ಚಿಕ್ಕಬಳ್ಳಾಪುರ: ಕೆರೆಗೆ ಬಿದ್ದು ಸಾವನ್ನಪ್ಪಿದ್ದ ಹುಡುಗಿಯನ್ನು ಉಪ್ಪು ಸುರಿದು ಬದುಕಿಸಲು ಯತ್ನ ಮಾಡಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಗಂಗಾನಹಳ್ಳಿ ಗ್ರಾಮದ ಬಳಿ ನಡೆದಿದೆ.
ಕೆಲ ದಿನಗಳಿಂದ ಸಾಮಾಜಿಕ ಜಾಲತಾಣದಲ್ಲಿ ಸುಳ್ಳು ಸುದ್ದಿಯೊಂದು ವೈರಲ್ ಆಗುತ್ತಿದ್ದು, ಅದರಲ್ಲಿ ತಮಿಳುನಾಡಿನಲ್ಲಿ ನಡೆದ ಘಟನೆ ಬಗ್ಗೆ ಮಾಹಿತಿಯನ್ನು ಹಂಚಿಕೊಂಡಿದ್ದು, ವೈರಲ್ ಆಗಿರುವ ಪೋಸ್ಟ್ನಲ್ಲಿ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದವರನ್ನು ಉಪ್ಪಿನ ಮೇಲೆ ಮಲಗಿಸಿ ಅವರನ್ನು ಸಂಪೂರ್ಣವಾಗಿ ಉಪ್ಪಿನಿಂದ ಮುಚ್ಚಿದ್ರೆ ಮತ್ತೆ ಬದುಕುತ್ತಾರೆ ಅಂತ ಹೇಳಲಾಗಿದೆ. ಇದನ್ನೇ ನಂಬಿರುವ ಜನತೆ ಕೆರೆಗೆ ಬಿದ್ದು ಸಾವನ್ನಪ್ಪಿದವರನ್ನು ಉಪ್ಪಿನಿಂದ ಮುಚ್ಚಿ ಬದುಕಲು ಯತ್ನಿಸುತ್ತಿರುವುದು ಇತ್ತೀಚಿಗೆ ಹೆಚ್ಚಾಗುತ್ತಿದೆ. ಅವಿವೇಕಿಗಳು ಮಾಡಿರುವ ಈ ಹುಚ್ಚು ಪೋಸ್ಟ್ನಿಂದಾಗಿ ಈಗ ಜನತೆಗೆ ತೊಂದ್ರೆಯಾಗುತ್ತಿದೆ.
ಇನ್ನೂ ಶಿಡ್ಲಘಟ್ಟ ತಾಲೂಕಿನ ಗಾಜಿಲುವಾರುಪಲ್ಲಿ ಗ್ರಾಮದ ಎಂಎ ಪದವೀದರೆ ಅಮೃತ ಜಂಬಿಗೆ ಮರದಹಳ್ಳಿಯ ನೆಂಟರ ಮನೆಯ ಗೃಹಪ್ರವೇಶದ ಕಾರ್ಯಕ್ರಮ ನಿಮಿತ್ತ ಆಗಮಿಸಿದ್ದ ವೇಳೇಯಲ್ಲಿ ರೀಲ್ಸ್ ಮಾಡಲು ಕೆರೆ ಬಳಿ ಹೋಗಿದ್ದಾಳೆ. ಈ ವೇಳೆ ಆಕಸ್ಮಿಕ ಕಾಲು ಜಾರಿ ಕೆರೆಗೆ ಅಮೃತಾ ಉರುಳಿಬಿದ್ದು ಸಾವನ್ನಪ್ಪಿದ್ದಾಳೆ. ಅಕ್ಷತಾ ತೋಟದಲ್ಲಿದ್ದ ಗ್ರಾಮಸ್ಥರಿಗೆ ತಿಳಿಸಿದ್ದು ಅರ್ಧ ಗಂಟೆಯಲ್ಲೇ ಕೆರೆಯಿಂದ ಮೃತ ಅಕ್ಷತಾಳನ್ನು ಸ್ಥಳೀಯರೇ ಮೇಲೆ ಎತ್ತಿ ಮೃತದೇಹದ ಮೇಲೆ ಅರ್ಧ ಗಂಟೆಯೊಳಗೆ ಉಪ್ಪು(Salt) ಹಾಕಿ ಮಲಗಿಸಿದ್ದಾರೆ. ಘಟನ ಸ್ಥಳಕ್ಕೆ ಗುಡಿಬಂಡೆ ಪೊಲೀಸರು ಆಗಮಿಸಿ ಅಮೃತಳ ಶವವನ್ನು ಗುಡಿಬಂಡೆ ಸರ್ಕಾರಿ ಆಸ್ಪತ್ರೆಯ ಶವಾಗಾರಕ್ಕೆ ರವಾನಿಸಿದ್ದಾರೆ.