ಐದು ಗ್ಯಾರಂಟಿ ಘೋಷಣೆ ಮಾಡಿ ನನ್ನ ಹಳ್ಳಿಯ ತಾಯಂದಿರು ಸ್ವಲ್ಪ ದಾರಿ ತಪ್ಪಿದ್ದಾರೆ. ಅವರ ಬದುಕು ಏನಾಗಬೇಕು ಎಂದು ಯೋಚನೆ ಮಾಡಬೇಕಿದೆ ಎಂದಿದ್ದಾರೆ.
ಗಮನವಿಟ್ಟು ಎರಡು ಮಾತು ಕೇಳಬೇಕೆಂದು ಹೇಳಿದ ಹೆಚ್ಡಿ ಕುಮಾರಸ್ವಾಮಿ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಐದು ಗ್ಯಾರಂಟಿಗಳನ್ನು ಘೋಷಿಸಿತ್ತು ನನ್ನ ಹಳ್ಳಿಯ ತಾಯಂದಿರು ಸ್ವಲ್ಪ ದಾರಿ ತಪ್ಪಿದ್ದಾರೆ ಅವರ ಬದುಕು ಏನಾಗಬೇಕು ಎಂದು ಯೋಚನೆ ಮಾಡಬೇಕಿದೆ. ನಿಮ್ಮ ಕುಟುಂಬದ ಬದುಕು ಏನಾಗಬೇಕೆಂದು ಯೋಚನೆ ಮಾಡಬೇಕು. ಅವರಿಗೆ ಐದು ಗ್ಯಾರಂಟಿ ಬಿಟ್ಟು ಬೇರೆ ಏನಿಲ್ಲ ಎಂದು ತುಮಕೂರು ಜಿಲ್ಲೆಯ ತುರುವೇಕೆರೆಯಲ್ಲಿ ಎಚ್ ಡಿ ಕುಮಾರಸ್ವಾಮಿ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.