ಮಂಡ್ಯ : ವಿಶ್ವಕರ್ಮ ಸಮುದಾಯವು ಕಲೆ ಮತ್ತು ವಾಸ್ತುಶಿಲ್ಪ ಕ್ಷೇತ್ರಕ್ಕೆ ಅವಿಸ್ಮರಣೀಯ ಕೊಡುಗೆ ನೀಡಿದೆ ಎಂದು ಶಾಸಕ ಕೆ.ಎಂ.ಉದಯ್ ಹೇಳಿದರು.
ಮದ್ದೂರು ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ಬುಧವಾರ ನಡೆದ ವಿಶ್ವಕರ್ಮರ ಜಯಂತಿ ಕಾರ್ಯಕ್ರಮದಲ್ಲಿ ವಿಶ್ವಕರ್ಮರ ಭಾವಚಿತ್ರಕ್ಕೆ ಪುಷ್ಪಾರ್ಚನೆ ನೆರವೇರಿಸಿ ಅವರು ಮಾತನಾಡಿದರು.
ಭಾರತೀಯ ಸಂಸ್ಕೃತಿಗೆ ವಿಶ್ವಕರ್ಮ ಸಮುದಾಯದ ಕೊಡುಗೆ ಅಪಾರವಾಗಿದ್ದು, ಅನೇಕ ಗುಡಿ, ದೇವಸ್ಥಾನ, ಪ್ರಾಚೀನ ಸ್ಮಾರಕಗಳ ನಿರ್ಮಾಣದಿಂದಾಗಿ ಸಮುದಾಯದ ಕಲೆ, ಸಂಸ್ಕೃತಿ ಇಂದಿನ ಪೀಳಿಗೆಗೆ ಪ್ರಸಿದ್ಧಿ ಪಡೆದಿವೆ. ಪ್ರತಿನಿತ್ಯ ಜನರು ಬಳಸುವ ಕರಕುಶಲ ಸಾಮಗ್ರಿಗಳು, ಲೋಹ, ಕಬ್ಬಿಣ, ದೇವರ ವಿಗ್ರಹ, ಚಿತ್ರಪಟಗಳು, ಗೃಹಬಳಕೆ ವಸ್ತುಗಳು, ಸ್ಮಾರಕಗಳ ನಿರ್ಮಾಣದ ಕಾರ್ಯದಲ್ಲಿ ವಿಶ್ವಕರ್ಮರ ಕಲೆಯ ಜೀವಂತಿಕೆಯ ಅಸ್ತಿತ್ವವನ್ನು ಇಂದಿಗೂ ಉಳಿಸಿರುವುದೇ ಸಾಕ್ಷಿ. ಲೋಕವನ್ನು ವೈಭವೀಕರಿಸುವ ಸಾಂಸ್ಕೃತಿಕ ಪರಂಪರೆ, ಕಲೆ ಮತ್ತು ವಾಸ್ತು ಶಿಲ್ಪ ಕ್ಷೇತ್ರಕ್ಕೆ ವಿಶ್ವಕರ್ಮರ ಕೊಡುಗೆ ಅಪಾರವಾಗಿದೆ ಎಂದರು.
ವಿಶ್ವಕರ್ಮರ ಕೆತ್ತನೆ ಕಾರ್ಯಗಳ ಕಲೆಯು ಇಂದಿನ ಸಮಾಜಕ್ಕೆ ಕೊಡುಗೆ ನೀಡಿರುವುದನ್ನು ನಾವೆಲ್ಲರೂ ಸ್ಮರಿಸಬೇಕಾಗಿದೆ. ಕಲೆ ಮತ್ತು ವಾಸ್ತುಶಿಲ್ಪ ಕ್ಷೇತ್ರದಲ್ಲಿ ಅಮರ ಶಿಲ್ಪಿ ಜಕಣಾಚಾರಿ ಅವರು ಜನಮಾನಸದಲ್ಲಿ ಅಜರಾಮರವಾಗಿ ಉಳಿದಿದ್ದಾರೆ.
ವಿಶ್ವಕರ್ಮ ಸಮುದಾಯಕ್ಕೆ ಸರ್ಕಾರದಿಂದ ಸಿಗುವ ಸೌಲಭ್ಯಗಳನ್ನು ತಲುಪಿಸಲು ಪೂರಕವಾದ ವ್ಯವಸ್ಥೆ ಕಲ್ಪಿಸಿದಲ್ಲಿ ಸಮುದಾಯವು ಆರ್ಥಿಕವಾಗಿ ಅಭಿವೃದ್ಧಿ ಹೊಂದಲು ಸಾಧ್ಯವಾಗಲಿದೆ. ಮದ್ದೂರು ನಗರಸಭಾ ವ್ಯಾಪ್ತಿಯಲ್ಲಿ ನಿವೇಶನದ ಬೇಡಿಕೆ ಇಟ್ಟಿದ್ದಿರಿ ಈಗಾಗಲೇ ಸರ್ವೆ ಕಾರ್ಯ ನಡೆಯುತ್ತಿದ್ದು ಮುಂದಿನ ದಿನಗಳಲ್ಲಿ ನಿಮ್ಮ ಬೇಡಿಕೆ ಈಡೇರಿಸಲಾಗುವುದು.
ಹಾಗೂ ನಗರದಲ್ಲಿ ಅಮರ ಶಿಲ್ಪಿ ಜಕಣಾಚಾರಿ ಅವರ ಪುತ್ತಳಿ ಹಾಗೂ ಆ ವೃತ್ತಕ್ಕೆ ಅವರ ಹೆಸರಿಡುವ ಬಗ್ಗೆ ನಗರಸಭೆಯ ಸಭೆಯಲ್ಲಿ ಅನುಮೋದನೆ ಪಡೆಯಲಾಗುವುದು ಎಂದು ಭರವಸೆ ನೀಡಿದರು.
ಇದೇ ವೇಳೆ ಸಮುದಾಯದ ಮುಖಂಡರನ್ನು ಸನ್ಮಾನಿಸಲಾಯಿತು.
ಕಾರ್ಯಕ್ರಮದಲ್ಲಿ ತಹಶೀಲ್ದಾರ್ ಪರಶುರಾಮ್ ಸತ್ತಿಗೇರಿ, ಶಿರಸ್ತೆದಾರ್ ಲಕ್ಷ್ಮಿ ನರಸಿಂಹನ್ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ತೈಲೂರು ಚಲುವರಾಜು, ಭಾರತೀನಗರ ಬ್ಲಾಕ್ ಕಾಂಗ್ರೆಸ್ ರಾಜೀವ್ ಮುಖಂಡರಾದ ಬಸವರಾಜು, ಆನಂದಾಚಾರಿ ಮತ್ತಿತರರು ಇದ್ದರು.
ವರದಿ : ಗಿರೀಶ್ ರಾಜ್, ಮಂಡ್ಯ
ಮನೆಯಲ್ಲಿ ಮೃತ ವ್ಯಕ್ತಿಯ ಫೋಟೋ ಇಟ್ಟು ಏಡೆ ನೀಡುವಾಗ ನೀವು ಈ ತಪ್ಪುಗಳನ್ನು ಮಾಡಬೇಡಲೇ ಬಾರದು..!
KUWJ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಓದಿದ ಪ್ರೌಢಶಾಲೆಗೆ 40ರ ಸಂಭ್ರಮ: ಸೆ.19ರಂದು ಗುರುವಂದನಾ ಕಾರ್ಯಕ್ರಮ ನಿಗದಿ