Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ರಾಜ್ಯದಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ ವೇಳೆ ಅರ್ಹರು ಕೈಬಿಡದಂತೆ ಚುನಾವಣಾ ಆಯೋಗಕ್ಕೆ MLC ರಮೇಶ್ ಬಾಬು ಪತ್ರ

ಸ್ಮಾರ್ಟ್‌ಫೋನ್ ಖರೀದಿಸುವಾಗ ಜಾಗ್ರತೆ! ಅಸಲಿ ಮತ್ತು ನಕಲಿ ಮೊಬೈಲ್ ಪತ್ತೆಹಚ್ಚಲು ಪ್ರತಿಯೊಬ್ಬರೂ ತಿಳಿಯಬೇಕಾದ 5 ಸುಲಭ ವಿಧಾನಗಳು ಇಲ್ಲಿವೆ!

BREAKING: ಬೆಳ್ಳಿಯ ಆಮದಿಗೆ ನಿರ್ಬಂಧ ಹೇರಿದ ಕೇಂದ್ರ ಸರ್ಕಾರ | silver bar imports

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ವಿರೋಧ ಪಕ್ಷಗಳ ಅಪಪ್ರಚಾರಕ್ಕೆ ಮತದಾರರಿಂದ ತಕ್ಕ ಉತ್ತರ: ಮಾಜಿ ಸಂಸದ ಡಿ.ಕೆ. ಸುರೇಶ್
KARNATAKA

ವಿರೋಧ ಪಕ್ಷಗಳ ಅಪಪ್ರಚಾರಕ್ಕೆ ಮತದಾರರಿಂದ ತಕ್ಕ ಉತ್ತರ: ಮಾಜಿ ಸಂಸದ ಡಿ.ಕೆ. ಸುರೇಶ್

By ವಸಂತ ಬಿ ಈಶ್ವರಗೆರೆ

ಬೆಂಗಳೂರು : “ಇಂದು ರಾಜ್ಯದ ಮೂರು ಉಪಚುನಾವಣೆಗಳಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳಿಗೆ ಸಂಪೂರ್ಣ ಬೆಂಬಲ ದೊರೆತಿದೆ. ಗ್ಯಾರಂಟಿಗಳ ವಿರುದ್ಧ, ಮುಖ್ಯಮಂತ್ರಿಗಳ ವಿರುದ್ಧದ ವಿರೋಧ ಪಕ್ಷಗಳ ಸುಳ್ಳು ಆರೋಪಕ್ಕೆ ರಾಜ್ಯದ ಮೂರು ಭಾಗಗಳಲ್ಲಿ ಜನ ತಕ್ಕ ಪಾಠ ಕಲಿಸಿದ್ದಾರೆ” ಎಂದು ಮಾಜಿ ಸಂಸದ ಡಿ.ಕೆ. ಸುರೇಶ್ ತಿಳಿಸಿದ್ದಾರೆ.

ರಾಜ್ಯದ ಮೂರು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆ ಫಲಿತಾಂಶದ ಬಗ್ಗೆ ಸುರೇಶ್ ಅವರು ಮಾಧ್ಯಮಗಳಿಗೆ ಶನಿವಾರ ಪ್ರತಿಕ್ರಿಯೆ ನೀಡಿದರು.

“ಚನ್ನಪಟ್ಟಣದಲ್ಲಿ ಕೇಂದ್ರ ಸಚಿವ ಕುಮಾರಸ್ವಾಮಿ ಹಾಗೂ ಶಿಗ್ಗಾವಿಯಲ್ಲಿ ಮಾಜಿ ಸಿಎಂ ಬೊಮ್ಮಾಯಿ ಅವರ ಪುತ್ರರನ್ನು ಜನ ಸೋಲಿಸಿದ್ದಾರೆ. ಮೂರು ಕ್ಷೇತ್ರಗಳಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಆಶೀರ್ವಾದ ಮಾಡಿ, ವಿರೋಧ ಪಕ್ಷಗಳು ಸರ್ಕಾರಕ್ಕೆ ಅನಗತ್ಯವಾಗಿ ಅಡ್ಡಿಮಾಡಿ ಅಭಿವೃದ್ಧಿಗೆ ತೊಂದರೆ ನೀಡದಂತೆ ಸಂದೇಶ ರವಾನಿಸಿದ್ದಾರೆ” ಎಂದು ತಿಳಿಸಿದ್ದಾರೆ.

