ಅಂತಾರಾಷ್ಟ್ರೀಯ ಕ್ರಿಕೆಟ್ ನಲ್ಲಿ ಅತಿ ವೇಗವಾಗಿ 28,000 ರನ್ ಪೂರೈಸಿದ ಬ್ಯಾಟ್ಸ್ ಮನ್ ಎಂಬ ಹೆಗ್ಗಳಿಕೆಗೆ ವಿರಾಟ್ ಕೊಹ್ಲಿ ಪಾತ್ರರಾಗಿದ್ದಾರೆ. ವಡೋದರಾದಲ್ಲಿ ನಡೆದ ನ್ಯೂಜಿಲೆಂಡ್ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ಅವರು ಈ ಮೈಲಿಗಲ್ಲು ಸಾಧಿಸಿದರು.
ಸಚಿನ್ ತೆಂಡೂಲ್ಕರ್ ಮತ್ತು ಕುಮಾರ್ ಸಂಗಕ್ಕಾರ ಅವರೊಂದಿಗೆ 28,000 ರನ್ ಗಡಿ ದಾಟಿದ ಮೂರನೇ ಆಟಗಾರ ಎಂಬ ಹೆಗ್ಗಳಿಕೆಗೆ ಕೊಹ್ಲಿ ಪಾತ್ರರಾಗಿದ್ದಾರೆ. ಸಚಿನ್ ತೆಂಡೂಲ್ಕರ್ 644 ಇನ್ನಿಂಗ್ಸ್ ಗಳಲ್ಲಿ ಮತ್ತು ಸಂಗಕ್ಕಾರ 666 ಇನ್ನಿಂಗ್ಸ್ ಗಳಲ್ಲಿ ಈ ಸಾಧನೆ ಮಾಡಿದ್ದಾರೆ.
ಕೊಹ್ಲಿ ಇನ್ನೂ ಕೆಲವು ದಾಖಲೆಗಳಿಗೆ ಹತ್ತಿರದಲ್ಲಿದ್ದಾರೆ. 42 ರನ್ ಗಳಿಸುವ ಮೂಲಕ ಅವರು ಅಂತರರಾಷ್ಟ್ರೀಯ ಕ್ರಿಕೆಟ್ನಲ್ಲಿ ಅತಿ ಹೆಚ್ಚು ರನ್ ಗಳಿಸಿದ ಬ್ಯಾಟ್ಸ್ಮನ್ಗಳ ಪಟ್ಟಿಯಲ್ಲಿ ಎರಡನೇ ಸ್ಥಾನಕ್ಕೆ ಏರಬಹುದು. ಇನ್ನೂ 73 ರನ್ ಗಳಿಸುವ ಮೂಲಕ ನ್ಯೂಜಿಲೆಂಡ್ ವಿರುದ್ಧ 3,000 ಅಂತಾರಾಷ್ಟ್ರೀಯ ರನ್ ಗಳಿಸಿದ ಎರಡನೇ ಏಷ್ಯನ್ ಆಟಗಾರ ಎಂಬ ಹೆಗ್ಗಳಿಕೆಗೆ ಪಾತ್ರರಾಗಲಿದ್ದಾರೆ. ನ್ಯೂಜಿಲೆಂಡ್ ವಿರುದ್ಧದ ಏಕದಿನ ಕ್ರಿಕೆಟ್ನಲ್ಲಿ ಭಾರತದ ಪರ ಅತಿ ಹೆಚ್ಚು ರನ್ ಗಳಿಸಿದ ಆಟಗಾರ ಎಂಬ ಹೆಗ್ಗಳಿಕೆಗೆ ಪಾತ್ರರಾಗಲು ಅವರಿಗೆ 94 ರನ್ ಅಗತ್ಯವಿದೆ. ಭಾರತ ಗೆದ್ದ ಪಂದ್ಯಗಳಲ್ಲಿ 128 ರನ್ ಗಳಿಸಿದರೆ, ಒಟ್ಟಾರೆ ಏಕದಿನ ಗೆಲುವಿನಲ್ಲಿ ಎರಡನೇ ಅತಿ ಹೆಚ್ಚು ರನ್ ಗಳಿಸಿದ ಆಟಗಾರ ಎಂಬ ಹೆಗ್ಗಳಿಕೆಗೆ ಪಾತ್ರರಾಗಲಿದ್ದಾರೆ.
ಎಲ್ಲಾ ಸ್ವರೂಪದಲ್ಲೂ ಕೊಹ್ಲಿ ಪ್ರಬಲ ಫಾರ್ಮ್ ನಲ್ಲಿದ್ದಾರೆ.








