ಧಾರವಾಡ : ಧಾರವಾಡ ಜಿಲ್ಲೆಯ ವಿವಿಧ ತಾಲೂಕುಗಳಲ್ಲಿನ ಗ್ರಾಮ ಪಂಚಾಯಿತಿ ವ್ಯಾಪ್ತಿಗಳಲ್ಲಿ ಖಾಲಿ ಇರುವ ಗ್ರಾಮ ಒನ್ ಕೇಂದ್ರದ ಫ್ರಾಂಚೈಸಿಗಳಿಗಾಗಿ ಅರ್ಜಿ ಆಹ್ವಾನಿಸಲಾಗಿದೆ.
ಧಾರವಾಡ ತಾಲೂಕಿನ ಚಿಕ್ಕಮಲ್ಲಿಗವಾಡ ಮತ್ತು ನರೇಂದ್ರ ಗ್ರಾಮಪಂಚಾಯಿತಿ ಕೇಂದ್ರ, ಅಳ್ನಾವರ ತಾಲೂಕಿನ ಅರವಟಗಿ ಗ್ರಾಮಪಂಚಾಯಿತಿ ಕೇಂದ್ರ, ಕಲಘಟಗಿ ತಾಲೂಕಿನ ಸೂರಶೆಟ್ಟಿಕೊಪ್ಪ ಗ್ರಾಮಪಂಚಾಯಿತಿಗಳ ವ್ಯಾಪ್ತಿಯಲ್ಲಿ ಗ್ರಾಮ ಒನ್ ಕೇಂದ್ರದ ಫ್ರಾಂಚೈಸಿಗಳನ್ನು ಆರಂಭಿಸಲು ಅರ್ಜಿ ಆಹ್ವಾನಿಸಲಾಗಿದೆ.
ಆಸಕ್ತರು ಅರ್ಜಿ ಸಲ್ಲಿಸಲು ಪಿಯುಸಿ, ಐಟಿಐ, ಡಿಪ್ಲೋಮಾ, ಪದವಿ, ಸ್ನಾತ್ತಕೋತ್ತರ ಪದವಿಯೊಂದಿಗೆ ಕಂಪ್ಯೂಟರ್ ಜ್ಞಾನ ಹೊಂದಿರಬೇಕು. ಗ್ರಾಮ ಒನ ಕೇಂದ್ರ ಸ್ಥಾಪಿಸಲು ಕನಿಷ್ಟ 100 ಚದರ ಅಡಿ ವಿಸ್ತೀರ್ಣವುಳ್ಳ ಸುಸಜ್ಜಿತ ಕಟ್ಟಡದೊಂದಿಗೆ ಕಂಪ್ಯೂಟರ್, ಪ್ರಿಂಟರ್, ಸ್ಕ್ಯಾನರ್, ಬಯೋಮೆಟ್ರಿಕ್ ಡಿವೈಸ್, ಮತ್ತು 8 ಗಂಟೆಗಳ ವಿದ್ಯುತ್ ಪರ್ಯಾಯ ವ್ಯವಸ್ಥೆ ಇರಬೇಕು. ಇಲಾಖೆ ಕಾಲ ಕಾಲಕ್ಕೆ ಸೂಚಿಸುವ ಮಾನದಂಡಗಳಿಗೆ ಬದ್ಧರಾಗಿರುವವರು ಡಿಸೆಂಬರ 15, 2024 ರೊಳಗಾಗಿ ಅರ್ಜಿ ಸಲ್ಲಿಸಬಹುದು.
ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ: 9019026687, 9019026697, 9019026690, 9019027696 ಗೆ ಸಂಪರ್ಕಿಸಬಹುದು ಎಂದು ಅಪರ ಜಿಲ್ಲಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಸ್ವ ಉದ್ಯೋಗಾಕಾಂಕ್ಷಿಗಳ ಗಮನಕ್ಕೆ: ಡ್ರೋನ್ ತರಬೇತಿಗಾಗಿ ಅರ್ಜಿ ಆಹ್ವಾನ
BIG NEWS: ಕರ್ನಾಟಕ SSLC, ದ್ವಿತೀಯ PUC ಪರೀಕ್ಷೆ-1ರ ತಾತ್ಕಾಲಿಕ ವೇಳಾಪಟ್ಟಿ ಪ್ರಕಟ: ಹೀಗಿದೆ ವಿಷಯವಾರು ಪರೀಕ್ಷೆ