ರಾಯಚೂರು : ಪ್ರಜ್ವಲ್ ರೇವಣ್ಣ ಅವರ ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಯಚೂರಿನಲ್ಲಿ ಕೆಪಿಸಿಸಿ ಪ್ರಚಾರ ಸಮಿತಿಯ ರಾಜ್ಯಾಧ್ಯಕ್ಷ ಆಗಿರುವ ವಿನಯ್ ಕುಮಾರಸ್ವಾಮಿ ಅವರು ಎಚ್ ಡಿ ಕುಮಾರಸ್ವಾಮಿ ಅವರೇ ವಿಡಿಯೋ ಕೊಟ್ಟಿದ್ದು ಎಂದು ಗಂಭೀರವಾದಂತಹ ಆರೋಪ ಮಾಡಿದರು.
ರಾಯಚೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ವಿನಯ್ ಕುಮಾರ್ ಸೊರಕೆ ಅವರು, ಪ್ರಕರಣಕ್ಕೆ ಸಂಬಂಧಿಸಿದಂತೆ ಎಚ್ ಡಿ ಕುಮಾರಸ್ವಾಮಿ ಅವರೇ ವಿಡಿಯೋ ಕೊಟ್ಟಿದ್ದು ಎಂದು ರಾಯಚೂರಿನಲ್ಲಿ ಕೆಪಿಸಿಸಿ ಪ್ರಚಾರ ಸಮಿತಿಯ ರಾಜ್ಯಾಧ್ಯಕ್ಷ ವಿನಯ್ ಕುಮಾರ್ ಸೊರಕೆ ಆರೋಪ ಮಾಡಿದರು.
ಹಾಸನ, ಮಂಡ್ಯ ಹಾಗೂ ಕೋಲಾರದಲ್ಲಿ ಮೈತ್ರಿ ಅಭ್ಯರ್ಥಿ ಗೆಲುವು ಕಷ್ಟವಾಗಿದೆ. ಅಲ್ಲದೆ ದೇವೇಗೌಡರ ಅಳಿಯ ಡಾ. ಮಂಜುನಾಥ್ ಕೂಡ ಬಿಜೆಪಿಯಿಂದ ಸ್ಪರ್ಧಿಸಿದ್ದಾರೆ. ನಾಲ್ಕು ಸ್ಥಾನ ಕಳೆದುಕೊಳ್ಳುವ ಮೂಲಕ ಜೆಡಿಎಸ್ ಮುಕ್ತವಾಗುತ್ತದೆ. ಆಗ ಕುಮಾರಸ್ವಾಮಿ ಜೆಡಿಎಸ್ ಗೆ ಕೊನೆ ಮೊಳೆ ಹೊಡಿತಾರೆ. ಬಿಜೆಪಿ ಜೊತೆ ಜೆಡಿಎಸ್ ವಿಲೀನ ಆಗುವ ಲಕ್ಷಣ ಕಾಣುತ್ತಿದೆ ಎಂದು ವಿನಯ್ ಕುಮಾರ್ ಸೊರಕೆ ತಿಳಿಸಿದರು.