Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ವಿದ್ಯಾರ್ಥಿಗಳ ಗಮನಕ್ಕೆ: ಕುವೆಂಪು ವಿವಿಯಿಂದ ಸ್ನಾತಕೋತ್ತರ ಪದವಿ ಪ್ರವೇಶ ಅರ್ಜಿ ಸಲ್ಲಿಕೆಗೆ ಅವಧಿ ವಿಸ್ತರಣೆ

08/08/2025 8:49 PM

ಮತಗಳ್ಳತನ: ಅಕ್ರಮ ಪರಿಶೀಲನೆಗೆ ಚುನಾವಣಾ ಆಯೋಗಕ್ಕೆ ಡಿಸಿಎಂ ಡಿ.ಕೆ ಶಿವಕುಮಾರ್ ಮನವಿ

08/08/2025 8:47 PM

PM E-DRIVE ಯೋಜನೆಯ ಅವಧಿ 2 ವರ್ಷ ವಿಸ್ತರಣೆ: ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಘೋಷಣೆ

08/08/2025 8:40 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಮತಗಳ್ಳತನ: ಅಕ್ರಮ ಪರಿಶೀಲನೆಗೆ ಚುನಾವಣಾ ಆಯೋಗಕ್ಕೆ ಡಿಸಿಎಂ ಡಿ.ಕೆ ಶಿವಕುಮಾರ್ ಮನವಿ
Uncategorized

ಮತಗಳ್ಳತನ: ಅಕ್ರಮ ಪರಿಶೀಲನೆಗೆ ಚುನಾವಣಾ ಆಯೋಗಕ್ಕೆ ಡಿಸಿಎಂ ಡಿ.ಕೆ ಶಿವಕುಮಾರ್ ಮನವಿ

By kannadanewsnow0908/08/2025 8:47 PM

ಬೆಂಗಳೂರು: “ಇಡೀ ರಾಜ್ಯದಲ್ಲಿ ಮತದಾರರ ಪಟ್ಟಿ ಅಕ್ರಮದ ಪರಿಶೀಲನೆ ಮಾಡಲು ಚುನಾವಣಾ ಆಯೋಗಕ್ಕೆ ಮನವಿ ಮಾಡಿದ್ದೇವೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು.

ಮಹದೇವಪುರ ವಿಧಾನಸಭೆ ಕ್ಷೇತ್ರ ಸೇರಿದಂತೆ ರಾಜ್ಯದ ನಾನಾ ಕಡೆ ಚುನಾವಣೆ ಆಯೋಗದಿಂದಲೇ ಮತ ಅಕ್ರಮ ಕುರಿತು ಕೆಪಿಸಿಸಿ ಅಧ್ಯಕ್ಷರೂ ಆದ ಡಿ ಕೆ ಶಿವಕುಮಾರ್ ನೇತೃತ್ವದ ಕಾಂಗ್ರೆಸ್ ಮುಖಂಡರ ನಿಯೋಗ ಬೆಂಗಳೂರಿನಲ್ಲಿ ರಾಜ್ಯ ಚುನಾವಣೆ ಆಯೋಗದ ಕಚೇರಿಗೆ ತೆರಳಿ ದೂರು ಸಲ್ಲಿಸಿತು. ನಂತರ ಶಿವಕುಮಾರ್ ಅವರು ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದರು.

