Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : `NEET UG’ ಮರುಪರೀಕ್ಷೆ : ವೈದ್ಯಕೀಯ ಕಾಲೇಜುಗಳಿಗೆ `NMC’ ಕಟ್ಟುನಿಟ್ಟಿನ ಮಾರ್ಗಸೂಚಿ ಪ್ರಕಟ!

BIG NEWS : ಅನರ್ಹ ಫಲಾನುಭವಿಗಳಿಗೆ ಶಾಕ್ : ಪಕ್ಕಾ ದಾಖಲೆ ಕೊಟ್ಟರಷ್ಟೇ ಸಿಗುತ್ತೆ `ಗೃಹಲಕ್ಷ್ಮಿ,ಗೃಹಜ್ಯೋತಿ’.!

ಬೆಂಗಳೂರಿನ ಜನತೆಯ ಗಮನಕ್ಕೆ : ಇಂದು ಬೆಳಿಗ್ಗೆ 10 ಗಂಟೆಯಿಂದ ಈ ಏರಿಯಾಗಳಲ್ಲಿ `ವಿದ್ಯುತ್ ವ್ಯತ್ಯಯ | POWER CUT

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ರಾಜ್ಯಸಭೆಯಲ್ಲಿ ವೋಟ್‌ ಚೋರಿ ಚರ್ಚೆ; ಕಾಂಗ್ರೆಸ್‌ ವಿರುದ್ಧ ಗುಡುಗಿದ ಮಾಜಿ ಪ್ರಧಾನಿ HD ದೇವೇಗೌಡ
KARNATAKA

ರಾಜ್ಯಸಭೆಯಲ್ಲಿ ವೋಟ್‌ ಚೋರಿ ಚರ್ಚೆ; ಕಾಂಗ್ರೆಸ್‌ ವಿರುದ್ಧ ಗುಡುಗಿದ ಮಾಜಿ ಪ್ರಧಾನಿ HD ದೇವೇಗೌಡ

By ವಸಂತ ಬಿ ಈಶ್ವರಗೆರೆ

ನವದೆಹಲಿ: ವೋಟ್‌ ಚೋರಿ ಹೆಸರಿನಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಸರಕಾರ ಹಾಗೂ ಸಾಂವಿಧಾನಿಕ ಸಂಸ್ಥೆಗಳ ವಿರುದ್ಧ ಸುಳ್ಳಿನ ಸಂಕಥನ ಸೃಷ್ಟಿಸುತ್ತಿರುವ ಪ್ರತಿಪಕ್ಷಗಳು ಭವಿಷ್ಯದಲ್ಲಿ ಘೋರ ಪರಿಣಾಮ ಅನುಭವಿಸುತ್ತವೆ ಎಂದು ಮಾಜಿ ಪ್ರಧಾನಿಗಳಾದ ಹೆಚ್.ಡಿ. ದೇವೇಗೌಡರು ಗಂಭೀರ ಎಚ್ಚರಿಕೆ ನೀಡಿದರು.

ರಾಜ್ಯಸಭೆಯಲ್ಲಿ ಸೋಮವಾರ ಈ ಕುರಿತ ಚರ್ಚೆಯಲ್ಲಿ ಪಾಲ್ಗೊಂಡು ಮಾತನಾಡಿದ ಮಾಜಿ ಪ್ರಧಾನಿಗಳು; ಪ್ರತಿಪಕ್ಷಗಳು ನಿರಂತರವಾಗಿ ಸುಳ್ಳಿನ ಕಥೆಗಳನ್ನು ಪ್ರಚಾರ ಮಾಡುತ್ತಾ ಹೋದರೆ, ಮತದಾರರ ಮನಸ್ಸಿನಲ್ಲಿ ಅನುಮಾನಗಳನ್ನು ಹುಟ್ಟು ಹಾಕಿದರೆ ಅದರಿಂದ ಪ್ರತಿಪಕ್ಷಗಳಿಗೆ ಒಳ್ಳೆಯದು ಮಾಡುವುದಿಲ್ಲ ಎಂದು ಹೇಳಿದರು.

ಪ್ರತಿಪಕ್ಷಗಳು ಪ್ರಧಾನಿಯವರ ಬಗ್ಗೆ ಹಾದಿಬೀದಿಗಳಲ್ಲಿ ಮತ್ತು ಸಾರ್ವಜನಿಕ ವೇದಿಕೆಗಳಲ್ಲಿ ಕಟ್ಟದ್ದಾಗಿ ಟೀಕೆ ಮಾಡುತ್ತಿರುವ ಬಗ್ಗೆ ಮಾಜಿ ಪ್ರಧಾನಿಗಳು ಹರಿಹಾಯ್ದರು.

