ಹಾಸನ : ಹೊಳೆನರಸೀಪುರ ತಾಲೂಕಿನಲ್ಲಿ ಮಳೆಯಿಂದ 80ಕ್ಕೂ ಹೆಚ್ಚು ಮನೆಗಳಿಗೆ ಹಾನಿಯಾಗಿದ್ದು ಅಗತ್ಯ ಪರಿಹಾರ ಬಿಡುಗಡೆ ಮಾಡುವಂತೆ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿರುವುದಾಗಿ ಜಿಲ್ಲಾ ಉಸ್ತುವಾರಿ ಸಚಿವ ಕೆ ಗೋಪಾಲಯ್ಯ ತಿಳಿಸಿದರು .
BIGG NEWS : ತೆಲಂಗಾಣದಲ್ಲಿ ಮುಂದುವರಿದ ವರುಣನ ಆರ್ಭಟ : ಶಾಲಾ-ಕಾಲೇಜುಗಳಿಗೆ ಜುಲೈ 16 ರವರೆಗೆ ರಜೆ ವಿಸ್ತರಣೆ
ಹಾನೀಗಿಡಾದ ಪ್ರದೇಶಗಳಿಗೆ ಭೇಟಿ ನೀಡಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಹೊಳೆನರಸೀಪುರದಲ್ಲಿ ಹಾನಿ ಗೀಡಾದ ಮನೆಗಳ ಸ್ಥಳ ಪರಿಶೀಲನೆ ಮಾಡಲಾಗಿದೆ ಪೂರ್ಣವಾಗಿ ಹಾನಿಯಾದ ಮನೆಗಳಿಗೆ 5 ಲಕ್ಷ 25 ಪ್ರತಿಶತಕ್ಕಿಂತ ಹೆಚ್ಚು ಹಾನಿಯಾದ ಮನೆಗಳಿಗೆ ಮೂರು ಲಕ್ಷ ಹಾಗೂ ಭಾಗಶಃ ಹಾನಿಯಾದ ಮನೆಗಳಿಗೆ 50,000 ಹಣ ಬಿಡುಗಡೆ ಮಾಡುವಂತೆ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿರುವುದಾಗಿ ತಿಳಿಸಿದರು.
ಹೊಳೆನರಸೀಪುರ ಭಾಗದಲ್ಲಿ ಬೆಳೆ ಹಾನಿ ಬಗ್ಗೆ ಇದುವರೆಗೂ ಯಾವುದೇ ವರದಿಗಳು ಬಂದಿಲ್ಲ ಆದರೆ ಅರಕಲಗೂಡು ತಾಲೂಕಿನಲ್ಲಿ 40 ಹೆಕ್ಟೇರ್ ಹೊಗೆ ಸೊಪ್ಪು ಹಾನಗೀಡಾಗಿದ್ದು 25 ಹೆಕ್ಟೇರ್ ನೆಲಗಡಲೆ ಬೆಳೆ ಹಾನಿಯಾಗಿರುವ ಸಂಬಂಧ ಜಿಲ್ಲಾಧಿಕಾರಿಗಳಿಗೆ ವರದಿ ನೀಡುವಂತೆ ತಿಳಿಸಲಾಗಿದೆ .
ವರದಿ ಬಂದ ಕೂಡಲೇ ಎನ್ ಡಿ ಆರ್ ಎಫ್ ಮಾನದಂಡದಂತೆ ಪರಿಹಾರ ವಿತರಣೆ ಕ್ರಮ ಕೈಗೊಳ್ಳಲಾಗುವುದು ಎಂದೂ ಉಸ್ತುವಾರಿ ಸಚಿವರು ತಿಳಿಸಿದರು .
BIGG NEWS : ತೆಲಂಗಾಣದಲ್ಲಿ ಮುಂದುವರಿದ ವರುಣನ ಆರ್ಭಟ : ಶಾಲಾ-ಕಾಲೇಜುಗಳಿಗೆ ಜುಲೈ 16 ರವರೆಗೆ ರಜೆ ವಿಸ್ತರಣೆ
ಸಫಾಯಿ ಕರ್ಮಚಾರಿಗಳ ಮನೆಗಳು ಸಹ ಹಾನಿಯಾಗಿದ್ದು ಕೂಡಲೇ ಸಂಬಂಧಪಟ್ಟ ಅಧಿಕಾರಿಗಳು ಪರಿಶೀಲನೆ ನಡೆಸಿ ಪರಿಹಾರ ಹಣವನ್ನು ಬಿಡುಗಡೆ ಮಾಡುವಂತೆ ಇದೆ ವೇಳೆ ಶಾಸಕ ಎಚ್ ಡಿ ರೇವಣ್ಣ ಸಚಿವರಲ್ಲಿ ಮನವಿ ಮಾಡಿದರು.
ಇದೇ ಸಂದರ್ಭದಲ್ಲಿ ಫಲಾನುಭವಿಗಳಿಗೆ ಸಚಿವರು ಪರಿಹಾರದ ಚೆಕ್ಕನ್ನು ವಿತರಿಸಿದರು. ಈ ವೇಳೆ ಜಿಲ್ಲಾಧಿಕಾರಿ ಆರ್ ಗಿರೀಶ್ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಕಾಂತರಾಜು ಸೇರಿದಂತೆ ಇತರೆ ಅಧಿಕಾರಿಗಳು ಹಾಜರಿದ್ದರು.