ಹುಬ್ಬಳ್ಳಿ : ಕಳೆದ ಎಂಎಲ್ಸಿ ಚುನಾವಣೆ ಗಿಂತ ನಮ್ಮ ಪರ್ಫಾರ್ಮೆನ್ಸ್ ಉತ್ತಮವಾಗಿದೆ ರಾಜ್ಯದಲ್ಲಿ ಬಿಜೆಪಿಗೆ ಶೇಕಡ 9 ರಷ್ಟು ವೋಟ್ ಜಾಸ್ತಿಯಾಗಿದೆ ಬರುವ ದಿನಗಳಲ್ಲಿ ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ಬರಲಿದೆ ಕಾದುನೋಡಿ ಎಂದು ಹಾವೇರಿ ಲೋಕಸಭಾ ಬಿಜೆಪಿ ಅಭ್ಯರ್ಥಿ ಬಸವರಾಜ್ ಬೊಮ್ಮಾಯಿ ಆಪರೇಷನ್ ಕಮಲದ ಮುನ್ಸೂಚನೆ ನೀಡಿದ್ದಾರೆ.
ಕಳೆದ ಲೋಕಸಭೆ ಚುನಾವಣೆಯಲ್ಲಿ ರಾಜ್ಯದಲ್ಲಿ ಕಾಂಗ್ರೆಸ್ ಕೇವಲ ಒಂದು ಸ್ಥಾನಕ್ಕೆ ಮಾತ್ರ ಸೀಮಿತವಾಗಿತ್ತು ಆದರೆ ಈ ಬಾರಿ ಆ ಒಂದು ಸ್ಥಾನಗಳನ್ನು 9ಕ್ಕೆ ಹೆಚ್ಚಿಸಿಕೊಳ್ಳುವ ಮೂಲಕ ಬಿಜೆಪಿಗೆ ಟಕ್ಕರ್ ನೀಡಿದೆ. ಹೀಗಾಗಿ ಈ ಬಾರಿ ಒಂದು ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ 17 ಕಾಂಗ್ರೆಸ್ ಒಂಬತ್ತು ಹಾಗೂ ಜೆಡಿಎಸ್ ಎರಡು ಸ್ಥಾನಗಳನ್ನು ಪಡೆದುಕೊಂಡಿವೆ.
ಇನ್ನು ಹಾವೇರಿ ಕ್ಷೇತ್ರದಿಂದ ಸ್ಪರ್ಧಿಸಿ ಭರ್ಜರಿ ಗೆಲುವು ಸಾಧಿಸಿದ ಮಾಜಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು, ಸುದ್ದಿಗಾರರೊಂದಿಗೆ ಮಾತನಾಡಿ, ಕ್ಷೇತ್ರದ ಜನರಿಗಾಗಿ ನಾನು ಪ್ರಾಮಾಣಿಕವಾಗಿ ಕೆಲಸ ಮಾಡುತ್ತೇನೆ. ರಾಜ್ಯ ಸರ್ಕಾರದ ಹಣಬಲ ಅಧಿಕಾರ ಬಲ ಹಾಗೂ ಗ್ಯಾರೆಂಟಿ ಯಿಂದ ನಮಗೆ ನಿರೀಕ್ಷಿತ ಸೀಟ್ ಬಂದಿಲ್ಲ. ಇಂದು ಸಂಜೆ ಅಥವಾ ನಾಳೆ ದೆಹಲಿಗೆ ಹೋಗುತ್ತೇನೆ ಎಂದು ಹುಬ್ಬಳ್ಳಿ ಮಾಜಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ತಿಳಿಸಿದರು.