“ನಮ್ಮದು ಬಹಳ ದೊಡ್ಡ ರಾಷ್ಟ್ರ. ಕಾಂಗ್ರೆಸ್ ಪಕ್ಷವು ಮೂರು ರಾಜ್ಯಗಳಲ್ಲಿ ಅಧಿಕಾರದಲ್ಲಿ ಇರಬಹುದು. ನನ್ನ ಪ್ರತಿಪಕ್ಷ ಸ್ನೇಹಿತರೇ ದಯವಿಟ್ಟು ನೆನಪಿಡಿ ‘ವೋಟ್ ಚೋರಿ’ ಎಂಬ ಪದಗಳನ್ನು ಬಳಸುವುದರಿಂದ ನೀವು ಮುಂಬರುವ ದಿನಗಳಲ್ಲಿ ತೊಂದರೆ ಅನುಭವಿಸುತ್ತೀರಿ. ನೀವು ಯುದ್ಧದಲ್ಲಿ ಗೆಲ್ಲಲು ಸಾಧ್ಯವಿಲ್ಲ ಎಂದು ದೇವೇಗೌಡರು ಕಟುವಾದ ಶಬ್ದಗಳಲ್ಲಿ ಹೇಳಿದರು.

ʼವೋಟ್ ಚೋರಿʼ ಎಂಬ ಅಪಪ್ರಚಾರದ ಮೂಲಕ ನರೇಂದ್ರ ಮೋದಿ ಅವರ ನಾಯಕತ್ವವನ್ನು ದೂಷಿಸುವ ಮೂಲಕ ಮತ್ತು ಮತದಾರರ ಮನಸ್ಸಿನಲ್ಲಿ ಅನುಮಾನವನ್ನು ಸೃಷ್ಟಿಸುವ ಮೂಲಕ ಪ್ರತಿಪಕ್ಷಗಳು ಏನು ಗಳಿಸಲಿವೆ ಎಂದು ಪ್ರಶ್ನಿಸಿದ ಮಾಜಿ ಪ್ರಧಾನಿಗಳು, ನಿಮ್ಮ ಮನಸ್ಸಿಗೆ ಏನಾಗಿದೆ? ಏನಾದರೂ ಸಮಸ್ಯೆ ಇದ್ದರೆ ಸರಿಪಡಿಸಿಕೊಳ್ಳಿ ಎಂದು ಪ್ರತಿಪಕ್ಷದವರಿಗೆ ಕಿವಿಮಾತು ಹೇಳಿದರು.

ನಾನು ಏಳು ದಶಕಗಳಿಗೂ ಹೆಚ್ಚಿನ ಸಾರ್ವಜನಿಕ ಜೀವನದಲ್ಲಿ ಚುನಾವಣೆಯಲ್ಲಿ ಸೋಲು ಗೆಲುವನ್ನು ಎದುರಿಸಿದ್ದೇನೆ. ನಾನು ಎಂದಿಗೂ ಮತಗಳ್ಳತನದ ಅಂತಹ ವಿಷಯಗಳನ್ನು ಹೇಳಲಿಲ್ಲ ಎಂದು ಮಾಜಿ ಪ್ರಧಾನಿಗಳು ಒತ್ತಿ ಹೇಳಿದರು.

ಕೇರಳದಲ್ಲಿ 18,000 ಮತದಾರರ ಸೇರ್ಪಡೆಗೆ ಸಂಬಂಧಿಸಿದಂತೆ ಅಂದಿನ ಪ್ರಧಾನಿ ಜವಾಹರಲಾಲ್ ನೆಹರು ಬರೆದ ಪತ್ರವನ್ನು ಅವರು ಉಲ್ಲೇಖಿಸಿದರು.

“ನಾನು ಇದನ್ನು ಏಕೆ ಹೇಳುತ್ತಿದ್ದೇನೆಂದರೆ ನೆಹರು ಅವಧಿಯಲ್ಲಿಯೂ ಸಹ ಚುನಾವಣಾ ವ್ಯವಸ್ಥೆಯಲ್ಲಿ ಕೆಲವು ಲೋಪಗಳು ಇದ್ದವು ಎಂಬುದಾಗಿ ಜೂನ್ 1, 1996 ಮತ್ತು ಏಪ್ರಿಲ್ 21, 1997ರ ನಡುವೆ ಪ್ರಧಾನಿಯಾಗಿದ್ದ ದೇವೇಗೌಡರು ಹೇಳಿದರು.

