ಕೆ ಎನ್ ಎನ್ ಡಿಜಿಟಲ್ ಡೆಸ್ಕ್ : ಮೂನ್ ಲೈಟಿಂಗ್ ಕಾರಣ ವಿಪ್ರೋ ಕಂಪನಿ 300 ಉದ್ಯೋಗಿಗಳನ್ನು ವಜಾಗೊಳಿಸಿದೆ.
ಕಳೆದ ಕೆಲವು ತಿಂಗಳಿನಿಂದ ವಿಪ್ರೋದ ಸುಮಾರು 300 ಉದ್ಯೋಗಿಗಳು ತಮ್ಮ ಕಂಪನಿ ಜೊತೆಗೆ ಇತರೆ ಕಂಪನಿಗಳಲ್ಲಿ ಕೆಲಸ ಮಾಡುತ್ತಿರುವ ವಿಚಾರ ಬೆಳಕಿಗೆ ಬಂದ ಹಿನ್ನೆಲೆ ವಿಪ್ರೋ ಕಂಪನಿ 300 ಉದ್ಯೋಗಿಗಳನ್ನು ವಜಾಗೊಳಿಸಿದೆ.
ಅಂತಹ ಕೆಲಸ ಮಾಡುತ್ತಿರುವ ಉದ್ಯೋಗಿಗಳಿಗೆ ಕಂಪನಿಯಲ್ಲಿ ಸ್ಥಾನವಿಲ್ಲ ಎಂದು ರಿಷದ್ ಪ್ರೇಮ್ಜಿ ಸ್ಪಷ್ಟಪಡಿಸಿದರು, ಇಂದು ವಿಪ್ರೋದಲ್ಲಿ ಕೆಲಸ ಮಾಡುವವರು ಮತ್ತು ನಮ್ಮ ಪ್ರತಿಸ್ಪರ್ಧಿಯೊಬ್ಬರಿಗೆ ನೇರವಾಗಿ ಕೆಲಸ ಮಾಡುತ್ತಿದ್ದಾರೆ . ಕಳೆದ ಕೆಲವು ತಿಂಗಳುಗಳಲ್ಲಿ ನಿಖರವಾಗಿ 300 ಜನರನ್ನು ಕಂಡುಹಿಡಿಯಲಾಗಿದೆ. ಅಂತಹವರನ್ನು ವಜಾ ಮಾಡಲಾಗಿದೆ ಎಂದು ಸ್ಪಷ್ಟಪಡಿಸಿದರು.
ಒಂದು ಕಂಪನಿಯಲ್ಲಿ ಕೆಲಸ ಮಾಡುವ ಉದ್ಯೋಗಿಗಳು ತಮ್ಮ ಕೆಲಸದ ಅವಧಿ ಮುಗಿದ ನಂತರ ಮತ್ತೊಂದು ಕಂಪನಿಯಲ್ಲಿ ಕೆಲಸ ಮಾಡುವುದನ್ನು ಮೂನ್ ಲೈಟಿಂಗ್ ಎನ್ನುತ್ತಾರೆ.
‘ವಿಶ್ವವಿಖ್ಯಾತ ಮೈಸೂರು ದಸರಾ’ಗೆ ತೆರಳೋ ಪ್ರವಾಸಿಗರಿಗೆ ಗುಡ್ ನ್ಯೂಸ್: ‘ರೈಲ್ವೆ ವಸ್ತು ಸಂಗ್ರಹಾಲಯ’ ಸಮಯ ವಿಸ್ತರಣೆ