ಮಂಡ್ಯ: ಕರ್ನಾಟಕಕ್ಕೆ ತೆರಿಗೆಯ ಆಗಿರುವ ಅನ್ಯಾಯದ ವಿರುದ್ಧ ಪ್ರತಿಭಟನೆ ಮಾಡಿದರೆ ಅವಮಾನ ಆಯಿತು ಎಂದು ಬಿಜೆಪಿಯವರು ಹೇಳುತ್ತಾರೆ. ಈ ದ್ರೋಹದ ವಿರುದ್ಧ ಅವರಿಗೆ ಪಾಠ ಕಲಿಸಬೇಕು ಎಂದರೆ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಗೆ ಬೆಂಬಲ ನೀಡಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ನೀಡಿದರು.
ಅವರು ಇಂದು ಮಳವಳ್ಳಿ ತಾಲೂಕಿನ ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ ಹಾಗೂ ಶಂಕುಸ್ಥಾಪನೆ ಮತ್ತು ಸರ್ಕಾರದ ಗ್ಯಾರೆಂಟಿ ಯೋಜನೆಗಳ ಫಲಾನುಭವಿಗಳ ಸಮಾವೇಶ ಉದ್ಘಾಟಿಸಿದ ನಂತರ ಸಭಿಕರನ್ನು ಉದ್ದೇಶಿಸಿ ಮಾತನಾಡಿದರು .
‘ಸುಪ್ರೀಂ ಕೋರ್ಟ್’ ಸೂಚಿಸಿದ ಜಾಗದಲ್ಲಿ ‘ರಾಮಮಂದಿರ’ ಕಟ್ಟಿಲ್ಲ: ಸಚಿವ ಸಂತೋಷ್ ಲಾಡ್
ಬಿಜೆಪಿ ಅನ್ವರ್ಥನಾಮ ‘ಸುಳ್ಳಿನ ಪಕ್ಷ’ : ರಾಜ್ಯಕ್ಕೆ ಬಿಜೆಪಿ ಹಾಗೂ ಜೆಡಿಎಸ್ ನಾಯಕರ ಕೊಡುಗೆ ಏನು? ಆದರೆ ಕಾಂಗ್ರೆಸ್ ಪಕ್ಷದ ಸ್ಥಳೀಯ ನಾಯಕರ ಜನರ ಬೇಡಿಕೆಯನ್ನು ನಮ್ಮ ಸರ್ಕಾರ ಈಡೇರಿಸಿದೆ. ಬಿಜೆಪಿಯ ಅನ್ವರ್ಥ ನಾಮವೆಂದರೆ ಸುಳ್ಳಿನ ಪಕ್ಷ. ಸ್ವತಂತ್ರ ಭಾರತದಲ್ಲಿ ಪ್ರಧಾನಿ ಮೋದಿಯವರಷ್ಟು ಸುಳ್ಳು ಹೇಳುವ ಪ್ರಧಾನಿ ಮತ್ತೊಬ್ಬರಿಲ್ಲ. 15 ಲಕ್ಷ ದೇಶದ ಜನರ ಖಾತೆಗೆ ಹಾಕುವ , ರೈತರ ಆದಾಯ ದುಪ್ಪಟ್ಟು, 7 ಕೋಟಿ ಉದ್ಯೋಗ ಸೃಷ್ಟಿಸುವ ಸುಳ್ಳು ಭರವಸೆಯನ್ನು ನೀಡಿ, ಈಡೇರಿಸಲಿಲ್ಲ ಎಂದರು. 20 ಸ್ಥಾನಗಳನ್ನು ಗೆಲ್ಲಲಿದೆ
ಬಿಜೆಪಿ ಢೋಂಗಿತನದ ಮಾತುಗಳನ್ನು ಆಡುತ್ತಾರೆ. 28 ಕ್ಕೆ 28 ಸ್ಥಾನಗಳನ್ನು ಗೆಲ್ಲುವುದಾಗಿ ಹೇಳಿದ್ದಾರೆ. ಕಾಂಗ್ರೆಸ್ ಪಕ್ಷ ಈ ಬಾರಿ ಲೋಕಸಭಾ ಚುನಾವಣೆಯಲ್ಲಿ ಕನಿಷ್ಠ 20 ಸ್ಥಾನಗಳನ್ನು ಗೆಲ್ಲಲಿದೆ. ನೀವು ಆಶೀರ್ವಾದ ಮಾಡುತ್ತೀರಿ ಎಂದು ನಂಬಿಕೆ ಇದೆ ಎಂದರು.