ಕೆಎನ್‌ಎನ್‌ಸಿನಿಮಾಡೆಸ್ಕ್‌: ನಟಿ ಪ್ರಿಯಾ ಪ್ರಕಾಶ್​ ವಾರಿಯರ್‌ ಮತ್ತು ಶ್ರೇಯಸ್​ ಮಂಜು ಅಭಿನಯದ ವಿಷ್ಣುಪ್ರಿಯನ ರೊಮ್ಯಾಂಟಿಕ್ ಹಾಡು ಬಿಡುಗಡೆಯಾಗಿದ್ದು, ಸ್ಯಾಂಡಲ್‌ವುಡ್‌ನಲ್ಲಿ ಹೊಸ ಅಲೆ ನಿರ್ಮಾಣ ಮಾಡಿದೆ.

ಚಿಗುರು ಚಿಗುರೊ ಸಮಯ ಹಿತವಾದ ಒಂದು ಮೌನ.. ಒಲವು ಚಿಗುರೊ ಸಮಯ ಎದೆ ಬೇರಿನಲ್ಲಿ ಮೌನ…’ ಎಂಬ ಸಾಲಿನಿಂದ ಶುರುವಾಗುವ ಈ ಗೀತೆಯು ಸಂಗೀತ ಮತ್ತು ಸಾಹಿತ್ಯದ ಜೊತೆಗೆ ರೊಮ್ಯಾಂಟಿಕ್​ ಆದ ದೃಶ್ಯದ ಮೂಲಕವೂ ಗಮನ ಸೆಳೆಯುತ್ತಿದೆ. ಡಾ. ವಿ. ನಾಗೇಂದ್ರ ಪ್ರಸಾದ್ ಅವರು ಇದಕ್ಕೆ ಸಾಹಿತ್ಯ ಬರೆದಿದ್ದಾರೆ. ನಜೀನ್ ಅರ್ಷಾದ್ ಕಂಠಸಿರಿಯಲ್ಲಿ ಈ ಹಾಡು ಅತ್ಯಂತ ಪರಿಣಾಮಕಾರಿಯಾಗಿ ಮೂಡಿ ಬಂದಿದೆ. ಈ ಮೂಲಕ ಕೇರಳದ ಪ್ರಖ್ಯಾತ ಸಂಗೀತ ನಿರ್ದೇಶಕ ಗೋಪಿ ಸುಂದರ್ ಕನ್ನಡದಲ್ಲಿಯೂ ಕಮಾಲ್ ಮಾಡಿದ್ದಾರೆ. ಈ ವರ್ಷದ ಸುಮಧುರ ಹಾಡು ಎಂದು ಗುರುತಿಸಿಕೊಳ್ಳುವ ಎಲ್ಲ ಗುಣಗಳೂ ಈ ಹಾಡಿಗೆ ಇದೆ. ವಿ.ಕೆ. ಪ್ರಕಾಶ್ ಅವರು ಈ ಸಿನಿಮಾಗೆ ನಿರ್ದೇಶನ ಮಾಡಿದ್ದಾರೆ.

ಗಂಡುಗಲಿ ಕೆ.ಮಂಜು ನಿರ್ಮಾಣದ ವಿಷ್ಣುಪ್ರಿಯ ಚಿತ್ರದಲ್ಲಿ ಸುಚೇಂದ್ರಪ್ರಸಾದ್, ಅಚ್ಯುತ್ ಕುಮಾರ್ ಮುಂತಾದವರು ಪ್ರಧಾನ ಪಾತ್ರಗಳಲ್ಲಿ ನಟಿಸಿದ್ದಾರೆ. ಇದು ಪ್ರೇಮಕಥೆ ಮಾತ್ರವಲ್ಲ; ತೊಂಬತ್ತರ ದಶಕದಲ್ಲಿ ನಡೆದಿದ್ದ ನೈಜ ಕಥನವೂ ಈ ಸಿನಿಮಾ ಹೊಂದಿದೆ ಎನ್ನಲಾಗಿದೆ. ಶ್ರೇಯಸ್ ಮಂಜು ವಿಷ್ಣುಪ್ರಿಯನಾಗಿ, ವಿಶಿಷ್ಟವಾದ ಪಾತ್ರದ ಮೂಲಕ ಪ್ರೇಕ್ಷಕರನ್ನು ರಂಜಿಸಲು ಬರುತ್ತಿದ್ದಾರೆ.

Share.
Exit mobile version