ಮತದಾರರ ಪಟ್ಟಿಯಲ್ಲಿನ ಲೋಪಗಳನ್ನು ಪ್ರಸ್ತಾಪಿಸಿಯೂ ಕಾಂಗ್ರೆಸ್ ಪಕ್ಷವು ಇತ್ತೀಚಿಗೆ ಬಿಹಾರ ಚುನಾವಣೆಯಲ್ಲಿ ಸೋಲು ಎದುರಿಸಿತು . ಮತದಾರರ ಪಟ್ಟಿಯ ಕೂಲಂಕಶ ಪರಿಶೀಲನೆಯ ನಂತರವೂ ಆ ರಾಜ್ಯದಲ್ಲಿ ಏನಾಯಿತು ಎಂಬುದನ್ನು ಸ್ವತಃ ಪ್ರತಿಪಕ್ಷ ನಾಯಕರು ಆಲೋಚಿಸಬೇಕು. ಆ ರಾಜ್ಯದಲ್ಲಿ ಕಾಂಗ್ರೆಸ್‌ ಪಕ್ಷಕ್ಕೆ ಆರು ಶಾಸಕರು ಸಿಕ್ಕಿದ್ದಾರೆ ಎಂದು ಮಾಜಿ ಪ್ರಧಾನಿಗಳು ಕಟುವಾಗಿ ಟೀಕಿಸಿದರು.

ಮತದಾರರ ಪಟ್ಟಿಯ ಪರಿಷ್ಕರಣೆ ಬಗ್ಗೆ ಪ್ರಧಾನಿಗಳ ವಿರುದ್ಧ ಪ್ರತಿಪಕ್ಷಗಳು ಆರೋಪಗಳನ್ನು ಮಾಡಲು ಅವರು ಏಕೆ ಬಯಸುತ್ತಾರೆ ಎಂದು ಖಾರವಾಗಿ ಪ್ರಶ್ನಿಸಿದ ದೇವೇಗೌಡರು; ದೇಶದಲ್ಲಿ ಚುನಾವಣಾ ಆಯೋಗವಿದೆ, ಸುಪ್ರೀಂ ಕೋರ್ಟ್ ಇದೆ. ಈ ಎಲ್ಲ ವಿಷಯಗಳನ್ನು ಸರಿಪಡಿಸಲು ಚುನಾವಣಾ ಆಯೋಗವು ಎಲ್ಲಾ ರಾಜ್ಯ ಘಟಕಗಳಿಗೆ ನಿರ್ದೇಶನ ನೀಡಿದೆ ಎಂದು ಅವರು ಒತ್ತಿ ಹೇಳಿದರು.

ರಾಷ್ಟ್ರದ ಜನರು ನರೇಂದ್ರ ಮೋದಿ ಅವರ ಸರಕಾರದ ಮೇಲೆ ಸಂಪೂರ್ಣ ವಿಶ್ವಾಸ ಹೊಂದಿದ್ದಾರೆ ಮತ್ತು ಮುಂದಿನ ಲೋಕಸಭೆ ಚುನಾವಣೆಯ ನಂತರವೂ ಅವರು ಮತ್ತೆ ಅಧಿಕಾರಕ್ಕೆ ಬರುತ್ತಾರೆ ಎಂದು ದೇವೇಗೌಡರು ಭವಿಷ್ಯ ನುಡಿದರು.

ಜಿಬಿಎ ವ್ಯಾಪ್ತಿಯಲ್ಲಿ ಶೇ.100ರಷ್ಟು ‘ಪಲ್ಸ್ ಪೋಲಿಯೋ’ ಗುರಿ ಸಾಧಿಸಿ: ಮುಖ್ಯ ಆಯಯುಕ್ತ ಮಹೇಶ್ವರ್ ರಾವ್

BREAKING: ಸಕಲ ಸರ್ಕಾರಿ ಗೌರವಗಳೊಂದಿಗೆ ಶಾಮನೂರು ಶಿವಶಂಕರಪ್ಪ ಅಂತ್ಯಕ್ರಿಯೆ: ಇನ್ನೂ ಕೊಡುಗೈ ದಾನಿ ನೆನಪು ಮಾತ್ರ

Share. Facebook Twitter LinkedIn WhatsApp Email

Related Posts

BIG NEWS : ಅನರ್ಹ ಫಲಾನುಭವಿಗಳಿಗೆ ಶಾಕ್ : ಪಕ್ಕಾ ದಾಖಲೆ ಕೊಟ್ಟರಷ್ಟೇ ಸಿಗುತ್ತೆ `ಗೃಹಲಕ್ಷ್ಮಿ,ಗೃಹಜ್ಯೋತಿ’.!

