ಬೆಂಗಳೂರು: ನಗರದಲ್ಲಿ ವೋಟರ್ ಐಡಿ ಪರಿಷ್ಕರಣೆ ಅಕ್ರಮ ಪ್ರಕರಣ ಹೊರ ಬಿದ್ದಿತ್ತು. ಈ ಸಂಬಂಧ ಚಿಲುಮೆ ಸಂಸ್ಥೆಯ ಮುಖ್ಯಸ್ಥರು ಸೇರಿದಂತೆ ಮೂವರನ್ನು ಪೊಲೀಸರು ಬಂಧಿಸಿದ್ದರು. ಇಂತಹ ಪ್ರಕರಣದ ಆರೋಪಿಗಳನ್ನು ಡಿಸೆಂಬರ್ 2ರವರೆಗೆ ಪೊಲೀಸ್ ಕಸ್ಟಡಿಗೆ ನೀಡಿ ಕೋರ್ಟ್ ಆದೇಶಿಸಿದೆ.
ಬೆಂಗಳೂರಿನಲ್ಲಿ ವೋಟರ್ ಐಡಿ ಪರಿಷ್ಕರಣೆಯಲ್ಲಿ ಅಕ್ರಮ ಪ್ರಕರಣ ಸಂಬಂಧ ಇಂದು ಬೆಂಗಳೂರಿನ ನಾಲ್ಕನೇ ಎಸಿಎಂಎಂ ನ್ಯಾಯಾಲಯಕ್ಕೆ ಚಿಲುಮೆ ಸಂಸ್ಥೆಯ ಮುಖ್ಯಸ್ಥ, ಪ್ರಮುಖ ಆರೋಪಿ ರವಿಕುಮಾರ್, ಸಹೋದರ ಕೆಂಪೇಗೌಡ, ಪ್ರಾಜೆಕ್ಟ್ ಎಕ್ಸಿಕ್ಯೂಟಿವ್ ಪ್ರಜ್ವಲ್ ಅವರನ್ನು ಹಾಜರು ಪಡಿಸಲಾಗಿತ್ತು.
ಈ ಪ್ರಕರಣ ಸಂಬಂಧ ವಿಚಾರಣೆ ನಡೆಸಿದಂತ ಬೆಂಗಳೂರಿನ ನಾಲ್ಕನೇ ಎಸಿಎಂಎಂ ಕೋರ್ಟ್ ನ್ಯಾಯಾಧೀಶರ ಮುಂದೆ, ಹಲಸೂರು ಗೇಟ್ ಠಾಣೆಯ ಪೊಲೀಸರು, ಹೆಚ್ಚಿನ ವಿಚಾರಣೆ ನಡೆಸುವಂತೆ ತಮ್ಮ ವಶಕ್ಕೆ ನೀಡಲು ಮನವಿ ಮಾಡಿದರು. ಈ ಮನವಿ ಪುರಸ್ಕರಿಸಿದಂತ ಕೋರ್ಟ್, ಡಿಸೆಂಬರ್ 2ರವರೆಗೆ ಚಿಲುಮೆ ಸಂಸ್ಥೆಯ ಮುಖ್ಯಸ್ಥ, ಪ್ರಮುಖ ಆರೋಪಿ ರವಿಕುಮಾರ್, ಸಹೋದರ ಕೆಂಪೇಗೌಡ ಹಾಗೂ ಪ್ರಾಜೆಕ್ಟ್ ಎಕ್ಸಿಕ್ಯೂಟಿವ್ ಪ್ರಜ್ವಲ್ ಅವರನ್ನು ಪೊಲೀಸ್ ಕಸ್ಟಡಿಗೆ ನೀಡಿ ಆದೇಶಿಸಿದೆ.