ಶಿವಮೊಗ್ಗ : ಕರ್ನಾಟಕ ಒಕ್ಕಲಿಗ ಸಮುದಾಯ ಅಭಿವೃದ್ದಿ ನಿಗಮದಿಂದ ಒಕ್ಕಲಿಗ ಸಮುದಾಯದ ಜನರ ಆರ್ಥಿಕ ಅಭಿವೃದ್ದಿಗಾಗಿ 2022-23 ನೇ ಸಾಲಿಗೆ ವಿವಿಧ ಯೋಜನೆಗಳಡಿ ಸೌಲಭ್ಯ ಪಡೆಯಲು ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ.
BIG NEWS: ನಾಳೆ ಬೆಂಗಳೂರಿನ ಈ ಪ್ರದೇಶಗಳಲ್ಲಿ ‘ವಿದ್ಯುತ್ ವ್ಯತ್ಯಯ’ | Power Cut
ಹಿಂದುಳಿದ ವರ್ಗಗಳ ಪ್ರವರ್ಗ-3ಎ ಕ್ರಮ ಸಂಖ್ಯೆ 1 (ಎ) ರಿಂದ 1(ಟಿ) ವರೆಗೆ ನಮೂದಾಗಿರುವ ಒಕ್ಕಲಿಗ, ವಕ್ಕಲಿಗ, ಸರ್ಪ ಒಕ್ಕಲಿಗ, ಹಳ್ಳಿಕಾರ್ ಒಕ್ಕಲಿಗ, ನಾಮದಾರಿ ಒಕ್ಕಲಿಗ, ಗಂಗಡ್ಕಾರ್ ಒಕ್ಕಲಿಗ, ದಾಸ್ ಒಕ್ಕಲಿಗ, ರೆಡ್ಡಿ ಒಕ್ಕಲಿಗ, ಮರಸು ಒಕ್ಕಲಿಗ, ಗೌಡ(Gouda)/ಗೌಡ(Gowda) ಹಳ್ಳಿಕಾರ್, ಕುಂಚಟಿಗ, ಗೌಡ, ಕಾಪು, ಹೆಗ್ಗಡೆ, ಕಮ್ಮಾ, ರೆಡ್ಡಿ, ಗೌಡರ್, ನಾಮಧಾರಿತಗೌಡ, ಉಪ್ಪಿನ ಕೊಳಗ/ಉತ್ತಮ ಕೊಳಗ ಒಕ್ಕಲಿಗ ಸಮುದಾಯದವರು ಅರ್ಜಿ ಸಲ್ಲಿಸಬಹುದು.
ಸ್ವಯಂ ಉದ್ಯೋಗ ಯೋಜನೆ, ನಿರುದ್ಯೋಗಿ ಯುವಕರಿಗೆ ಟೂರಿಸ್ಟ್ ಟ್ಯಾಕ್ಸಿ/ಸರಕು ಸಾಗಾಣಿಕೆ ವಾಹನ ಕೈಗೊಳ್ಳಲು ಸಹಾಯಧನ ಯೋಜನೆ, ಸಣ್ಣ ಮತ್ತು ಅತಿ ಸಣ್ಣ ರೈತರ ಜಮೀನುಗಳಿಗೆ ನೀರಾವರಿ ಸೌಲಭ್ಯಗಳಾದ ಗಂಗಾ ಕಲ್ಯಾಣ ಯೋಜನೆಯಡಿ ವೈಯಕ್ತಿಕ ಕೊಳವೆಬಾವಿ, ಸಾಮೂಹಿಕ ನೀರಾವರಿ ಯೋಜನೆಯಡಿ ಸೌಲಭ್ಯ ಪಡೆಯಬಹುದಾಗಿದ್ದು ಅರ್ಜಿಯನ್ನು ನಿಗಮದ ವೆಬ್ಸೈಟ್ https://kvcdc.karnataka.gov.in ಇಲ್ಲಿ ಡೌನ್ಲೋಡ್ ಮಾಡಿ, ಭರ್ತಿ ಮಾಡಿದ ಅರ್ಜಿಯನ್ನು ಅಗತ್ಯ ದಾಖಲೆಗಳೊಂದಿಗೆ ಜಿಲ್ಲಾ ವ್ಯವಸ್ಥಾಪಕರ ಕಚೇರಿ, ಡಿ.ದೇವರಾಜ ಅರಸು ನಿಗಮದ ಜಿಲ್ಲಾ ವ್ಯವಸ್ಥಾಪಕರ ಕಚೇರಿ, ಭಾಗ್ಯ ನಿಲಯ, 1ನೇ ತಿರುವು, ಗಾಂಧಿನಗರ, ಶಿವಮೊಗ್ಗ ಇಲ್ಲಿ ಸಲ್ಲಿಸಬೇಕು. ಅರ್ಜಿ ಸಲ್ಲಿಸಲು ಆಗಸ್ಟ್ 18 ಕಡೆಯ ದಿನವಾಗಿದೆ.
BREAKING NEWS : ಖ್ಯಾತ ಟಾಲಿವುಡ್ ನಟ ‘ಪವನ್ ಕಲ್ಯಾಣ್’ ಆರೋಗ್ಯದಲ್ಲಿ ಏರುಪೇರು ; ಅಭಿಮಾನಿಗಳಲ್ಲಿ ಆತಂಕ
ಹಾಗೂ ಒಕ್ಕಲಿಗ ಸಮುದಾಯದ ಯುವಜನತೆಯ ಕೌಶಲ್ಯ ಅಭಿವೃದ್ದಿಪಡಿಸಿ ಉದ್ಯೋಗಮುಖಿಯನ್ನಾಗಿಸಲು ಸರ್ಕಾರದ ಸಂಸ್ಥೆಗಳಾದ ಐಟಿಟಿ, ಜಿಟಿಟಿಸಿ, ಕೆಜಿಟಿಟಿಐ ರಲ್ಲಿ ಅಲ್ಪಾವಧಿ ಕೋರ್ಸ್ಗಳ ಮೂಲಕ ಕೌಶಲ್ಯ ತರಬೇತಿ ನೀಡಲು ಆನ್ಲೈನ್ನಲ್ಲಿ ಕೌಶಲ್ಯ ಕರ್ನಾಟಕ ತಂತ್ರಾಂಶ https://www.kaushhl.kar.com ಮೂಲಕ ಉಚಿತವಾಗಿ ಅರ್ಜಿ ಸಲ್ಲಿಸಬಹುದು. ಈ ಕುರಿತು ಪೂರಕ ಮಾಹಿತಿ ಮತ್ತು ಅರ್ಜಿ ಸಲ್ಲಿಕೆ ಸೌಲಭ್ಯ ನಿಗಮದ ಅಧಿಕೃತ ಜಾಲತಾಣದಲ್ಲಿ ಲಭ್ಯವಿದೆ ಎಂದು ನಿಗಮದ ಜಿಲ್ಲಾ ವ್ಯವಸ್ಥಾಪಕರು ತಿಳಿಸಿದ್ದಾರೆ.