ಕಲಬುರಗಿ : ಹಾಸನ ಸಂಸದ ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಕಲಬುರ್ಗಿಯಲ್ಲಿ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರು ಪ್ರತಿಕ್ರಿಯೆ ನೀಡಿ ಈ ಒಂದು ಪ್ರಕರಣ ಇಟ್ಟುಕೊಂಡು ಒಕ್ಕಲಿಗ ನಾಯಕರು ಆಗಲು ಯತ್ನಿಸುತ್ತಿದ್ದಾರೆ ಆದರೆ ಇದರಿಂದ ಒಕ್ಕಲಿಗ ನಾಯಕರಾಗಲು ಸಾಧ್ಯವಿಲ್ಲ ಎಂದು ಪರೋಕ್ಷವಾಗಿ ಟಾಂಗ ನೀಡಿದರು.
ಕಲ್ಬುರ್ಗಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹಾಸನ ಸಂಸದ ಪ್ರಜ್ವಲ್ ರೇವಣ್ಣ ಪ್ರಕರಣಕ್ಕೆ ಸಂಬಂಧಿಸಿದಂತೆ ಪದೇ ಪದೇ ಪ್ರಧಾನಿ ನರೇಂದ್ರ ಮೋದಿ ಅವರನ್ನು ಎಳೆದು ತಂದು ಮಾತನಾಡುತ್ತಿದ್ದಾರೆ. ಇದು ಬಿಜೆಪಿಗೆ ಪ್ಲಸ್ ಪಾಯಿಂಟ್ ಆಗಲಿದೆ ಎಂದು ಎಚ್ ಡಿ ಕುಮಾರಸ್ವಾಮಿ ತಿಳಿಸಿದರು.
ಈ ವಿಚಾರವನ್ನು ಇಟ್ಟುಕೊಂಡು ಒಕ್ಕಲಿಗ ನಾಯಕತ್ವ ಪಡೆಯಲು ಯತ್ನಿಸಲಾಗುತ್ತಿದೆ ಇಂತಹ ವಿಷಯ ಇಟ್ಟುಕೊಂಡು ಒಕ್ಕಲಿಗ ನಾಯಕ ಆಗುವುದಕ್ಕೆ ಆಗುವುದಿಲ್ಲ ಎಂದು ಪರೋಕ್ಷವಾಗಿ ಡಿಕೆ ಶಿವಕುಮಾರ್ ಗೆ ಟಾಂಗ್ ನೀಡಿದರು.