2 Mins Read

ಬೆಂಗಳೂರಿನ ಜನತೆಯ ಗಮನಕ್ಕೆ : ಇಂದು ಬೆಳಿಗ್ಗೆ 10 ಗಂಟೆಯಿಂದ ಈ ಏರಿಯಾಗಳಲ್ಲಿ `ವಿದ್ಯುತ್ ವ್ಯತ್ಯಯ | POWER CUT

2 Mins Read

ಕರುನಾಡಿಗೆ ಬರದ ಆತಂಕ: ಕೈಕೊಟ್ಟ ಮುಂಗಾರು, ಅನ್ನದಾತ ಕಂಗಾಲು!

1 Min Read
Recent News

BREAKING : `NEET UG’ ಮರುಪರೀಕ್ಷೆ : ವೈದ್ಯಕೀಯ ಕಾಲೇಜುಗಳಿಗೆ `NMC’ ಕಟ್ಟುನಿಟ್ಟಿನ ಮಾರ್ಗಸೂಚಿ ಪ್ರಕಟ!

BIG NEWS : ಅನರ್ಹ ಫಲಾನುಭವಿಗಳಿಗೆ ಶಾಕ್ : ಪಕ್ಕಾ ದಾಖಲೆ ಕೊಟ್ಟರಷ್ಟೇ ಸಿಗುತ್ತೆ `ಗೃಹಲಕ್ಷ್ಮಿ,ಗೃಹಜ್ಯೋತಿ’.!

ಬೆಂಗಳೂರಿನ ಜನತೆಯ ಗಮನಕ್ಕೆ : ಇಂದು ಬೆಳಿಗ್ಗೆ 10 ಗಂಟೆಯಿಂದ ಈ ಏರಿಯಾಗಳಲ್ಲಿ `ವಿದ್ಯುತ್ ವ್ಯತ್ಯಯ | POWER CUT

ALERT : `ಫೋನ್‌ ಪೇ ವ್ಯಾಲೆಟ್’ ಬಳಕೆದಾರರಿಗೆ ಎಚ್ಚರಿಕೆ : ಈ ಹೊಸ ನಿಯಮ ತಿಳಿಯದಿದ್ದರೆ ಬ್ಯಾಲೆನ್ಸ್ ಖಾಲಿ.!

State News
KARNATAKA

BIG NEWS : ಅನರ್ಹ ಫಲಾನುಭವಿಗಳಿಗೆ ಶಾಕ್ : ಪಕ್ಕಾ ದಾಖಲೆ ಕೊಟ್ಟರಷ್ಟೇ ಸಿಗುತ್ತೆ `ಗೃಹಲಕ್ಷ್ಮಿ,ಗೃಹಜ್ಯೋತಿ’.!

By kannadanewsnow57 KARNATAKA 2 Mins Read

ಬೆಂಗಳೂರು : ರಾಜ್ಯ ಸರ್ಕಾರವು ಜಾರಿಗೆ ತಂದಿರುವ ಪಂಚ ಗ್ಯಾರಂಟಿ ಯೋಜನೆಗಳು ದುರುಪಯೋಗವಾಗುವುದನ್ನು ತಡೆಯಲು ಮತ್ತು ನಕಲಿ ಫಲಾನುಭವಿಗಳನ್ನು ಹೊರಗಿಡಲು…

ಬೆಂಗಳೂರಿನ ಜನತೆಯ ಗಮನಕ್ಕೆ : ಇಂದು ಬೆಳಿಗ್ಗೆ 10 ಗಂಟೆಯಿಂದ ಈ ಏರಿಯಾಗಳಲ್ಲಿ `ವಿದ್ಯುತ್ ವ್ಯತ್ಯಯ | POWER CUT

ಕರುನಾಡಿಗೆ ಬರದ ಆತಂಕ: ಕೈಕೊಟ್ಟ ಮುಂಗಾರು, ಅನ್ನದಾತ ಕಂಗಾಲು!

BREAKING : ನಟಿ ರುಕ್ಮಿಣಿ ವಸಂತ ಫೋಟೋ ಡೀಪ್‌ ಫೇಕ್ ಕೇಸ್ : ಮೂವರು ಆರೋಪಿಗಳು ಅರೆಸ್ಟ್.!

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.