ಬೆಂಗಳೂರು: ಮತದಾನ ಪ್ರತಿಯೊಬ್ಬರ ಹಕ್ಕು ಮತ್ತು ಕರ್ತವ್ಯ. ನಿಮ್ಮ ಮತವನ್ನು ನೀವೇ ಚಲಾಯಿಸಿ. ಇನ್ನೊಬ್ಬರ ಹೆಸರಿನಲ್ಲಿ ಮತದಾನ ಮಾಡುವುದು ಅಪರಾಧ ಮತ್ತು ಶಿಕ್ಷಾರ್ಹ.
ಮುಕ್ತ, ನ್ಯಾಯಸಮ್ಮತ ಹಾಗೂ ಶಾಂತಿಯುತ ಚುನಾವಣೆಗೆ ಸಹಕರಿಸಿ. ಪ್ರಜ್ಞಾವಂತಿಕೆಯಿಂದ ಮತ ಚಲಾಯಿಸಿ, ಸಮರ್ಥರನ್ನು ಆರಿಸಿ. ನಿಮ್ಮ ಒಂದು ಮತದಿಂದ ಬದಲಾಗುವುದು ದೇಶದ ಭವಿಷ್ಯ. ಪ್ರಜ್ಞಾವಂತಿಕೆಯಿಂದ ಮತ ಚಲಾಯಿಸಿ, ಸಮರ್ಥರನ್ನು ಆರಿಸಿ. ʼಪ್ರಜಾಪ್ರಭುತ್ವದಲ್ಲಿ ದೃಢ ವಿಶ್ವಾಸವುಳ್ಳ ಭಾರತದ ಪೌರರಾದ ನಾವು, ದೇಶದ ಪ್ರಜಾಸತ್ತಾತ್ಮಕ ಸಂಪ್ರದಾಯಗಳು ಮತ್ತು ಮುಕ್ತ, ನ್ಯಾಯಸಮ್ಮತ, ಶಾಂತಿಯುತ ಚುನಾವಣೆಯನ್ನು ಎತ್ತಿ ಹಿಡಿಯುತ್ತೇವೆಂದು, ಚುನಾವಣೆಯಲ್ಲಿ ನಿರ್ಭೀತರಾಗಿ ಧರ್ಮ, ಜನಾಂಗ, ಜಾತಿ, ಮತ, ಭಾಷೆ ಅಥವಾ ಯಾವುದೇ ಪ್ರೇರೇಪಣೆಗಳ ದಾಕ್ಷಿಣ್ಯಗಳಿಂದ ಪ್ರಭಾವಿತರಾಗದೆ ಮತ ಚಲಾಯಿಸುತ್ತೇವೆಂದು ಪಣತೊಡೋಣ.ʼ
BREAKING : ಕೇಂದ್ರ ಸಚಿವ ಸ್ಥಾನಕ್ಕೆ RLJP ಅಧ್ಯಕ್ಷ `ಪಶುಪತಿ ಪಾರಸ್’ ರಾಜೀನಾಮೆ | Pashupati Paras
ಹಿಂದೂ ಮಹಾಸಾಗರದಲ್ಲಿ ಕಡಲ್ಗಳ್ಳತನ, ಭಯೋತ್ಪಾದನೆ ಎದುರಿಸಲು ಭಾರತ ಬದ್ಧ: ಪ್ರಧಾನಿ ನರೇಂದ್ರ ಮೋದಿ
ಪ್ರತಿಯೊಬ್ಬರು ಮತದಾನ ಮಾಡುವ ಮೂಲಕ ಸಮರ್ಥ ವ್ಯಕ್ತಿಯನ್ನು ಆಯ್ಕೆ ಮಾಡಿ. ದೇಶದ ಅಭಿವೃದ್ಧಿಗೆ ಕೈಜೋಡಿಸಿ. ಲೋಕಸಭೆ ಚುನಾವಣೆ ಎದುರಿಸಲು ರಾಜ್ಯ ಸಜ್ಜಾಗಿದ್ದು, ಮತದಾರರು 28 ಸಂಸದರನ್ನು ಆಯ್ಕೆ ಮಾಡಲಿದ್ದಾರೆ. ಅದಕ್ಕಾಗಿ ಎರಡು ಹಂತಗಳಲ್ಲಿ ಮತದಾನ ನಡೆಯಲಿದೆ.ರಾಜ್ಯದ 28 ಕ್ಷೇತ್ರಗಳನ್ನು ಎರಡು ಭಾಗಗಳಾಗಿ ವಿಭಜಿಸಲಾಗಿದ್ದು, ತಲಾ 14 ಲೋಕಸಭಾ ಕ್ಷೇತ್ರಗಳಲ್ಲಿ ಏಪ್ರಿಲ್ 26 ಮತ್ತು ಮೇ 7 ರಂದು ಚುನಾವಣೆ ನಡೆಯಲಿದೆ. ಕರ್ನಾಟಕದಲ್ಲಿ 58,834 ಮತಗಟ್ಟೆಗಳಿದ್ದು, 5 ಕೋಟಿಯ 42 ಲಕ್ಷ ಮತದಾರರು ಮತ ಚಲಾಯಿಸಲಿದ್ದಾರೆ.ದೇಶದಲ್ಲಿ 85 ವರ್ಷ ಮೀರಿದ ವಯೋಮಾನದ 81 ಲಕ್ಷಕ್ಕೂ ಅಧಿಕ ಮತದಾರರಿದ್ದು, ಅವರಿಗಾಗಿ ʼಮನೆಯಿಂದಲೇ ಮತದಾನʼ ಸೌಲಭ್ಯವನ್ನು ಚುನಾವಣಾ ಆಯೋಗ ಕಲ್ಪಿಸಿದೆ. ಜೊತೆಗೆ ಶೇ.40ಕ್ಕಿಂತಲೂ ಅಧಿಕ ಅಂಗವೈಕಲ್ಯ ಹೊಂದಿರುವ ವ್ಯಕ್ತಿಗಳಿಗೂ ಈ ಅವಕಾಶ ಕಲ್ಪಿಸಲಾಗಿದೆ.