ಹೈದರಾಬಾದ್: ತೆಲಂಗಾಣದ ಸರ್ಕಾರಿ ಆಸ್ಪತ್ರೆಯೊಂದರಲ್ಲಿ ಮಹಿಳಾ ಸಿಬ್ಬಂದಿ ಮದ್ಯದ ಪಾರ್ಟಿ ಮಾಡಿರುವ ವೀಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ.
BIGG NEWS: ನ.1ರಂದು ಪುನೀತ್ ರಾಜ್ಕುಮಾರ್ ಗೆ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ; ಸಿಎಂ ಬಸವರಾಜ ಬೊಮ್ಮಾಯಿ
ತೆಲಂಗಾಣದ ಹನಮಕೊಂಡ ಜಿಲ್ಲೆಯ ಸರ್ಕಾರಿ ಹೆರಿಗೆ ಆಸ್ಪತ್ರೆಯಲ್ಲಿ ಈ ಘಟನೆ ನಡೆದಿದೆ. ಹನಮಕೊಂಡದ ಸರ್ಕಾರಿ ಹೆರಿಗೆ ಆಸ್ಪತ್ರೆಯಲ್ಲಿ ಮಹಿಳಾ ಸಿಬ್ಬಂದಿ ಆಸ್ಪತ್ರೆ ಆವರಣದಲ್ಲೇ ಕುಳಿತುಕೊಂಡು ಮದ್ಯ ಸೇವಿಸುತ್ತಿರುವ ದೃಶ್ಯವನ್ನು ರೋಗಿಯ ಸಂಬಂಧಿಯೊಬ್ಬರು ತಮ್ಮ ಮೊಬೈಲ್ನಲ್ಲಿ ಸೆರೆ ಹಿಡಿದು, ಸೋಶಿಯಲ್ ಮೀಡಿಯಾದಲ್ಲಿ ಶೇರ್ ಮಾಡಿಕೊಂಡಿದ್ದಾರೆ
BIGG NEWS: ನ.1ರಂದು ಪುನೀತ್ ರಾಜ್ಕುಮಾರ್ ಗೆ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ; ಸಿಎಂ ಬಸವರಾಜ ಬೊಮ್ಮಾಯಿ
ಈಗಾಗಲೇ ಈ ಮಹಿಳಾ ಸಿಬ್ಬಂದಿ ವಿರುದ್ಧ ಹಲವಾರು ದೂರುಗಳಿದೆ. ಈ ನಡುವೆ 12 ಗಂಟೆಯಾಗಿದೆ ಎಂಬ ಪ್ರಜ್ಞೆ ಕೂಡ ಇಲ್ಲದೇ ಆಸ್ಪತ್ರೆ ಆವರಣದಲ್ಲಿಯೇ ಬರ್ತ್ಡೇ ಮಾಡಿಕೊಂಡು ಎಣ್ಣೆ ಪಾರ್ಟಿ ಮಾಡಿದ್ದಾರೆ. ಮದ್ಯ ಸೇವಿಸಿ ಕರ್ತವ್ಯ ಕೂಡ ನಿರ್ವಹಿಸಲು ಆಕೆಗೆ ಸಾಧ್ಯವಾಗಲಿಲ್ಲ ಎಂದು ರೋಗಿಗಳು ಆರೋಪಿಸಿದ್ದಾರೆ.
BIGG NEWS: ನ.1ರಂದು ಪುನೀತ್ ರಾಜ್ಕುಮಾರ್ ಗೆ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ; ಸಿಎಂ ಬಸವರಾಜ ಬೊಮ್ಮಾಯಿ