ಮೈಸೂರು : ಶಾಲೆಯಲ್ಲೇ ವಿದ್ಯಾರ್ಥಿನಿ ಜೊತೆಗೆ ಪಾಠ ಹೇಳಿಕೊಡಬೇಕಾದ ಮುಖ್ಯ ಶಿಕ್ಷಕ ರೊಮ್ಯಾನ್ಸ್ ಮಾಡುತ್ತಿರುವ ದೃಶ್ಯ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದ್ದು, ಪೋಲಿ ಶಿಕ್ಷಕ ವಿರುದ್ದ ಈಗ ಜನತೆ ಕಿಡಿಕಾರುತ್ತಿದ್ದಾರೆ.
ಮೈಸೂರು ಜಿಲ್ಲೆ ಹೆಚ್.ಡಿ. ಕೋಟೆ ತಾಲೂಕಿನ ಶಾಲೆಯೊಂದರಲ್ಲಿ ಶಿಕ್ಷಕನೊಬ್ಬ ವಿದ್ಯಾರ್ಥಿನಿ ಜೊತೆಗೆ ರಾಸಲೀಲೆಯಲ್ಲಿ ನಿರತನಾಗಿರುವ ವಿಡಿಯೋವೊಂದು ಈಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಈ ನಡುವೆ ಈ ವಿಡಿಯೋವನ್ನು ಶಾಲೆಯ ಹಿರಿಯ ವಿದ್ಯಾರ್ಥಿಗಳೇ ಹರಿ ಬಿಟ್ಟಿದ್ದಾರೆ ಎನ್ನಲಾಗಿದೆ. ಇನ್ನೂ ಈ ನಡುವೆ ವೀಡಿಯೋ ವೈರಲ್ ಆದ ಹಿನ್ನೆಲೆ ಕ್ಷೇತ್ರ ಶಿಕ್ಷಣಾಧಿಕಾರಿಗೆ ದೂರು ನೀಡಲಾಗಿದ್ದು, ಘಟನೆ ಸಂಬಂಧ ಆಘಾತ ವ್ಯಕ್ತಪಡಿಸಿರುವ ಅವರು, ಶಾಲೆಗೆ ಭೇಟಿ ನೀಡಿ ಪರಿಶೀಲಿಸುವ ಭರವಸೆಯನ್ನು ನೀಡಿದ್ದಾರೆ ಎನ್ನಲಾಗಿದೆ.
ರಿಚರ್ಡ್ ಗೆರೆ ಮುತ್ತಿನ ಪ್ರಕರಣ :ಶಿಲ್ಪಶೆಟ್ಟಿಯನ್ನು ಆರೋಪದಿಂದ ಮುಕ್ತಗೊಳಿಸಿದ ಮುಂಬೈ ನ್ಯಾಯಾಲಯ