ಸರ್ಕಾರದ ವಿರುದ್ಧದ ಇದು ಆರೋಪಗಳಿಗೆ ಉತ್ತರವೇ ಎಂದು ಕೇಳಿದಾಗ, “ಮಾಜಿ ಪ್ರಧಾನಿಗಳು, ಮಾಜಿ ಮುಖ್ಯಮಂತ್ರಿ, ಕೇಂದ್ರ ಸಚಿವರು, ವಿರೋಧ ಪಕ್ಷಗಳ ನಾಯಕರ ಆರೋಪಗಳಿಗೆ ಜನ ಸ್ಪಷ್ಟ ತೀರ್ಪು ನೀಡಿದ್ದಾರೆ. ಉತ್ತರ ಕರ್ನಾಟಕ, ಕಲ್ಯಾಣ ಕರ್ನಾಟಕ ಹಾಗೂ ಹಳೆ ಮೇಸೂರು ಭಾಗದ ಜನ ಈ ಸಂದೇಶ ನೀಡಿದ್ದಾರೆ. ಇನ್ನಾದರೂ ಸರ್ಕಾರ ಹಾಗೂ ಮುಖ್ಯಮಂತ್ರಿಗಳ ಮೇಲೆ ಸುಳ್ಳು ಆರೋಪ ಮಾಡುವುದನ್ನು ಬಿಟ್ಟು ರಾಜ್ಯದ ಅಭಿವೃದ್ಧಿಗೆ ಸಹಕಾರ ನೀಡಲಿ” ಎಂದರು.

ಚನ್ನಪಟ್ಟಣದಲ್ಲಿ ಜಮೀರ್ ಅವರ ಹೇಳಿಕೆ ಅಢ್ಡಿಯಾಗಬಹುದು ಎಂಬ ಊಹಾಪೋಹ ಇತ್ತು ಎಂದು ಕೇಳಿದಾಗ, “ಆ ಭಾವನೆ ಸ್ಥಳಈಯ ಮಟ್ಟದಲ್ಲಿಲ್ಲ ಎಂದು ನಾನು ಸ್ಪಷ್ಟನೆ ನೀಡಿದ್ದೆ. ಒಬ್ಬ ಅಭ್ಯರ್ಥಿಯ ಪರವಾಗಿ ಮಾಧ್ಯಮಗಳ ಸೃಷ್ಟಿ ಎಂದು ಹೇಳಿದ್ದೆ. ಇದರಿಂದ ಮಾಧ್ಯಮಗಳಿಗೆ ಬೇಸರವಾಗಿರಬಹುದು. ಜಮೀರ್ ಅವರ ಹೇಳಿಕೆ ಮೊದಲ ಬಾರಿಗೆ ಹೇಳಿದ್ದಲ್ಲ. ಜಮೀರ್ ಅವರು ಯಾರಿಗೆ ಈ ಪದ ಬಳಸಿದ್ದರು ಅವರು ಇದಕ್ಕೆ ಈ ಹಿಂದೆ ಆಕ್ಷೇಪ ಮಾಡಿರಲಿಲ್ಲ. ಈ ಹಿಂದೆ ಮಾಧ್ಯಮಗಳು ಪ್ರಶ್ನೆ ಮಾಡಿರಲಿಲ್ಲ ಎಂದು ಹೇಳಿದ್ದೆ. ನಾವು ಹಳ್ಳಿ ಹಳ್ಳಿಗೆ ಹೋಗಿ ಒಂದು ತಿಂಗಳ ಕಾಲ ಚುನಾವಣೆ ಮಾಡಿದ್ದೆವು. ಕ್ಷೇತ್ರದ ಹೊರಗೆ ಈ ವಿಚಾರ ಚರ್ಚೆಯಾಗುತ್ತಿತ್ತೇ ಹೊರತು, ಕ್ಷೇತ್ರದ ಒಳಗೆ ಅಭಿವೃದ್ಧಿ ವಿಚಾರವಷ್ಟೇ ಚರ್ಚೆಯಾಗಿತ್ತು. ಕಾರಣ, ಈ ಕ್ಷೇತ್ರ ಕುಮಾರಸ್ವಾಮಿ ಅವರು ಮುಖ್ಯಮಂತ್ರಿಯಾಗಿ ಆಯ್ಕೆಯಾಗಿದ್ದ ಕ್ಷೇತ್ರ. ಅವರಿಂದ ತೆರವಾದ ಹಿನ್ನೆಲೆಯಲ್ಲಿ ಅವರ ಅಭಿವೃದ್ಧಿ ಯೋಜನೆಗಳ ಚರ್ಚೆಯಾಗಿತ್ತು. ನಾನು ನನ್ನ ಅಂತರಾಳದ ಮಾತುಗಳನ್ನು ವ್ಯಕ್ತಪಡಿಸಿದ್ದೆ ಹೊರತು ಮಾಧ್ಯಮಗಳನ್ನು ದೂಷಿಸುವುದಲ್ಲ. ನನ್ನ ಮಾತಿನಿಂದ ಮಾಧ್ಯಮಗಳಿಗೆ ಬೇಸರವಾಗಿದ್ದರೆ ಕ್ಷಮೆ ಇರಲಿ” ಎಂದರು.

