ಚಿಕ್ಕೋಡಿ : ಗಡಿ ವಿಚಾರದಲ್ಲಿ ಕ್ಯಾತೆ ತೆಗೆಯುತ್ತಿರುವ ಮಹಾ ಸರ್ಕಾರಕ್ಕೆ ಶಾಕ್ ನೀಡಲಾಗಿದ್ದು, ಕರ್ನಾಟಕದ ಜೊತೆಗೆ ಮಹಾರಾಷ್ಟ್ರದ ಐದು ಜಿಲ್ಲೆ ವಿಲೀನ ನಕ್ಷೆಯನ್ನು ಮಹಾ ಕನ್ನಡಿಗರು ಹಂಚಿಕೊಂಡಿದ್ದಾರೆ.
ಜತ್ತ ತಾಲೂಕಿನ ಜನರೇ ಶಾಕ್ ನೀಡಿದ್ದು, ಮಹಾರಾಷ್ಟ್ರದಲ್ಲಿರುವ ಕನ್ನಡಿಗರು ಕರ್ನಾಟಕಕ್ಕೆ ಹೊಸ ನಕ್ಷೆ ತಯಾರಿ ಮಾಡಿ ಬಿಗ್ ಶಾಕ್ ನೀಡಿದ್ದಾರೆ. ಹೌದು, ಕರ್ನಾಟಕಕ್ಕೆ ಸೇರಲು ಉತ್ಸುಕರಾಗಿರುವ ಮಹಾ ಕನ್ನಡಿಗರು ಹೊಸ ನಕ್ಷೆ ತಯಾರು ಮಾಡಿದ್ದಾರೆ. ಸದ್ಯ ಈಗಿರುವ ನಕ್ಷೆಗೆ ಮಹಾರಾಷ್ಟ್ರದ ಕೆಲವು ಜಿಲ್ಲೆಗಳನ್ನೇ ಸೇರಿಸಿ ಹೊಸ ನಕ್ಷೆ ತಯಾರಿ ಮಾಡಿದ್ದಾರೆ. ಸದ್ಯ, ಈ ನಕ್ಷೆ ಗಡಿ ಭಾಗದಲ್ಲಿ ವೈರಲ್ ಆಗುತ್ತಿದೆ. ಈ ನಕ್ಷೆಯಲ್ಲಿ ಕರ್ನಾಟಕಕ್ಕೆ ಸೋಲಾಪುರ, ಉಸ್ಮನಾಬಾದ್, ಲಾತೂರು, ಸಂಗಲ್ಕಿ ಹಾಗೂ ಕೊಲ್ಹಾಪುರ ಜಿಲ್ಲೆಗಳನ್ನು ಸೇರಿಸಿದ್ದಾರೆ.
ಇನ್ನೂ, ಬೆಳಗಾವಿ ಗಡಿ ವಿವಾದಕ್ಕೆ ಸಂಬಂಧಿಸಿದಂತೆ ಮಹಾರಾಷ್ಟ್ರ ಪುಂಡರ ಪುಂಡಾಟ ಹೆಚ್ಚಾಗಿದ್ದು, ಸಾರಿಗೆ ಬಸ್ ಗಳ ಮೇಲೆ ಕಲ್ಲು ತೂರಾಟ ನಡೆಸಲಾಗಿದೆ. ಪುಣೆಯಿಂದ ಅಥಣಿಗೆ ಬರುತ್ತಿದ್ದ ಕೆಎಸ್ ಆರ್ ಟಿ ಸಿ ಬಸ್ ಮೇಲೆ ಮಹಾರಾಷ್ಟ್ರದಲ್ಲಿ ಪುಂಡರು ಬಸ್ ಗಳ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ. ಈ ಹಿನ್ನೆಲೆ ಮಿರಜ್-ಕಾಗವಾಡದ ಬಸ್ ಸಂಚಾರ ಬಂದ್ ಆಗಿದೆ ಎನ್ನಲಾಗಿದೆ.
ಮಹಾರಾಷ್ಟ್ರದಲ್ಲಿ ಕಿಡಿಗೇಡಿಗಳು ಪುಂಡಾಟ ನಡೆಸಿದ್ದು, ಬಸ್ ಗಳ ಮೇಲೆ ಕಲ್ಲು ತೂರಾಡಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.ಕರ್ನಾಟಕ ಮತ್ತು ಮಹಾರಾಷ್ಟ್ರ ನಡುವಿನ ಗಡಿ ವಿವಾದ ಉಲ್ಬಣಗೊಳ್ಳುತ್ತಿದ್ದಂತೆ, ಮರಾಠ ಮಹಾಸಂಘವು ನಿನ್ನೆಯಷ್ಟೇ ಪುಣೆಯಲ್ಲಿ ಕರ್ನಾಟಕ ಮಹಾರಾಷ್ಟ್ರ ಗಡಿ ವಿವಾದದ ಬಗ್ಗೆ ಕರ್ನಾಟಕ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಹೇಳಿಕೆಗೆ ವಿರುದ್ಧವಾಗಿ ಪ್ರತಿಭಟನೆ ನಡೆಸಿತು. ಪ್ರತಿಭಟನೆಯ ಸಂಕೇತವಾಗಿ, ಮಹಾಸಂಘ ಪುಂಡರು ಪುಣೆಯಲ್ಲಿ ರಾಜ್ಯ ಮತ್ತು ಕರ್ನಾಟಕದ ನಡುವೆ ಸಂಚರಿಸುವ ಬಸ್ಸುಗಳ ಮೇಲೆ ‘ಸಾರ್ವಜನಿಕ ಪ್ರತಿಭಟನೆ’, ‘ಜೈ ಮಹಾರಾಷ್ಟ್ರ’ ಎಂದು ಬರೆದಿದ್ದರು. ಇದೀಗ ಮತ್ತೆ ಕರ್ನಾಟಕ ಸಾರಿಗೆ ಬಸ್ ಮೇಲೆ ಕಲ್ಲು ತೂರಾಟ ಮಾಡಲಾಗಿದೆ.