ಬೆಂಗಳೂರು : ನೆರೆ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿ, ಜನರ ಕಷ್ಟಗಳನ್ನು ಆಲಿಸಬೇಕು ಹಾಗೂ ಅಗತ್ಯ ನೆರವುಗಳನ್ನು ಒದಗಿಸಿಕೊಡಬೇಕು. ವರುಣನ ಕೃಪೆಯಿಂದ ಉತ್ತಮ ಮಳೆಯಾಗುತ್ತಿದೆ. ಇದೇ ವೇಳೆ ಉಂಟಾಗಿರುವ ಅವಘಡಗಳಿಂದ ಜನರು ಆತಂಕಕ್ಕೆ ಒಳಗಾಗಿದ್ದು, ಜನಪ್ರತಿನಿಧಿಗಳಾದ ನಾವು ಅವರ ಜೊತೆ ನಿಲ್ಲೋಣ ಎಂದು ಸಚಿವ ಸಂಪುಟ ಸಹೋದ್ಯೋಗಿಗಳಿಗೆ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಮನವಿ ಮಾಡಿದ್ದಾರೆ.
ಹೌದು ರಾಜ್ಯಾದ್ಯಂತ ಭಾರಿ ಮಳೆ ಆಗುತ್ತಿದ್ದು, ಕೆಲವೆಡೆ ಪ್ರವಾಹದ ಭೀತಿ ಕೂಡ ಎದುರಾಗಿದೆ. ಹೀಗಾಗಿ ಪ್ರವಾಹ ಪೀಡಿತ ಪ್ರದೇಶಗಳಿಗೆ ಸಚಿವರು ಭೇಟಿ ನೀಡಿ ಅಲ್ಲಿನ ಜನರ ಕಷ್ಟಗಳನ್ನು ಅವರ ಸಮಸ್ಯೆಗಳನ್ನು ಆಲಿಸಿ ಅವರಿಗೆ ಸ್ಪಂದಿಸಬೇಕು ಎಂದು ಉಪಮುಖ್ಯಮದ ಡಿಕೆ ಶಿವಕುಮಾರ್ ಸಂಪುಟ ಸಚಿವರಿಗೆ ಮನವಿ ಮಾಡಿದ್ದಾರೆ.
ಇಂತಹ ಕಷ್ಟದ ಸಮಯದಲ್ಲಿ ಜನರ ಜೊತೆ ನಿಲ್ಲಬೇಕಿರುವುದು ನಮ್ಮ ಸರ್ಕಾರದ ಕರ್ತವ್ಯ. ಹೀಗಾಗಿ ಸಚಿವ ಸಹೋದ್ಯೋಗಿಗಳು ತಮ್ಮ ಕ್ಷೇತ್ರ ವ್ಯಾಪ್ತಿ ಹಾಗೂ ಇತರೆ ಪ್ರವಾಹಪೀಡಿತ ಪ್ರದೇಶಗಳ ಶಾಸಕರ ಸಂಪರ್ಕದೊಂದಿಗೆ ಭೇಟಿ ಕೊಟ್ಟು, ಸಂತ್ರಸ್ತರ ಅಹವಾಲುಗಳನ್ನು ಸ್ವೀಕರಿಸಿ ಅವರ ನೆರವಿಗೆ ಧಾವಿಸಬೇಕಾಗಿ ಕೋರುತ್ತೇನೆ ಎಂದು ಮನವಿ ಮಾಡಿದ್ದಾರೆ.