“ಅನ್ಯಾಯದ ವಿರುದ್ಧ ಹೋರಾಡಿ, ಮತದಾನದ ಹಕ್ಕು ರಕ್ಷಣೆ ಮಾಡಿಕೊಳ್ಳಲು ನಮ್ಮ ನಾಯಕರಾದ ಮಲ್ಲಿಕಾರ್ಜುನ ಖರ್ಗೆ ಹಾಗೂ ರಾಹುಲ್ ಗಾಂಧಿ ಅವರ ನೇತೃತ್ವದಲ್ಲಿ ನಾವು ಇಂದು ಪ್ರತಿಭಟನೆ ನಡೆಸಿದ್ದೆವು. ಕೋರ್ಟ್ ಆದೇಶ ಗಮನದಲ್ಲಿಟ್ಟುಕೊಂಡು, ಚುನಾವಣಾ ಆಯೋಗದ ಕಚೇರಿಗೆ ಮೆರವಣಿಗೆ ಮೂಲಕ ಬರುವುದು ಬೇಡ ಎಂದು ತೀರ್ಮಾನಿಸಿ ಪಕ್ಷದ ವತಿಯಿಂದ ಕೆಲವು ನಾಯಕರಷ್ಟೇ ಆಗಮಿಸಿದ್ದೇವೆ. ಚುನಾವಣೆಯಲ್ಲಿ ಹೇಗೆ ಅನ್ಯಾಯವಾಗಿದೆ ಎಂದು ರಾಹುಲ್ ಗಾಂಧಿ ಅವರು ಹೇಳಿದ್ದಾರೆ. ಇದು ರಾಜ್ಯದ ಉದ್ದಗಲಕ್ಕೆ ನಡೆದಿರುವ ಅನ್ಯಾಯ. ನಾವು ಕೆಲವು ಕ್ಷೇತ್ರಗಳಲ್ಲಿ ಮಾತ್ರ ಅಧ್ಯಯನ ಮಾಡಿದ್ದೇವೆ. ನಾವು ಐದಾರು ಪ್ರದೇಶಗಳನ್ನು ಪ್ರಸ್ತಾಪಿಸಿ, ಇಡೀ ರಾಜ್ಯದಲ್ಲಿ ಮತದಾರರ ಪಟ್ಟಿ ಪರಿಶೀಲನೆ ಮಾಡಬೇಕು ಎಂದು ಮನವಿ ಮಾಡಿದ್ದೇವೆ” ಎಂದರು.

“ಆಯೋಗಕ್ಕೆ ನಾವು ಮಹದೇವಪುರ ಹಾಗೂ ಗಾಂಧಿನಗರದ ಮಾದರಿಗಳನ್ನು ನಾವು ಸಲ್ಲಿಕೆ ಮಾಡಿಲ್ಲ. ನಿನ್ನೆ ಮಾಧ್ಯಮಗೋಷ್ಠಿಯಲ್ಲಿ ರಾಹುಲ್ ಗಾಂಧಿ ಅವರು ಬಿಡುಗಡೆ ಮಾಡಿದ್ದು ಕೇವಲ ಉದಾಹರಣೆ. ರಾಜ್ಯದ ಕೆಲವು ಭಾಗಗಳಲ್ಲಿ ಈ ರೀತಿ ಅನ್ಯಾಯವಾಗಿದ್ದು, ಎಲ್ಲಾ ಕಡೆ ಪರಿಶೀಲನೆ ಮಾಡಿ ಈ ಅಕ್ರಮವನ್ನು ಪತ್ತೆಹಚ್ಚಬೇಕು. ಈ ಅಕ್ರಮದಲ್ಲಿ ಭಾಗಿಯಾಗಿರುವ ರಿಟರ್ನಿಂಗ್ ಅಧಿಕಾರಿ, ಬಿಎಲ್ಒ ಸೇರಿದಂತೆ ಯಾರೇ ಆಗಿದ್ದರೂ ಸೂಕ್ತ ಕ್ರಮ ಜರುಗಿಸಬೇಕು ಎಂದು ಒತ್ತಾಯಿಸಿದ್ದೇವೆ” ಎಂದು ಮಾಹಿತಿ ನೀಡಿದರು.

