ಕೋಲಾರ : ಅಕ್ರಮ ವೋಟರ್ ಐಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳವಾರ ಚುನಾವಣಾ ಆಯೋಗಕ್ಕೆ ದೂರು ನೀಡುವುದಾಗಿ ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಹೇಳಿದ್ದಾರೆ.
ಸುದ್ದಿಗಾರರ ಜೊತೆ ಮಾತನಾಡಿದ ಅವರು ನಾಳೆ ನ.21 ರಂದು ಬಿಜೆಪಿ ವಿರುದ್ಧ ಪ್ರತಿಭಟನೆ ನಡೆಸುತ್ತೇವೆ, ಮಂಗಳವಾರ ಚುನಾವಣಾ ಆಯೋಗಕ್ಕೆ ದೂರು ನೀಡುತ್ತೇವೆ ಎಂದು ಹೇಳಿದರು.
ಪೊಲೀಸರ ತನಿಖೆಯಲ್ಲಿ ಸತ್ಯ ಹೊರಕ್ಕೆ ಬರಲ್ಲ, ಯಾಕೆಂದರೆ ಪ್ರಕರಣದಲ್ಲಿ ಸರ್ಕಾರ ಭಾಗಿಯಾಗಿದೆ , ಎಲ್ಲರೂ ಕಡ್ಡಾಯ ಮತದಾನ ಮಾಡಿ ಎನ್ನುತ್ತಾರೆ, ಆದರೆ ಬಿಜೆಪಿ ಸರ್ಕಾರ ಮತದಾನದ ಹಕ್ಕನ್ನೇ ಕಸಿದುಕೊಳ್ಳುತ್ತಿದೆ , ರಾಷ್ಟ್ರೀಯ ಪಕ್ಷಗಳು ಅಧಿಕಾರ ದುರುಪಯೋಗ ಮಾಡಿಕೊಳ್ಳುತ್ತಿದೆ ಎಂದು ವಾಗ್ಧಾಳಿ ನಡೆಸಿದರು.