ಬೆಂಗಳೂರು: ಕರ್ನಾಟಕದಲ್ಲಿ ಏಪ್ರಿಲ್ 26 ಮತ್ತು ಮೇ 7 ರಂದು ಎರಡು ಹಂತಗಳಲ್ಲಿ ಲೋಕಸಭಾ ಚುನಾವಣೆ ನಡೆಯಲಿದೆ. ಜೂನ್ 4ರಂದು ಫಲಿತಾಂಶ ಹೊರಬೀಳಲಿದೆ. ಈ ನಡುವೆ ನಿಮ್ಮ ಹೆಸರು ಮತದಾರರ ಪಟ್ಟಿಯಲ್ಲಿ ಇದ್ದರೆ ಈ ಕೆಳಗಿನ ದಾಖಲೆಯನ್ನು ತೋರಿಸಿ ಮತ ಚಲಾಯಿಸಬಹುದು. . ಮತದಾರರ ಗುರುತಿನ ಚೀಟಿ ಇಲ್ಲದಿದ್ದರೆ ಮತದಾನ ಮಾಡಲು ಆಗುವುದಿಲ್ಲ ಎನ್ನುವ ತಪ್ಪು ಕಲ್ಪನೆಯೂ ಜನರಲ್ಲಿದೆ. ನಿಮ್ಮ ಹೆಸರು ಮತದಾರರ ಪಟ್ಟಿಯಲ್ಲಿ ಇದ್ದರೆ ಈ ಕೆಳಗಿನ ದಾಖಲೆಯನ್ನು ತೋರಿಸಿ ಮತ ಚಲಾಯಿಸಬಹುದು ಅವುಗಳು ಈ ಕೆಳಕಂಡತಿದೆ.
1. ಮತದಾರರ ಗುರುತಿನ ಚೀಟಿ
2. ಆಧಾರ್ ಕಾರ್ಡ್
3. ನರೇಗಾ ಕೆಲಸದ ಕಾರ್ಡ್ (ಜಾಬ್ ಕಾರ್ಡ್)
4. ಫೋಟೊ ಲಗತ್ತಿಸಿರುವ ಬ್ಯಾಂಕ್ / ಪೋಸ್ಟ್ ಆಫೀಸ್ ಪಾಸ್ಬುಕ್
5. ಕಾರ್ಮಿಕ ಸಚಿವಾಲಯದಿಂದ ನೀಡಿರುವ ಆರೋಗ್ಯ ವಿಮೆಯ ಸ್ಮಾರ್ಟ್ ಕಾರ್ಡ್
6. ಚಾಲನಾ ಪರವಾನಗಿ (ಡ್ರೈವಿಂಗ್ ಲೆಸೆನ್ಸ್)
7. NPR ನಡಿ ನೀಡಲಾದ ಸ್ಮಾರ್ಟ್ ಕಾರ್ಡ್
8. ಪಾಸ್ಪೋರ್ಟ್
9. ಫೋಟೊ ಇರುವ ಪಿಂಚಣಿ ದಾಖಲೆ
10. ಪಾನ್ ಕಾರ್ಡ್
11. ಕೇಂದ್ರ ಅಥವಾ ರಾಜ್ಯ ಸರ್ಕಾರ, ಸಾರ್ವಜನಿಕ ವಲಯದ ಉದ್ದಿಮೆ, ಸಾರ್ವಜನಿಕ ಕಂಪನಿಗಳ ಗುರುತಿನ ಚೀಟಿ
12. ಶಾಸಕ, ಸಂಸದರಿಗೆ ನೀಡಲಾಗಿರುವ ಅಧಿಕೃತ ಗುರುತಿನ ಚೀಟಿ
13. ಸಾಮಾಜಿಕ ನ್ಯಾಯ ಹಾಗೂ ಸಬಲೀಕರಣ ಇಲಾಖೆಯಿಂದ ನೀಡಲಾಗುವ ವಿಶಿಷ್ಟ ವಿಕಲ ಚೇತನರ ಗುರುತಿನ ಚೀಟಿ