“ಒಂದೇ ಮತದಾರರ ಹೆಸರನ್ನು ಐದು ಕಡೆ ಸೇರಿಸುವುದು, ಮನೆ ವಿಳಾಸ ಇಲ್ಲದೆ ಮತಪಟ್ಟಿಯಲ್ಲಿ ಸೇರಿಸುವುದು, ಖಾಲಿ ನಿವೇಶನಗಳ ವಿಳಾಸದಲ್ಲಿ ನಕಲಿ ಮತ ಸೇರಿಸುವುದು, ಮತಗಳನ್ನು ಪಕ್ಕದ ಬೂತ್ ಗಳಿಗೆ ವರ್ಗಾಯಿಸಿ ಅಕ್ರಮ ಎಸಗಿರುವುದಕ್ಕೆ ಸಾಕಷ್ಟು ದಾಖಲೆಗಳಿವೆ. ಹೀಗಾಗಿ ನಾವು ಆಯೋಗಕ್ಕೆ 8-10 ಅಂಶಗಳನ್ನು ಹಾಕಿ ಪ್ರಸ್ತಾವನೆ ಸಲ್ಲಿಸಿದ್ದೇವೆ. ಮತದಾರರ ಪಟ್ಟಿಯ ಡಿಜಿಟಲ್ ಮಾದರಿ ಸೇರಿದಂತೆ ನಮಗೆ ಯಾವ ರೀತಿ ಮಾಹಿತಿ ಬೇಕು ಎಂದು ಆಯೋಗಕ್ಕೆ ಕೇಳಿದ್ದೇವೆಯೇ ಹೊರತು, ನಾವು ಸಂಪೂರ್ಣ ವಿವರವನ್ನು ನೀಡಿಲ್ಲ” ಎಂದು ಸ್ಪಷ್ಟನೆ ನೀಡಿದರು.

ಆಯೋಗದ ಅಧಿಕಾರಿಗಳು ಅಕ್ರಮ ಪರಿಶೀಲನೆಗೆ ಮುಂದಾಗಿರುವುದು ಸ್ವಾಗತಾರ್ಹ

“ಚುನಾವಣಾ ಆಯೋಗಕ್ಕೆ ಹೊಸದಾಗಿ ಬಂದಿರುವ ಅನ್ಬುಕುಮಾರ್ ಅವರು ಪರಿಶೀಲನೆ ಆರಂಭಿಸಿರುವುದಾಗಿ ನಮಗೆ ತಿಳಿಸಿದರು. ಅವರ ಕ್ರಮ ಸ್ವಾಗತಾರ್ಹ. ಯಾವ ಕ್ಷೇತ್ರಗಳಲ್ಲಿ ಏನೆಲ್ಲಾ ಅನ್ಯಾಯ ಆಗಿದೆ, ಮುಂದೆ ಏನೆಲ್ಲಾ ಕ್ರಮ ಕೈಗೊಳ್ಳಬೇಕು ಎಂಬ ವಿಚಾರ ತಿಳಿಸುತ್ತೇವೆ. ಇದು ಕೇವಲ ಕರ್ನಾಟಕ ಅಥವಾ ಮಹದೇವಪುರಕ್ಕೆ ಸೀಮಿತವಾದ ಹೋರಾಟವಲ್ಲ” ಎಂದು ತಿಳಿಸಿದರು.

“ನಿಮ್ಮದೇ ಸರ್ಕಾರ, ನಿಮ್ಮದೇ ಅಧಿಕಾರಿ ಎಂದು ಕೆಲವರಲ್ಲಿ ಪ್ರಶ್ನೆ ಮೂಡಬಹುದು. ಎಲ್ಲಾ ನಿಯಂತ್ರಣ ಆಯೋಗದ ಕೈಯಲ್ಲಿ ಇರಲಿದೆ. ಕಂಪ್ಯೂಟರ್ ನಲ್ಲಿ ನನ್ನ ಹೆಸರು ಹಾಕಿದರೆ, ನನ್ನ ಹೆಸರಲ್ಲಿ ಎಷ್ಟು ಕಡೆ ಮತ ಇದೆ ಎಂದು ಗೊತ್ತಾಗುತ್ತದೆ. ಇದನ್ನು ಪರಿಶೀಲಿಸುವಷ್ಟು ಸೌಜನ್ಯ ಚುನಾವಣಾ ಆಯೋಗದ ಅಧಿಕಾರಿಗಳಿಗೆ ಇರಬೇಕು. ಹೀಗಾಗಿ ನಾವು ಅವರ ಗಮನ ಸೆಳೆದಿದ್ದೇವೆ. ಇಡೀ ದೇಶದಲ್ಲಿ ಇದು ವ್ಯಾಪಕ ಚರ್ಚೆ ಆಗಬೇಕಿದೆ. ಈ ನಿಟ್ಟಿನಲ್ಲಿ ನಾವು ಪ್ರತಿಭಟನೆ ನಡೆಸಿದ್ದು, ಮುಂದಿನ ದಿನಗಳಲ್ಲಿ, ಇದನ್ನು ಮುಂದುವರಿಸುತ್ತೇವೆ” ಎಂದರು.