ಎಷ್ಟು ಅಂತರದಲ್ಲಿ ಗೆಲ್ಲಬಹುದು ಎಂದು ಕೇಳಿದಾಗ, “ಈಗಾಗಲೇ 22 ಸಾವಿರ ಮತಗಳ ಅಂತರದ ಮುನ್ನಡೆ ಕಾಯ್ದುಕೊಂಡಿದ್ದು, ಇದೇ ಅಂತರ ಕಾಯ್ದುಕೊಳ್ಳುವ ವಿಶ್ವಾಸವಿದೆ” ಎಂದು ತಿಳಿಸಿದರು.

ಮಹಾರಾಷ್ಟ್ರ ಚುನಾವಣೆ ಫಲಿತಾಂಶದ ಬಗ್ಗೆ ಕೇಳಿದಾಗ, “ನೀವು ನನ್ನ ಮೇಲೆ ಒತ್ತಡ ಹಾಕಿದ್ದ ಕಾರಣ ನಾನು ಕೇವಲ ಕರ್ನಾಟಕ ಚುನಾವಣೆ ಬಗ್ಗೆ ಮಾತ್ರ ಗಮನ ಹರಿಸಿದ್ದೆ. ಬೇರೆ ರಾಜ್ಯಗಳ ಚುನಾವಣೆ ಬಗ್ಗೆ ಗಮನಹರಿಸಿರಲಿಲ್ಲ. ಸಿಎಂ, ಡಿಸಿಎಂ ಸೇರಿದಂತೆ ಕಾಂಗ್ರೆಸ್ ನಾಯಕರು ಪ್ರಚಾರಕ್ಕೆ ತೆರಳಿದ್ದರು. ಅವರು ಕೂಡ ವಿಶ್ವಾಸ ವ್ಯಕ್ತಪಡಿಸದ್ದರು. ಈ ಫಲಿತಾಂಶದ ಬಗ್ಗೆ ನಮ್ಮ ಹೈಕಮಾಂಡ್ ನಾಯಕರು ಪರಿಶೀಲನೆ ಮಾಡಲಿದ್ದಾರೆ. ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಗೆಲ್ಲಿಸಿದ ಎಲ್ಲಾ ಮತದಾರರಿಗೆ ವಿಶೇಷವಾಗಿ ಧನ್ಯವಾದಗಳು. ಪಕ್ಷದ ಪರವಾಗಿ ಶ್ರಮಿಸಿದ ಕಾರ್ಯಕರ್ತರು, ಮಂತ್ರಿಗಳು, ಶಾಸಕರು ಚುನಾವಣೆ ಮಾಡಿದ್ದು, ಈ ಗೆಲುವಿನಲ್ಲಿ ಅವರ ಕಾಣಿಕೆಯೂ ಇದೆ. ಅವರಿಗೂ ಧನ್ಯವಾದಗಳನ್ನು ಅರ್ಪಿಸುತ್ತೇನೆ” ಎಂದು ತಿಳಿಸಿದರು.

ಸಂಡೂರು ವಿಧಾನಸಭೆ ಉಪಚುನಾವಣೆ: ಕಾಂಗ್ರೆಸ್ ಅಭ್ಯರ್ಥಿ ಅನ್ನಪೂರ್ಣ ಗೆಲುವು- ಚುನಾವಣಾ ಆಯೋಗ ಘೋಷಣೆ

ಈ ಉಪಚುನಾವಣೆ ಫಲಿತಾಂಶ, 2028ರ ಚುನಾವಣೆ ಫಲಿತಾಂಶಕ್ಕೆ ರಾಜ್ಯದ ಜನರ ಮುನ್ನುಡಿ: DKS

Share. Facebook Twitter LinkedIn WhatsApp Email

Related Posts

ರಾಜ್ಯದಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ ವೇಳೆ ಅರ್ಹರು ಕೈಬಿಡದಂತೆ ಚುನಾವಣಾ ಆಯೋಗಕ್ಕೆ MLC ರಮೇಶ್ ಬಾಬು ಪತ್ರ

2 Mins Read

ಬೆಲೆ ಏರಿಕೆ ವಿರುದ್ಧ ಮಂಡ್ಯದಲ್ಲಿ ವಾಟಾಳ್ ನಾಗರಾಜ್ ಎತ್ತಿನಗಾಡಿ ಚಳುವಳಿ: ‘ಕರ್ನಾಟಕ ಬಂದ್’ ಎಚ್ಚರಿಕೆ!

