ಬೆಂಗಳೂರು: ಮತದಾರರ ಪಟ್ಟಿ ಪರಿಷ್ಕರಣೆ ವೇಳೆಯಲ್ಲಿ ಖಾಸಗಿ ಮಾಹಿತಿ ಸಂಗ್ರಹಿಸಿದ ಆರೋಪದಲ್ಲಿ ಚಿಲುಮೆ ಸಂಸ್ಥೆಗೆ ಮೊಬೈಲ್ ಆ್ಯಪ್ ಡೆವಲಪ್ ಮಾಡಿಕೊಟ್ಟವರನ್ನು ಪೊಲೀಸರು ತೀವ್ರ ವಿಚಾರಣೆ ನಡೆಸಿದರು.
ಡೆವಲಪರ್ ಸಂಜೀವ್ ಶೆಟ್ಟಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ ಹಲಸೂರು ಗೇಟ್ ಪೊಲೀಸರು ಹಲವು ಪ್ರಶ್ನೆ ಕೇಳಿದ್ದಾರೆ. ಮತದಾರರ ಬಗ್ಗೆ ಆ್ಯಪ್ ನಲ್ಲಿ ಮಾಹಿತಿ ಅಪ್ ಲೋ ಡ್ ಮಾಡಲಾಗಿದ್ಯಾ..? ಎಷ್ಟು ಆ್ಯಪ್ ತಯಾರು ಮಾಡಿಕೊಟ್ಟಿದ್ದೀರಿ..? ಯಾವ ಉದ್ದೇಶಕ್ಕೆ ಕೇಳಿದ್ರು ಎಂಬಿತ್ಯಾದಿ ಪ್ರಶ್ನೆ ಕೇಳಿದ್ದಾರೆ. ಸುಮಾರು ನಾಲ್ಕೈದು ಗಂಟೆಗಳ ಕಾಲ ವಿಚಾರಣೆ ನಡೆಸಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ. ಖುದ್ದು ಕೇಂದ್ರ ವಿಭಾಗದ ಡಿಸಿಪಿ ಶ್ರೀನಿವಾಸ್ ಗೌಡ ವಿಚಾರಣೆ ನಡೆಸಿದ್ದಾರೆ.
ಅಕ್ರಮ ವೋಟರ್ ಐಡಿ ಆರೋಪದ ಹಿನ್ನೆಲೆ ಚಿಲುಮೆ ಸಂಸ್ಥೆ ವಿರುದ್ಧ ದೂರು ದಾಖಲಾಗಿತ್ತು. ಈ ದೂರಿನ ಹಿನ್ನಲೆಯಲ್ಲಿ ಶುಕ್ರವಾರ ಕಚೇರಿಯ ಮೇಲೆ ಪೊಲೀಸರು ದಾಳಿ ನಡೆಸಿದ್ದರು.
ಚಿಲುಮೆ ಸಂಸ್ಥೆ ಮೇಲೆ ದಾಳಿ ; ಮಹತ್ವದ ದಾಖಲೆ ವಶಕ್ಕೆ
ಕಳೆದ ಶುಕ್ರವಾರ ವಿತ್ ವಾರೆಂಟ್ ಕಚೇರಿ ಮೇಲೆ ದಾಳಿ ನಡೆಸಿದ ಪೊಲೀಸರು ಬರೋಬ್ಬರಿ ನಾಲ್ಕು ಗಂಟೆಗಳ ಕಾಲ ಇಡೀ ಕಚೇರಿ ಜಾಲಾಡಿದ್ದಾರೆ., ಸತತ 4 ಗಂಟೆ ಕಚೇರಿ ಜಾಲಾಡಿ ಮೂರು ಪ್ರಿಂಟರ್, ಲ್ಯಾಪ್ ಟಾಪ್, ಹಾರ್ಡ್ ಡಿಸ್ಕ್ ಸೇರಿ ಮಹತ್ವದ ದಾಖಲೆಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
ಪ್ರಕರಣ ಸಂಬಂಧ ಮೂರು ವಿಶೇಷ ತಂಡವನ್ನು ರಚಿಸಲಾಗಿದ್ದು, ಕೇಂದ್ರ ವಿಭಾಗದ ಡಿಸಿಪಿ ಶ್ರೀನಿವಾಸ್ ಗೌಡ ಸಾರಥ್ಯ ವಹಿಸಿದ್ದಾರೆ.
ಪ್ರಕರಣ ಸಂಬಂಧ ಮಲ್ಲೇಶ್ವರಂ ನ ಚಿಲುಮೆ ಸಂಸ್ಥೆಯ ಬ್ಯುಸಿನೆಸ್ ಹೆಡ್ ಸುಧಾಕರ್ ಹಾಗೂ ಕಚೇರಿ ವರ್ಕರ್ ರಕ್ಷಿತ್ ಎಂಬುವವರು ಸೇರಿ ನಾಲ್ವರನ್ನು ಪೊಲೀಸರು ವಿಚಾರಣೆಗೊಳಪಡಿಸಿದ್ದಾರೆ.
ಬಿಬಿಎಂಪಿಯ ಜಂಟಿ ಆಯುಕ್ತ ರಂಗಪ್ಪ ಅವರು ಚಿಲುಮೆ ಸಂಸ್ಥೆಯ ವಿರುದ್ಧ ಮತದಾರರ ಪಟ್ಟಿ ಪರಿಷ್ಕರಣೆ ವೇಳೆಯಲ್ಲಿನ ಅಕ್ರಮ ಸಂಬಂಧ ಹಲಸೂರು ಗೇಟ್ ಠಾಣೆಗೆ ದೂರು ನೀಡಿದ್ದರು. ಈ ದೂರು ಆಧರಿಸಿ, ಈಗಾಗಲೇ ನಾಲ್ವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.
‘ಭಕ್ಷಕನಾದ ಆರಕ್ಷಕ’ : ಚಿನ್ನದ ವ್ಯಾಪಾರಿ ಪುತ್ರನನ್ನು ಬೆದರಿಸಿ 5 ಲಕ್ಷ ದರೋಡೆ..!
BREAKING NEWS: ಐತಿಹಾಸಿಕ ಕಡಲೆಕಾಯಿ ಪರಿಷೆಗೆ ಸಿಎಂ ಬೊಮ್ಮಾಯಿ ಚಾಲನೆ | Kadalekai Parishe 2022