ರಾಹುಲ್ ಗಾಂಧಿ ಅವರಿಂದ ಅಫಿಡವಿಟ್ ಬೇಕು ಎಂಬ ಆಯೋಗದ ಹೇಳಿಕೆ ಬಗ್ಗೆ ಕೇಳಿದಾಗ, “ಯಾವ ಅಫಿಡವಿಟ್ ಬೇಕು? ನಾನು, ರಾಹುಲ್ ಗಾಂಧಿ ಅವರೇ ಅಫಿಡವಿಟ್. ಚುನಾವಣೆಗೆ ಸ್ಪರ್ಧಿಸುವಾಗ, ಗೆದ್ದ ನಂತರ ನಮ್ಮಿಂದ ಅಫಿಡವಿಟ್ ತೆಗೆದುಕೊಂಡ ಮೇಲೆ ನಮ್ಮ ಮಾತಿಗಿಂತ ಇನ್ನೇನು ಅಫಿಡವಿಟ್ ಬೇಕು? ನಾವು ಸುಳ್ಳು ಹೇಳಿದ್ದರೆ, ಗಲ್ಲಿಗೆ ಹಾಕಿ. ರಾಹುಲ್ ಗಾಂಧಿ ಅವರ ಆರೋಪವನ್ನು ಆಯೋಗದವರು ನಿರಾಕರಿಸಿದ್ದಾರಾ? ಅವರು ಅಫಿಡವಿಟ್ ಕೇಳಿದ ಕಾರಣಕ್ಕೆ ನಾವು ಅವರಿಂದ ಮಾಹಿತಿ ಬಯಸುತ್ತಿದ್ದೇವೆ. ನಾವು ಪಡೆದಿರುವ ಮಾಹಿತಿ ಆರ್ ಟಿಐ ಮೂಲಕ ಸಂಗ್ರಹಿಸಿರುವ ಮಾಹಿತಿ” ಎಂದು ತಿಳಿಸಿದರು.

ಅಕ್ರಮ ಎಲ್ಲೇ ಆಗಲಿ, ಯಾರೇ ಮಾಡಲಿ, ತಪ್ಪು ತಪ್ಪೇ:

ಅರವಿಂದ ಲಿಂಬಾವಳಿ ಅವರು ಚಾಮರಾಜಪೇಟೆ, ವರುಣಾ ಕ್ಷೇತ್ರಗಳಲ್ಲಿ ಡಬಲ್ ಎನ್ ರೋಲ್ ಆಗಿರುವ ಬಗ್ಗೆ ಮಾಹಿತಿ ನೀಡಿರುವ ಬಗ್ಗೆ ಕೇಳಿದಾಗ, “ವರುಣಾ, ಚಾಮರಾಜಪೇಟೆ, ಕನಕಪುರ ಯಾವುದೇ ಕ್ಷೇತ್ರ ಇರಲಿ. ಈ ತಪ್ಪು ಎಲ್ಲಾದರೂ ತಪ್ಪೆ. ಕ್ರಮ ಕೈಗೊಳ್ಳಲಿ. ಸಂವಿಧಾನದ ಆಶಯ ಹಾಗೂ ನ್ಯಾಯಸಮ್ಮತ ಚುನಾವಣೆ ನಡೆಯಬೇಕು” ಎಂದು ತಿಳಿಸಿದರು.

ಬಿಜೆಪಿ ನಾಯಕರ ಟೀಕೆ ಬಗ್ಗೆ ಕೇಳಿದಾಗ, “ನಾವು ಬಿಜೆಪಿ ನಾಯಕರ ಹೇಳಿಕೆಗಳಿಗೆ ಉತ್ತರ ನೀಡುವುದಿಲ್ಲ. ನಮ್ಮ ಹೋರಾಟ ಏನಿದ್ದರೂ ಚುನಾವಣಾ ಆಯೋಗದ ವಿರುದ್ಧ. ಅವರು ಒಂದು ಪಕ್ಷದ ಧ್ವನಿಯಾಗಿ ಕೆಲಸ ಮಾಡಬಾರದು ಎಂಬುದು ನಮ್ಮ ಹೋರಾಟ” ಎಂದು ತಿಳಿಸಿದರು.

