ಅಚಲ್ಡಾ: ಉತ್ತರ ಪ್ರದೇಶದ ಔರೈಯಾ ಜಿಲ್ಲೆಯಲ್ಲಿ ತನ್ನ ಶಾಲೆಯ ಶಿಕ್ಷಕನಿಂದ ಥಳಿಸಲ್ಪಟ್ಟ 15 ವರ್ಷದ ದಲಿತ ಬಾಲಕನ ಸಾವನ್ನಪ್ಪಿರುವ ಘಟನೆ ನಡೆದಿದ್ದು, ಭಾರೀ ಪ್ರತಿಭಟನೆಗೆ ಕಾರಣವಾಗಿದೆ.

ಇಲ್ಲಿನ ಅಚಲ್ಡಾ ಪ್ರದೇಶದ ಆದರ್ಶ ಇಂಟರ್‌ ಕಾಲೇಜಿನಲ್ಲಿ ವ್ಯಾಸಾಂಗ ಮಾಡುತ್ತಿದ್ದ 15 ವರ್ಷದ ದಲಿತ ಬಾಲಕ ನಿಖಿತ್ ದೋಹ್ರೆ ಸೆಪ್ಟೆಂಬರ್ 7 ರಂದು ಸಮಾಜ ವಿಜ್ಞಾನ ಪರೀಕ್ಷೆಯಲ್ಲಿ ಒಂದು ಪದವನ್ನು ತಪ್ಪಾಗಿ ಬರೆದಿದ್ದಕ್ಕಾಗಿ ಮೇಲ್ಜಾತಿಗೆ ಸೇರಿದ ತನ್ನ ಶಾಲಾ ಶಿಕ್ಷಕ ಅಶ್ವಿನಿ ಸಿಂಗ್ ಬಾಲಕನನ್ನು ತೀವ್ರವಾಗಿ ಥಳಿಸಿದ್ದನು. ಈ ವೇಳೆ ಬಾಲಕನನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದ್ರೆ, ಚಿಕಿತ್ಸೆ ಫಲಕಾರಿಯಾಗದೇ ಬಾಲಕ ಸೋಮವಾರ ಮೃತಪಟ್ಟಿದ್ದಾನೆ.

ಶಿಕ್ಷಕ ಬಾಲಕನ ಚಿಕಿತ್ಸೆಗೆ ₹ 40,000 ನೀಡಿದ್ದು, ಪರಾರಿಯಾಗಿದ್ದಾನೆ. ಶಿಕ್ಷಕ ದೂರವಾಣಿ ಕರೆಗಳನ್ನು ಸ್ವೀಕರಿಸುತ್ತಿಲ್ಲ. ಶಿಕ್ಷಕನು ನನ್ನ ಮಗನನ್ನು ಜಾತಿ ನಿಂದನೆ ಮಾಡಿ ಥಳಿಸಿದ ಕಾರಣ ಆತ ಸಾವನ್ನಪ್ಪಿದ್ದಾನೆ ಎಂದು ಬಾಲಕನ ತಂದೆ ದೂರಿನಲ್ಲಿ ತಿಳಿಸಿದ್ದಾರೆ.

ಘಟನೆ ನಂತ್ರ ಆರೋಪಿ ಶಿಕ್ಷಕ ಪರಾರಿಯಾಗಿದ್ದಾನೆ. ಆತನನ್ನು ಬಂಧಿಸುವಂತೆ ಒತ್ತಾಯಿಸಿ ಪ್ರತಿಭಟಿಸಲಾಗುತ್ತಿದೆ. ಪ್ರತಿಭಟನೆಯು ಹಿಂಸಾಚಾರಕ್ಕೆ ತಿರುಗಿದ್ದು, ಕೋಪಗೊಂಡ ಕೆಲವು ಸ್ಥಳೀಯರು ಪೊಲೀಸ್ ಜೀಪಿಗೆ ಬೆಂಕಿ ಹಚ್ಚಿದ್ದಾರೆ. ಅಲ್ಲದೇ ಪೊಲೀಸ್ ಸಿಬ್ಬಂದಿ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ ಎನ್ನಲಾಗಿದೆ.

BIG NEWS: ಇಂದು HALನಲ್ಲಿ 208 ಕೋಟಿ ರೂ. ಮೌಲ್ಯದ ʻರಾಕೆಟ್ ಎಂಜಿನ್ ಉತ್ಪಾದನಾ ಘಟಕʼಕ್ಕೆ ರಾಷ್ಟ್ರಪತಿ ಮುರ್ಮು ಚಾಲನೆ |Droupadi Murmu

BIG NEWS: ಈ ಹೊಸ ತಂತ್ರಜ್ಞಾನದಿಂದ ಕೇವಲ 8 ನಿಮಿಷಗಳಲ್ಲಿ ʻಹೃದಯ ವೈಫಲ್ಯʼ ಪತ್ತೆ | new technology can detect heart failure

BIGG NEWS : ಹುಬ್ಳಳ್ಳಿಯಲ್ಲಿ ನಡೆದ `ಪೌರ ಸನ್ಮಾನ’ ಇಡೀ ಮಹಿಳಾ ವರ್ಗಕ್ಕೆ ಸಂದ ಸನ್ಮಾನ : ರಾಷ್ಟ್ರಪತಿ ದ್ರೌಪದಿ ಮುರ್ಮು

Share.
Exit mobile version