ಮಂಡ್ಯ : ಮಂಡ್ಯ ಲೋಕಸಭೆ ಚುನಾವಣಾ ಕಣ ರಂಗೇರಿದ್ದು, ಕಾಂಗ್ರೆಸ್ ಅಭ್ಯರ್ಥಿ ಪರ ನಟ ದರ್ಶನ್ ಇಂದು ಭರ್ಜರಿ ಪ್ರಚಾರ ಆರಂಭಿಸಿದ್ದಾರೆ.

ಇಂದು ಮಂಡ್ಯ ಲೋಕಸಭಾ ಕ್ಷೇತ್ರದ ಮಳವಳ್ಳಿ ವಿಧಾನಸಭಾ ಕ್ಷೇತ್ರದಲ್ಲಿ ದರ್ಶನ್ ಕಾಂಗ್ರೆಸ್ ಅಭ್ಯರ್ಥಿ ಸ್ಟಾರ್ ಚಂದ್ರು ಪರ ದರ್ಶನ್ ಪ್ರಚಾರ ನಡೆಸಿದ್ದು, ಕಾಂಗ್ರೆಸ್ ಅಭ್ಯರ್ಥಿ ಮತ ಹಾಕಿ. ಉದಯ್, ನರೇಂದ್ರ ಸ್ವಾಮಿ ಕೈ ಬಲ ಪಡಿಸಿ ಎಂದು ಮತದಾರರಲ್ಲಿ ಮನವಿ ಮಾಡಿದ್ದಾರೆ.

2019ರಲ್ಲಿ ಪಕ್ಷೇತರ ಅಭ್ಯರ್ಥಿಯಾಗಿದ್ದ ಸುಮಲತಾ ಅಂಬರೀಶ್ ಪರವಾಗಿ ನಟರಾದ ದರ್ಶನ್ ಮತ್ತು ಯಶ್ ಮಂಡ್ಯ ಕ್ಷೇತ್ರದ ಪ್ರತಿಯೊಂದು ಗ್ರಾಮಗಳಿಗೂ ತೆರಳಿ ಚುನಾವಣೆ ಪ್ರಚಾರ ನಡೆಸಿದರು. ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಶ್ ಪರ ಪ್ರಚಾರ ನಡೆಸಿ ಅವರ ಗೆಲುವಿನಲ್ಲಿ ಪ್ರಮುಖ ಪಾತ್ರ ವಹಿಸಿದ್ದ ದರ್ಶನ್, ಈ ಬಾರಿಯ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪರ ಪ್ರಚಾರ ನಡೆಸುತ್ತಿರುವುದು ಅಚ್ಚರಿಗೆ ಕಾರಣವಾಗಿದೆ.

Share.
Exit mobile version