ನನ್ನ ಕ್ಷೇತ್ರದ ಎರಡು ವಿಧಾಸಭಾ ಕ್ಷೇತ್ರದಲ್ಲಿ ಈ ರೀತಿ ಆಗಿದೆ ಎಂಬ ಡಿ.ಕೆ. ಸುರೇಶ್ ಅವರ ಹೇಳಿಕೆ ಬಗ್ಗೆ ಕೇಳಿದಾಗ, “ಅವರು ಈ ಹಿಂದೆಯೇ ಕೇಂದ್ರ ಚುನಾವಣಾ ಆಯೋಗಕ್ಕೆ ಹೋಗಿ ಮಾಹಿತಿ ಸಮೇತ ಪತ್ರ ಬರೆದಿದ್ದರು. ಅದರ ದಾಖಲೆ ನನ್ನ ಬಳಿ ಇದೆ. ಆದರೆ ಆಯೋಗ ಆ ಪತ್ರವನ್ನು ಗಣನೆಗೆ ತೆಗೆದುಕೊಳ್ಳಲಿಲ್ಲ” ಎಂದರು.

ಸಂಪೂರ್ಣ ವಿವರವನ್ನು ಯಾವಾಗ ನೀಡುತ್ತೀರಿ ಎಂದು ಕೇಳಿದಾಗ, “ನಾವು ಆಯೋಗದಿಂದ ಕೆಲವು ಮಾಹಿತಿಗಳನ್ನು ಕೇಳಿದ್ದು, ಅವರು ಮಾಹಿತಿ ಕೊಡಲಿ” ಎಂದರು.

ಇಂಡಿಯಾ ಟುಡೆ ಫ್ಯಾಕ್ಟ್ ಚೆಕ್ ಗೆ ಅಭಿನಂದನೆ:

ಇಂಡಿಯಾ ಟುಡೆ ಮಾಡಿರುವ ಫ್ಯಾಕ್ಟ್ ಚೆಕ್ ವರದಿಯಲ್ಲಿ ರಾಹುಲ್ ಗಾಂಧಿ ಅವರ ಆರೋಪ ಸಾಬೀತಾಗಿರುವುದರ ಬಗ್ಗೆ ಕೇಳಿದಾಗ, “ನಾನು ಮೊದಲು ಇಂಡಿಯಾ ಟುಡೆ ಮಾಧ್ಯಮಕ್ಕೆ ಅಭಿನಂದನೆ ಸಲ್ಲಿಸುತ್ತೇನೆ. ಮಾಧ್ಯಮಗಳು ಕೂಡ ಪ್ರಜಾಪ್ರಭುತ್ವದ ಭಾಗ. ನಾವೆಲ್ಲರೂ ಸೇರಿ ಇದನ್ನು ಉಳಿಸಬೇಕು. ನಾವೆಲ್ಲರೂ ಪ್ರಜಾಪ್ರಭುತ್ವದ ಆಧಾರ ಸ್ತಂಭಗಳು. ನಿಮ್ಮ ಕಾರ್ಯಕ್ಕೆ ನಾನು ಅಭಿನಂದನೆ ಸಲ್ಲಿಸುತ್ತೇನೆ. ಚುನಾವಣಾ ಆಯೋಗಕ್ಕೆ ಆಕ್ಷೇಪಣೆ ಹಾಕಲು ಈಗ ಕಾಲ ಮೀರಿದೆ ಎಂಬ ಅರಿವು ನಮಗಿದೆ. ಆದರೆ ಹದಗೆಟ್ಟಿರುವ ವ್ಯವಸ್ಥೆಯನ್ನು ಸರಿಪಡಿಸಲು ಪ್ರಯತ್ನಿಸುತ್ತಿದ್ದೇವೆ” ಎಂದು ತಿಳಿಸಿದರು.

