ಅಹಮದಾಬಾದ್ : 242 ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದ ಏರ್ ಇಂಡಿಯಾ ವಿಮಾನವು ಸರ್ದಾರ್ ವಲ್ಲಭಭಾಯಿ ಪಟೇಲ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಟೇಕಾಫ್ ಆಗುತ್ತಿರುವಾಗ ಅಪಘಾತಕ್ಕೀಡಾಗಿದೆ. ಏಳು ಅಗ್ನಿಶಾಮಕ ದಳದ ವಾಹನಗಳು ಸ್ಥಳದಲ್ಲಿವೆ. ಹಾನಿಯ ವ್ಯಾಪ್ತಿಯನ್ನ ತೋರಿಸುವ ದೃಶ್ಯಗಳು ಹೊರಬಿದ್ದಿದ್ದು, ಗಾಢ ಹೊಗೆ ಆವರಿಸಿದೆ.
ಲಂಡನ್’ಗೆ ಪ್ರಯಾಣಿಸುತ್ತಿದ್ದ ವಿಮಾನ ಟೇಕ್ ಆಫ್ ಆಗುವ ಸಮಯದಲ್ಲಿ ಅಪಘಾತಕ್ಕೀಡಾಗಿದೆ. ವಿಮಾನ ನಿಲ್ದಾಣದ ಬಳಿ ಕಪ್ಪು ಹೊಗೆ ಆವರಸಿದ್ದು, ಅಪಘಾತದ ಹಲವಾರು ದೃಶ್ಯಗಳು ಹೊರಬಿದ್ದಿವೆ.
BREAKING: Air India Ahmedabad to London flight with 130 passengers aboard crashes minutes after take off. pic.twitter.com/eVIbymeBsq
— Rahul Shivshankar (@RShivshankar) June 12, 2025
ಏರ್ ಇಂಡಿಯಾ 171 ಎಂದು ಗುರುತಿಸಲಾದ ವಿಮಾನವು ಲಂಡನ್’ಗೆ ಹೊರಡುವ ಮೊದಲು ಅಹಮದಾಬಾದ್ ವಿಮಾನ ನಿಲ್ದಾಣದಲ್ಲಿ ನಿಲುಗಡೆ ಹೊಂದಿತ್ತು. ಬಳಿಕ ಅಹಮದಾಬಾದ್ ವಿಮಾನ ನಿಲ್ದಾಣದ ಬಳಿಯ ಮೇಘನಿನಗರ ಪ್ರದೇಶದಲ್ಲಿ ಬೋಯಿಂಗ್ 787 ಡ್ರೀಮ್ಲೈನರ್ ಅಪಘಾತಕ್ಕೀಡಾಗಿದೆ.
ವಿಮಾನ ಅಪಘಾತಕ್ಕೀಡಾದ ನಂತರ ಬೆಂಕಿ ಹೊತ್ತಿಕೊಂಡಿದ್ದು, ಬೆಂಕಿಯನ್ನು ನಂದಿಸಲು ಅಗ್ನಿಶಾಮಕ ದಳದವರನ್ನು ಸ್ಥಳಕ್ಕೆ ಧಾವಿಸಲಾಯಿತು ಎಂದು ಅಗ್ನಿಶಾಮಕ ಅಧಿಕಾರಿ ಜಯೇಶ್ ಖಾಡಿಯಾ ತಿಳಿಸಿದ್ದಾರೆ.
“ವಿಮಾನ ನಿಲ್ದಾಣದ ಸಮೀಪದ ಮೇಘನಿನಗರ ಪ್ರದೇಶದಲ್ಲಿ ವಿಮಾನ ಅಪಘಾತಕ್ಕೀಡಾಗಿದೆ. ಅದು ಯಾವ ರೀತಿಯ ವಿಮಾನ ಎಂಬುದು ಇನ್ನೂ ಸ್ಪಷ್ಟವಾಗಿಲ್ಲ” ಎಂದು ಅಹಮದಾಬಾದ್ ಪೊಲೀಸ್ ಆಯುಕ್ತ ಜಿ.ಎಸ್. ಮಲಿಕ್ ಹೇಳಿದ್ದಾರೆ.