ಕೆಎನ್ಎನ್ಡಿಜಿಟಲ್ ಡೆಸ್ಕ್ : ಭಾರತೀಯ ಮೂಲದ ರಿಷಿ ಸುನಕ್ ಸೋಮವಾರ ಬ್ರಿಟನ್ ಪ್ರಧಾನಿಯಾಗಿ ಇತಿಹಾಸ ಸೃಷ್ಟಿಸಿದ್ದು ಗೊತ್ತೇ ಇದೆ. ಇಡೀ ಭಾರತವೇ ದೀಪಾವಳಿ ಹಬ್ಬವನ್ನ ಆಚರಿಸುತ್ತಿರುವಾಗ ಬ್ರಿಟನ್ ಪ್ರಧಾನಿಯಾಗಿ ರಿಷಿ ಸುನಕ್ ಅವಿರೋಧವಾಗಿ ಆಯ್ಕೆಯಾದರು. ಆಡಳಿತಾರೂಢ ಕನ್ಸರ್ವೇಟಿವ್ ಪಕ್ಷದ ನಾಯಕತ್ವಕ್ಕೆ ಸ್ಪರ್ಧಿಸಿದ್ದ ಪೆನ್ನಿ ಮೊರ್ಡೌಂಟ್ ಸ್ಪರ್ಧೆಯಿಂದ ಹಿಂದೆ ಸರಿದು ನಂತ್ರ ರಿಷಿ ಬ್ರಿಟನ್ ಪ್ರಧಾನಿಯಾಗಿ ಆಯ್ಕೆಯಾದ್ರು. ಇನ್ನು ಇಂದು ಬ್ರಿಟನ್’ನ ಮುಂದಿನ ಪ್ರಧಾನಿಯಾಗಿ ಅಧಿಕಾರ ಸ್ವೀಕರಿಸಿದ್ದಾರೆ. ಈ ಹಿನ್ನೆಲೆಯಲ್ಲಿ ರಿಷಿಗೆ ಅಭಿನಂದನೆಗಳ ಮಹಾಪೂರವೇ ಹರಿದು ಬರುತ್ತಿದೆ. ರಿಷಿ ಗೆಲುವಿಗೆ ಈಗಾಗಲೇ ಹಲವು ಸೆಲೆಬ್ರಿಟಿಗಳು ಸಂತಸ ವ್ಯಕ್ತಪಡಿಸಿದ್ದಾರೆ.
ಏತನ್ಮಧ್ಯೆ, ಬೆಂಗಳೂರಿನ ಜನಪ್ರಿಯ ರೆಸ್ಟೋರೆಂಟ್ನಲ್ಲಿ ರಿಷಿ ಸುನಕ್ ಅವರ ಫೋಟೋ ಪ್ರಸ್ತುತ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗುತ್ತಿದೆ. ಈ ಹಿಂದೆ ಭಾರತಕ್ಕೆ ಭೇಟಿ ನೀಡಿದ್ದ ರಿಷಿ ಸುನಕ್ ಬೆಂಗಳೂರಿನ ಪ್ರಸಿದ್ಧ ದಕ್ಷಿಣ ಭಾರತದ ಸಸ್ಯಾಹಾರಿ ರೆಸ್ಟೋರೆಂಟ್ಗೆ ಭೇಟಿ ನೀಡಿದ್ದರು. ಅವ್ರು ಅಲ್ಲಿ ದಕ್ಷಿಣದ ಆಹಾರವನ್ನ ಆನಂದಿಸಿದರು. ಇದಕ್ಕೆ ಸಂಬಂಧಿಸಿದ ಫೋಟೋವನ್ನ ರೆಸ್ಟೋರೆಂಟ್ ಇತ್ತೀಚೆಗೆ ಟ್ವಿಟರ್ನಲ್ಲಿ ಹಂಚಿಕೊಂಡಿದೆ. ಬ್ರಿಟನ್ ಪ್ರಧಾನಿಯಾಗಿ ರಿಷಿ ಆಯ್ಕೆಯಾದ ಬಗ್ಗೆ ಸಂತಸ ವ್ಯಕ್ತಪಡಿಸಿದ್ದಾರೆ. ಆದರೆ, ಈ ಫೋಟೋವನ್ನ ಯಾವಾಗ ತೆಗೆಯಲಾಗಿದೆ ಎಂದು ರೆಸ್ಟೋರೆಂಟ್ ತಿಳಿಸಿಲ್ಲ.
#RishiSunak is going to become the next PM of UK.
Happy to know that he will be the first Indian-origin & the youngest British Prime Minister.
We wish him good luck & may he become the most successful PM of UK by sailing through all the turbulence pic.twitter.com/JhWLtcVTu2— Vidyarthi Bhavan (@VidyarthiBhavan) October 24, 2022