ಬೆಂಗಳೂರು: ದೇಶಾದ್ಯಂತ ಕಾಂಗ್ರೆಸ್ ಅಧ್ಯಕ್ಷರ ಆಯ್ಕೆ ಸಂಬಂಧ ಇಂದು ಚುನಾವಣೆ ( Congress President Election 2022 ) ನಡೆಯಿತು. ನವದೆಹಲಿ ಸೇರಿದಂತೆ ವಿವಿಧೆಡೆ ನಡೆದಂತ ಮತದಾನ ಇದೀಗ ಮುಕ್ತಾಯಗೊಂಡಿದೆ.
ಎಐಸಿಸಿ ಅಧ್ಯಕ್ಷರ ಆಯ್ಕೆ ಸಂಬಂಧ ಇಂದು ಮಹತ್ವದ ಚುನಾವಣೆಯ ಮತದಾನ ನಡೆಯಿತು. ಕಾಂಗ್ರೆಸ್ ನ ಘಟಾನುಘಟಿ ನಾಯಕರು ಕಾಂಗ್ರೆಸ್ ಅಧ್ಯಕ್ಷರ ಆಯ್ಕೆಗಾಗಿ ತಮ್ಮ ಹಕ್ಕನ್ನು ಚಲಾಯಿಸಿದರು.
ಮಾಜಿ ಪ್ರಧಾನಿ ಮನಮೋಹನ್ ಸಿಂಗ್, ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿ, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್, ವಿಪಕ್ಷನಾಯಕ ಸಿದ್ಧರಾಮಯ್ಯ ಮತ ಚಲಾಯಿಸಿದರು.
9,100 ಮಂದಿ ಇಂದಿನ ಚುನಾವಣೆಯಲ್ಲಿ ಭಾಗಿಯಾಗಿದ್ದಾರೆ ಎನ್ನಲಾಗಿದೆ. ಈ ಬಗ್ಗೆ ಖಚಿತ ಮಾಹಿತಿ ಲಭ್ಯವಾಗಬೇಕಿದೆ. ಇದೀಗ ಮತದಾನ ಅಂತ್ಯಗೊಂಡಿದ್ದು, ಅಕ್ಟೋಬರ್ 19ರಂದು ಮತಏಣಿಕೆ ನಡೆಯಲಿದೆ.
ಅಂದಹಾಗೇ ಕಾಂಗ್ರೆಸ್ ಅಧ್ಯಕ್ಷರ ಚುನಾವಣೆಯ ಕಣದಲ್ಲಿ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಹಾಗೂ ಶಶಿ ತರೂರ್ ಇದ್ದಾರೆ. ಇವರಿಬ್ಬರ ನಡುವೆ ತೀವ್ರ ಪೈಪೋಟಿ ನಡೆದಿದೆ ಎನ್ನಲಾಗಿದ್ದು, ಯಾರು ಗೆಲುವು ಸಾಧಿಸಿ, ಎಐಸಿಸಿ ಅಧ್ಯಕ್ಷರಾಗಿ ಆಯ್ಕೆಯಾಗಲಿದ್ದಾರೆ ಎಂಬುದನ್ನು ಅಕ್ಟೋಬರ್ 19ರಂದು ನಡೆಯಲಿರುವಂತ ಮತಏಣಿಕೆಯಂದು ತಿಳಿಯಲಿದೆ.