ಬೆಂಗಳೂರು : ವೋಟರ್ ಐಡಿ ಅಕ್ರಮ ಕುರಿತ ಆರೋಪಕ್ಕೆ ಸಂಬಂಧಿಸಿದಂತೆ ಚಿಲುಮೆ ಸಂಸ್ಥೆ ವಿರುದ್ಧ ಎಫ್ ಐ ಆರ್ ದಾಖಲಾಗಿದೆ. ಹಲಸೂರು ಗೇಟ್ ಠಾಣೆಯಲ್ಲಿ ಚಿಲುಮೆ ಸಂಸ್ಥೆ ವಿರುದ್ಧ ಎಫ್ ಐ ಆರ್ (FIR) ದಾಖಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.
ಈ ಕುರಿತು ಬಿಬಿಎಂಪಿ ( BBMP ) ಮಾಹಿತಿ ನೀಡಲಾಗಿದ್ದು, ಚಿಲುಮೆ ಶೈಕ್ಷಣಿಕ ಸಾಂಸ್ಕೃತಿಕ ಹಾಗೂ ಗ್ರಾಮೀಣಾಭಿವೃದ್ದಿ ಸಂಸ್ಥೆ ವಿರುದ್ದ ಹಲಸೂರು ಗೇಟ್ ಪೋಲೀಸ್ ಠಾಣೆ ಮತ್ತು ಕಾಡುಗೋಡಿ ಪೋಲೀಸ್ ಠಾಣೆಗಳಲ್ಲಿ ದೂರು ದಾಖಲಿಸಲಾಗಿದೆ.
ಖಾಸಗಿ ಸಂಸ್ಥೆಯಿಂದ ಮತದಾರ ಮಾಹಿತಿ ಸಂಗ್ರಹ ಆರೋಪದ ಮೇಲೆ ಇದೀಗ ಬಿಬಿಎಂಪಿ ಚಿಲುಮೆ ಸಂಸ್ಥೆ ವಿರುದ್ಧ ತನಿಖೆಗೆ ಮುಂದಾಗಿರುವುದಾಗಿ ಚುನಾವಣಾ ವಿಭಾಗದ ವಿಶೇಷ ಆಯುಕ್ತ ಹೇಳಿದ್ದರು. ಚಿಲುಮೆ ಸಂಸ್ಥೆಗೆ ಜಾಗೃತಿ ಮೂಡಿಸೋದಕ್ಕೆ ಅಷ್ಟೇ ನಾವು ಅನುಮತಿ ಕೊಟ್ಟಿದ್ದೇವೆ. ಡೇಟಾ ಕಲೆಕ್ಟ್ ಮಾಡಿ ಅಂತಾ ಅನುಮತಿ ಕೊಟ್ಟಿರಲಿಲ್ಲ. ಆದರೆ ಡೇಟಾ ಕಲೆಕ್ಟ್ ಮಾಡ್ತಾ ಇದ್ದಾರೆ ಅಂತಾ ದೂರು ದಾಖಲಾಗಿತ್ತು ಎಂದು ಹೇಳಿದ್ದರು.
ವೋಟರ್ ಐಡಿ ಅಕ್ರಮದಲ್ಲಿ ಸಚಿವ ಅಶ್ವಥ್ ನಾರಾಯಣ್ ಕೈವಾಡವಿದೆ ಎಂಬ ಕಾಂಗ್ರೆಸ್ ನಾಯಕರ ಆರೋಪಿಸಿದ್ದರು. ನಂತರ ಪ್ರತಿಕ್ರಿಯೆ ನೀಡಿದ್ದ ಸಚಿವ ಅಶ್ವಥ್ ನಾರಾಯಣ್ ಕಾಂಗ್ರೆಸ್ ನಾಯಕರು ತಪ್ಪು ಹೇಳಿಕೆ ನೀಡಿದ್ದಾರೆ. ಈ ಚಿಲುಮೆ ಸಂಸ್ಥೆಗೂ ಸರ್ಕಾರಕ್ಕೂ ಸಂಬಂಧ ಇಲ್ಲ ಎಂದು ಹೇಳಿದ್ದರು.
ಕಾಂಗ್ರೆಸ್ ನಾಯಕರು ಭ್ರಷ್ಟಾಚಾರದಲ್ಲೇ ತುಂಬಿ ಹೋಗಿದ್ದಾರೆ. ಈ ರೀತಿ ಆರೋಪ ಮಾಡಲು ಕಾಂಗ್ರೆಸ್ ನಾಯಕರಿಗೆ ಯಾವ ನೈತಿಕತೆ ಇದೆ. ಹೊಂಬಾಳೆ ಸಂಸ್ಥೆಗೂ ಇದಕ್ಕೂ ಯಾವುದೇ ಸಂಬಂಧವಿಲ್ಲ , ಇವರಂತು ಒಳ್ಳೆ ಕೆಲಸ ಮಾಡುವುದಿಲ್ಲ, ಮಾಡುವವರಿಗೂ ಬಿಡುವುದಿಲ್ಲ ಎಂದು ಡಿಕೆ ಶಿವಕುಮಾರ್ ವಿರುದ್ಧ ಕಿಡಿಕಾರಿದ್ದರು.
ಬೆಂಗಳೂರಿಗರೇ ಗಮನಿಸಿ : ನ.21 ರಂದು ಈ ಪ್ರದೇಶಗಳಲ್ಲಿ ‘ಕಾವೇರಿ ನೀರು’ ಪೂರೈಕೆಯಲ್ಲಿ ವ್ಯತ್ಯಯ |Water Supply
ಶಿವಮೊಗ್ಗ: ತೀರ್ಥಹಳ್ಳಿಯಲ್ಲಿ ಕೋರ್ಟ್ ಕಟ್ಟಡವನ್ನೇ ಗೋಡೌನ್ ಮಾಡಿಕೊಂಡಿದ್ದ ಆರೋಪಿಗೆ ನ್ಯಾಯಂಗ ಬಂಧನ