ಬೆಂಗಳೂರು: ಪೊಲೀಸ್ ಇಲಾಖೆಯಲ್ಲಿ ಸೀನಿಯರಿಟಿ ಲೀಸ್ಟ್ ಉಲ್ಲಂಘನೆ ಆಗಿ ಪರಿಶಿಷ್ಠರಿಗೆ ಅನ್ಯಾಯ ಆಗುತ್ತಿದೆ. ಸಮಿತಿ ಮುಂದೆ ದೂರು ಬಂದು ನಾವು ಹಿರಿಯ ಅಧಿಕಾರಿಗಳ ಗಮನಕ್ಕೂ ತಂದರೂ ಸಮಸ್ಯೆ ಬಗೆಹರಿಸುತ್ತಿಲ್ಲ ಏಕೆ ? ADGP ಅಡ್ಮಿನ್ ಅವರು ಸರಿಯಾಗಿ ನಡೆದುಕೊಳ್ಳುತ್ತಿಲ್ಲ ಎಂದು ಸಂಸದ ಈ.ತುಕಾರಾಮ್ ಮತ್ತು ಶಾಸಕ ನರೇಂದ್ರಸ್ವಾಮಿ ಅವರು ಸಭೆಯ ಗಮನಕ್ಕೆ ತಂದರು. ಇದರಿಂದ ಅಸಮಾಧಾನಗೊಂಡ ಸಿಎಂ ಸಿದ್ಧರಾಮಯ್ಯ ಈ ವಿಚಾರವನ್ನು ಮುಂದಿನ ಕ್ಯಾಬಿನೆಟ್ ಗೆ ತರಲು ಸರ್ಕಾರದ ಮುಖ್ಯ ಕಾರ್ಯದರ್ಶಿ ಅವರಿಗೆ ಸೂಚಿಸಿದರು.
ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ರಾಜ್ಯ ಮಟ್ಟದ ಜಾಗೃತ ಮತ್ತು ಉಸ್ತುವಾರಿ ಸಮಿತಿ ಸಭೆಯ ನಡೆಸಿ ಮಾತನಾಡಿದಂತ ಅವರು, ಪೊಲೀಸ್ ಇಲಾಖೆಯಲ್ಲಿ ಸೀನಿಯರಿಟಿ ಲೀಸ್ಟ್ ಉಲ್ಲಂಘನೆ ಆಗಿ ಪರಿಶಿಷ್ಠರಿಗೆ ಅನ್ಯಾಯ ಆಗುತ್ತಿದೆ. ಸಮಿತಿ ಮುಂದೆ ದೂರು ಬಂದು ನಾವು ಹಿರಿಯ ಅಧಿಕಾರಿಗಳ ಗಮನಕ್ಕೂ ತಂದರೂ ಸಮಸ್ಯೆ ಬಗೆಹರಿಸುತ್ತಿಲ್ಲ ಏಕೆ ? ADGP ಅಡ್ಮಿನ್ ಅವರು ಸರಿಯಾಗಿ ನಡೆದುಕೊಳ್ಳುತ್ತಿಲ್ಲ ಎಂದು ಸಂಸದ ಈ.ತುಕಾರಾಮ್ ಮತ್ತು ಶಾಸಕ ನರೇಂದ್ರಸ್ವಾಮಿ ಅವರು ಸಭೆಯ ಗಮನಕ್ಕೆ ತಂದರು. ಇದರಿಂದ ಅಸಮಾಧಾನಗೊಂಡ ಸಿಎಂ ಈ ವಿಚಾರವನ್ನು ಮುಂದಿನ ಕ್ಯಾಬಿನೆಟ್ ಗೆ ತರಲು ಸರ್ಕಾರದ ಮುಖ್ಯ ಕಾರ್ಯದರ್ಶಿ ಅವರಿಗೆ ಸಿಎಂ ಸೂಚಿಸಿದರು.
ಬ್ಯಾಕ್ ಲಾಗ್ ಮತ್ತು ಬಡ್ತಿ ವಿಚಾರದಲ್ಲಿ ಆಗುತ್ತಿರುವ ಅನ್ಯಾಯಗಳನ್ನು ಸಬ್ ಕಮಿಟಿ ಪತ್ತೆ ಹಚ್ಚಿ ಸಮಸ್ಯೆಗಳನ್ನು ನಿಮ್ಮ ಗಮನಕ್ಕೆ ತಂದರೂ ಸಮಸ್ಯೆ ಬಗೆಹರಿಸದೆ ನಿರ್ಲಕ್ಷ್ಯ ತೋರಿಸುತ್ತಿದ್ದೀರಿ. ಹಾಗಾದರೆ ಸಬ್ ಕಮಿಟಿ ಕೊಡುವ ವರದಿಗಳಿಗೆ ಬೆಲೆ ಇಲ್ಲವೇ ಎಂದು ವಿಧಾನ ಪರಿಷತ್ ಸದಸ್ಯ ಸುಧಾಮ್ ದಾಸ್ ಅವರು ಸಭೆಯ ಗಮನಕ್ಕೆ ತಂದರು.
ಜಾತಿ ದೌರ್ಜನ್ಯ ದೂರು ಬಂದಾಗ ಪೊಲೀಸರೇ ಕೌಂಟರ್ ದೂರು ಪಡೆದು ಪ್ರಕರಣ ದುರ್ಬಲಗೊಳಿಸುವ ಬಗ್ಗೆ ದೂರುಗಳು ಬಂದರೆ ಅದನ್ನು ಸಹಿಸಲ್ಲ. ನಮ್ಮ ಗಮನಕ್ಕೆ ಬಂದರೆ ಸಂಬಂಧಪಟ್ಟವರ ವಿರುದ್ಧ ಕಠಿಣ ಕ್ರಮ ತಗೆದುಕೊಳ್ಳುವುದಾಗಿ ತಿಳಿಸಿದರು.
ಎಲ್ಲಾ ಇಲಾಖೆಗಳೂ ಬಡ್ತಿಯಲ್ಲಿ ಮೀಸಲಾತಿಯನ್ನು ಚಾಚೂ ತಪ್ಪದೆ ಪಾಲಿಸಬೇಕು. ಪರಿಶಿಷ್ಢ ಸಮುದಾಯದವರಿಗೆ ಅವಕಾಶ ತಪ್ಪಿಸಲು ಅಧಿಕಾರಿಗಳು ಕುಟಿಲ ನೀತಿ ಅನುಸರಿಸಿದರೆ ಸಹಿಸಲ್ಲ ಎಂದರು.
ದೇವದಾಸಿ ಪದ್ಧತಿ ಎಲ್ಲಾದರೂ ನಡೆದದ್ದು ಗಮನಕ್ಕೆ ಬಂದ್ರೆ SP-DC ವಿರುದ್ಧ ಕ್ರಮ: ಸಿಎಂ ಸಿದ್ಧರಾಮಯ್ಯ ಎಚ್ಚರಿಕೆ