ಕೆಲವು ರಾಜ್ಯಗಳ ಚುನಾವಣಾ ಆಯೋಗದ ವೆಬ್ ಸೈಟ್ ಬಂದ್ ಆಗಿರುವ ಬಗ್ಗೆ ಕೇಳಿದಾಗ, “ಇದು ಎಲ್ಲಾ ರಾಜಕೀಯ ಪಕ್ಷಗಳು ಕಣ್ತೆರೆಸುವ ವಿಚಾರ. ಇದು ಒಂದು ಪಕ್ಷದ ಸಮಸ್ಯೆಯಲ್ಲ. ಇದು ಎಲ್ಲಾ ರಾಜಕೀಯ ಪಕ್ಷಗಳು ಹಾಗೂ ಪ್ರಜಾಪ್ರಭುತ್ವ ವ್ಯವಸ್ಥೆಯ ಸಮಸ್ಯೆ. ನಾವು ಮತಗಳನ್ನು ರಕ್ಷಿಸಿ, ಮತದಾನದ ಹಕ್ಕನ್ನು ರಕ್ಷಿಸಿ, ಮತದಾರರಿಗೆ ನ್ಯಾಯ ಒದಗಿಸುವ ಪ್ರಯತ್ನ ಮಾಡುತ್ತಿದ್ದೇವೆ” ಎಂದು ತಿಳಿಸಿದರು.

ರಾಹುಲ್ ಗಾಂಧಿ ಅವರ ಆರೋಪ ನಿರಾಧಾರ ಎಂಬ ಬಿಜೆಪಿ ಟೀಕೆ ಬಗ್ಗೆ ಕೇಳಿದಾಗ, “ನಾವು ಬಿಜೆಪಿ ನಾಯಕರನ್ನು ಪ್ರಶ್ನೆ ಮಾಡುತ್ತಿಲ್ಲ. ನಾವು ಚುನಾವಣಾ ಆಯೋಗವನ್ನು ಪ್ರಶ್ನಿಸುತ್ತಿದ್ದೇವೆ. ಅವರು ಏನಾದರೂ ಟೀಕೆ ಮಾಡಲಿ. ನಾವು ನಮ್ಮ ಕರ್ತವ್ಯ ನಿಭಾಯಿಸುತ್ತೇವೆ” ಎಂದರು.

ನಿಮ್ಮ ಆರೋಪಕ್ಕೆ ಬಿಜೆಪಿ ನಾಯಕರು ಆಕ್ರೋಶ ವ್ಯಕ್ತಪಡಿಸುತ್ತಿರುವುದೇಕೆ ಎಂದು ಕೇಳಿದಾಗ, “ಬಿಜೆಪಿ ನಾಯಕರ ಈ ವರ್ತನೆ ಅವರು ಈ ಅಕ್ರಮದಲ್ಲಿ ಭಾಗಿಯಾಗಿರುವುದನ್ನು ತೋರಿಸುತ್ತಿದೆ” ಎಂದು ತಿರುಗೇಟು ನೀಡಿದರು.

PM E-DRIVE ಯೋಜನೆಯ ಅವಧಿ 2 ವರ್ಷ ವಿಸ್ತರಣೆ: ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಘೋಷಣೆ

BREAKING: ಧರ್ಮಸ್ಥಳ ಕೇಸ್: SITಗೆ ‘ಪೊಲೀಸ್ ಠಾಣೆ’ಯ ಮಾನ್ಯತೆ ನೀಡಿದ ರಾಜ್ಯ ಸರ್ಕಾರ

Share. Facebook Twitter LinkedIn WhatsApp Email

Related Posts

BREAKING : ‘ಹೊಸ ಪಠ್ಯಪುಸ್ತಕ’ದಲ್ಲಿ ಇತಿಹಾಸ ನಕ್ಷೆಯ ವಿವಾದ ; ‘NCERT’ಯಿಂದ ತಜ್ಞರ ಸಮಿತಿ’ ರಚನೆ

