ಬೆಂಗಳೂರು ; ಕರ್ನಾಟಕ ವಿಶ್ವಕರ್ಮ ಸಮುದಾಯ ಅಭಿವೃದ್ಧಿ ನಿಗಮದಿಂದ ವಿವಿಧ ಯೋಜನೆಗಳಾದ ಪಂಚವೃತ್ತಿ ಅಭಿವೃದ್ಧಿಗೆ ಆರ್ಥಿಕ ನೆರವು, ಸ್ವಯಂ ಉದ್ಯೋಗ ನೇರಸಾಲ, ಗಂಗಾ ಕಲ್ಯಾಣ ನೀರಾವರಿ ಯೋಜನೆ, ಅರಿವು ಶೈಕ್ಷಣಿಕ ಸಾಲ ಯೋಜನೆ, ವಿದೇಶಿ ವಿಶ್ವವಿದ್ಯಾಲಯಗಳಲ್ಲಿ ಉನ್ನತ ವ್ಯಾಸಂಗ ಸಾಲ ಯೋಜನೆ, ಸ್ವಾವಲಂಬಿ ಸಾರಥಿ ಯೋಜನೆ, ಸ್ವಾತಂತ್ರ‍್ಯ ಅಮೃತ್ ಮಹೋತ್ಸವ ಮುನ್ನಡೆ ಯೋಜನೆಗಳ ಸಾಲ ಸೌಲಭ್ಯಗಳಿಗೆ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
10ನೇ ತರಗತಿ, ದ್ವೀತಿಯ ಪಿ.ಯು.ಸಿ, ಡಿಪ್ಲೋಮ, ಪದವಿ, ಇಂಜಿನಿಯರಿಂಗ್ ವ್ಯಾಸಂಗವನ್ನು ಪೂರ್ಣಗೊಳಿಸಿರಬೇಕು, ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಜಾತಿ ಪಟ್ಟಿಯಲ್ಲಿ ನಮೂದಿಸಿದ ನಿಗಮದ ವ್ಯಾಪ್ತಿಗೆ ಒಳಪಡುವ ಜಾತಿಗಳಿಗೆ ಸೇರಿದವರಾಗಿರಬೇಕು. ಅಸಕ್ತರು 18 ರಿಂದ 25 ವರ್ಷದೊಳಗಿನವರಾಗಿರಬೇಕು. ಅರ್ಜಿಯನ್ನು ಸಲ್ಲಿಸಲು https://www.kaushalkar.com ಜಾಲತಾಣದಲ್ಲಿ ಸಲ್ಲಿಸಬಹುದಾಗಿದೆ.
ಹಾಗೂ 2023-24ನೇ ಸಾಲಿನಲ್ಲಿ ಅರ್ಜಿ ಸಲ್ಲಿಸಿರುವ ಅರ್ಜಿದಾರರು ಸೇವಾಸಿಂಧು ಪೋರ್ಟಲ್ http://sevasindhu.karnataka.gov.in ಮುಖಾಂತರ ಗ್ರಾಮಒನ್, ಬೆಂಗಳೂರು ಒನ್ ಮತ್ತು ಕರ್ನಾಟಕ ಒನ್ ಸೇವಾ ಕೇಂದ್ರಗಳಲ್ಲಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿರುತ್ತದೆ. ಅರ್ಜಿ ಸಲ್ಲಿಸಲು ಆಗಸ್ಟ್.31 ಕೊನೆಯ ದಿನವಾಗಿದೆ.
ಬೆಂಗಳೂರು ಜನತೆ ಗಮನಕ್ಕೆ: ಆ.10ರಂದು ನಗರದ ಈ ಪ್ರದೇಶಗಳಲ್ಲಿ ‘ವಿದ್ಯುತ್ ವ್ಯತ್ಯಯ’ | Power Cut
RBI ನಿಂದ ಮಹತ್ವದ ತೀರ್ಮಾನ: ಈಗ ನಿಮ್ಮ ಚೆಕ್ ಅನ್ನು ಶೀಘ್ರದಲ್ಲೇ ಬ್ಯಾಂಕಿನಿಂದ ಕ್ಲೀಯರ್…!