2 Mins Read

ಮಂಡ್ಯದ ಗೆಜ್ಜಲಗೆರೆ ಹೋರಾಟ: ರೈತ ಮುಖಂಡರ ಜೊತೆಗೆ ಶಾಸಕ ಕೆ.ಎಂ. ಉದಯ್ ಚರ್ಚೆ

2 Mins Read
Recent News

ರಾಜ್ಯದಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ ವೇಳೆ ಅರ್ಹರು ಕೈಬಿಡದಂತೆ ಚುನಾವಣಾ ಆಯೋಗಕ್ಕೆ MLC ರಮೇಶ್ ಬಾಬು ಪತ್ರ

ಸ್ಮಾರ್ಟ್‌ಫೋನ್ ಖರೀದಿಸುವಾಗ ಜಾಗ್ರತೆ! ಅಸಲಿ ಮತ್ತು ನಕಲಿ ಮೊಬೈಲ್ ಪತ್ತೆಹಚ್ಚಲು ಪ್ರತಿಯೊಬ್ಬರೂ ತಿಳಿಯಬೇಕಾದ 5 ಸುಲಭ ವಿಧಾನಗಳು ಇಲ್ಲಿವೆ!

BREAKING: ಬೆಳ್ಳಿಯ ಆಮದಿಗೆ ನಿರ್ಬಂಧ ಹೇರಿದ ಕೇಂದ್ರ ಸರ್ಕಾರ | silver bar imports

Shocking: ಕೇವಲ 2,000 ರೂ. ಮನೆ ಬಾಡಿಗೆ ಕೊಡಲಾಗದಿದ್ದಕ್ಕೆ ಪತ್ನಿ, ಅಪ್ರಾಪ್ತ ಮಗಳ ಮೇಲಿನ ಅತ್ಯಾಚಾರಕ್ಕೆ ಸಾಥ್ ನೀಡಿದ ಪಾಪಿ ಪತಿ!

State News
KARNATAKA

ರಾಜ್ಯದಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ ವೇಳೆ ಅರ್ಹರು ಕೈಬಿಡದಂತೆ ಚುನಾವಣಾ ಆಯೋಗಕ್ಕೆ MLC ರಮೇಶ್ ಬಾಬು ಪತ್ರ

By ವಸಂತ ಬಿ ಈಶ್ವರಗೆರೆ KARNATAKA 2 Mins Read

ಬೆಂಗಳೂರು: ಕೇಂದ್ರ ಚುನಾವಣಾ ಆಯೋಗವು ಮೂರನೇ ಹಂತದ ವಿಶೇಷ ಸಮಗ್ರ ಪರಿಷ್ಕರಣೆ (SIR) ಅಡಿಯಲ್ಲಿ ದೇಶದ 16 ರಾಜ್ಯಗಳು ಹಾಗೂ…

ಬೆಲೆ ಏರಿಕೆ ವಿರುದ್ಧ ಮಂಡ್ಯದಲ್ಲಿ ವಾಟಾಳ್ ನಾಗರಾಜ್ ಎತ್ತಿನಗಾಡಿ ಚಳುವಳಿ: ‘ಕರ್ನಾಟಕ ಬಂದ್’ ಎಚ್ಚರಿಕೆ!

ಮಂಡ್ಯದ ಗೆಜ್ಜಲಗೆರೆ ಹೋರಾಟ: ರೈತ ಮುಖಂಡರ ಜೊತೆಗೆ ಶಾಸಕ ಕೆ.ಎಂ. ಉದಯ್ ಚರ್ಚೆ

ಬಿಡದಿ ಟೌನ್‌ಶಿಪ್ ಪ್ರಾಜೆಕ್ಟ್ ಬಿಟ್ಟುಬಿಡಿ: ಹೆಚ್.ಡಿ. ಕುಮಾರಸ್ವಾಮಿ ಬೆನ್ನಲ್ಲೇ ಸಿಎಂ ಸಿದ್ದರಾಮಯ್ಯಗೆ ಮಾಜಿ ಪ್ರಧಾನಿ ಹೆಚ್‌ಡಿಡಿ ಪತ್ರ!

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.