07/08/2025 7:42 PM2 Mins Read

BREAKING : ಈ ತಿಂಗಳ ಅಂತ್ಯದಲ್ಲಿ ಭಾರತಕ್ಕೆ ರಷ್ಯಾ ಅಧ್ಯಕ್ಷ ‘ವ್ಲಾಡಿಮಿರ್ ಪುಟಿನ್’ ಆಗಮನ

07/08/2025 3:31 PM1 Min Read

MONEY SAVING TIPS: ಹಣ ಉಳಿಸಲು ಬಯಸುವಿರಾ? ನೀವು ಅನುಸರಿಸಬೇಕಾದ ನಿಯಮಗಳು ಇಲ್ಲಿವೆ..!

07/08/2025 1:00 PM1 Min Read
Recent News

ವಿದ್ಯಾರ್ಥಿಗಳ ಗಮನಕ್ಕೆ: ಕುವೆಂಪು ವಿವಿಯಿಂದ ಸ್ನಾತಕೋತ್ತರ ಪದವಿ ಪ್ರವೇಶ ಅರ್ಜಿ ಸಲ್ಲಿಕೆಗೆ ಅವಧಿ ವಿಸ್ತರಣೆ

08/08/2025 8:49 PM

ಮತಗಳ್ಳತನ: ಅಕ್ರಮ ಪರಿಶೀಲನೆಗೆ ಚುನಾವಣಾ ಆಯೋಗಕ್ಕೆ ಡಿಸಿಎಂ ಡಿ.ಕೆ ಶಿವಕುಮಾರ್ ಮನವಿ

08/08/2025 8:47 PM

PM E-DRIVE ಯೋಜನೆಯ ಅವಧಿ 2 ವರ್ಷ ವಿಸ್ತರಣೆ: ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಘೋಷಣೆ

08/08/2025 8:40 PM

BREAKING: ಧರ್ಮಸ್ಥಳ ಕೇಸ್: SITಗೆ ‘ಪೊಲೀಸ್ ಠಾಣೆ’ಯ ಮಾನ್ಯತೆ ನೀಡಿದ ರಾಜ್ಯ ಸರ್ಕಾರ

08/08/2025 8:39 PM
State News
KARNATAKA

ವಿದ್ಯಾರ್ಥಿಗಳ ಗಮನಕ್ಕೆ: ಕುವೆಂಪು ವಿವಿಯಿಂದ ಸ್ನಾತಕೋತ್ತರ ಪದವಿ ಪ್ರವೇಶ ಅರ್ಜಿ ಸಲ್ಲಿಕೆಗೆ ಅವಧಿ ವಿಸ್ತರಣೆ

By kannadanewsnow0908/08/2025 8:49 PM KARNATAKA 1 Min Read

ಶಿವಮೊಗ್ಗ: 2025-26ನೇ ಸಾಲಿನ ವಿವಿಧ ಸ್ನಾತಕೋತ್ತರ ಪದವಿ, ಸ್ನಾತಕೋತ್ತರ ಡಿಪ್ಲೊಮಾ ಪದವಿ ಪ್ರವೇಶಾತಿಗೆ ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಆಗಸ್ಟ್…

PM E-DRIVE ಯೋಜನೆಯ ಅವಧಿ 2 ವರ್ಷ ವಿಸ್ತರಣೆ: ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಘೋಷಣೆ

08/08/2025 8:40 PM

BREAKING: ಧರ್ಮಸ್ಥಳ ಕೇಸ್: SITಗೆ ‘ಪೊಲೀಸ್ ಠಾಣೆ’ಯ ಮಾನ್ಯತೆ ನೀಡಿದ ರಾಜ್ಯ ಸರ್ಕಾರ

08/08/2025 8:39 PM

ಕರ್ನಾಟಕದಲ್ಲಿ ‘ಒಂದೇ ಶಿಕ್ಷಣ ನೀತಿ’: ಸಿಎಂ ಸಿದ್ಧರಾಮಯ್ಯಗೆ ಈ ಶಿಫಾರಸ್ಸುಗಳ ವರದಿ ಸಲ್ಲಿಸಿದ ಆಯೋಗ

08/08/2025 8:34 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.