ಬೆಂಗಳೂರು : ಬಿಜೆಪಿ ಎಂ ಎಲ್ ಸಿ H. ವಿಶ್ವನಾಥ್ ( Vishwanath )ಇಂದು ಮಾಜಿ ಸಿಎಂ ಸಿದ್ದರಾಮಯ್ಯರನ್ನು ಭೇಟಿಯಾಗಿದ್ದಾರೆ.ಇದರ ನಡುವೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯನ್ನು ಭೇಟಿಯಾಗಿದ್ದು, ರಾಜ್ಯ ರಾಜಕಾರಣದಲ್ಲಿ ಕುತೂಹಲಕ್ಕೆ ಕಾರಣವಾಗಿದೆ.

ಸಿದ್ದರಾಮಯ್ಯ-ಖರ್ಗೆ ಭೇಟಿ ವಿಚಾರ ರಾಜ್ಯ ರಾಜಕಾರಣದಲ್ಲಿ ಹಲವು ಚರ್ಚೆಗೆ ಕಾರಣವಾಗಿದ್ದು, ವಿಶ್ವನಾಥ್ ಕಾಂಗ್ರೆಸ್ ಸೇರ್ಪಡೆಯಾಗಲಿದ್ದಾರೆ ಎಂಬ ಗುಸುಗುಸು ಕೇಳಿಬರುತ್ತಿದೆ. ಆದರೆ ಇದಕ್ಕೆ ಪ್ರತಿಕ್ರಿಯೆ ನೀಡಿರುವ ವಿಶ್ವನಾಥ್ ಕಾದು ನೋಡಿ ಎಂದು ಪ್ರತಿಕ್ರಿಯೆ ನೀಡಿದ್ದಾರೆ. ನಮ್ಮ ರಾಜ್ಯದ ಹಿರಿಯರು ಆದ ಖರ್ಗೆ ಎಐಸಿಸಿ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ. ಇದು ಸೌಜನ್ಯ ಭೇಟಿಯಷ್ಟೇ, ಇದರಲ್ಲಿ ತಪ್ಪೇನಿದೆ ಎಂದು ಪ್ರಶ್ನಿಸಿದ್ದಾರೆ.

ಇನ್ನೂ, ಬೆಂಗಳೂರಿನ ಸರ್ಕರಿ ನಿವಾಸದಲ್ಲಿ ಸಿದ್ದರಾಮಯ್ಯರನ್ನು ಭೇಟಿಯಾದ ವಿಶ್ವನಾಥ್ ಆರೋಗ್ಯ ವಿಚಾರಣೆ ಮಾಡಿ ನಂತರ ಕೆಲಕಾಲ ಚರ್ಚೆ ನಡೆಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.ಬಿಜೆಪಿ ಎಂ ಎಲ್ ಸಿ ವಿಶ್ವನಾಥ್ ಇಂದು ಮಾಜಿ ಸಿಎಂ ಸಿದ್ದರಾಮಯ್ಯ ಭೇಟಿ ರಾಜ್ಯ ರಾಜಕಾರಣದಲ್ಲಿ ಕುತೂಹಲಕ್ಕೆ ಕಾರಣವಾಗಿದ್ದು, ಇಬ್ಬರ ನಡುವೆ ಏನೆಲ್ಲಾ ಮಾತುಕತೆ ನಡೆಯಿತು ಎಂಬುದನ್ನು ಕಾದು ನೋಡಬೇಕಾಗಿದೆ.

ರೈತರಿಗೆ ಸದಾ ಪ್ರೋತ್ಸಾಹ ನೀಡುವ ಬಿಜೆಪಿ – ರೈತ ಮೋರ್ಚಾ ಪ್ರಭಾರಿ ಎನ್.ರವಿಕುಮಾರ್

ಗುಜರಾತ್ ಮಾದರಿಯಲ್ಲೇ ಕರ್ನಾಟಕದಲ್ಲೂ ಬಿಜೆಪಿ ಮೋಡಿ – MLC ಎನ್.ರವಿಕುಮಾರ್

Share.
Exit mobile version