ಹಾವೇರಿ: ಕಳೆದ ಕೆಲವು ದಿನಗಳಿಂದ ಸುರಿದ ಧಾರಾಕಾರ ಮಳೆಗೆ ಜಿಲ್ಲೆಯ ಕೋಳೂರು ಗ್ರಾಮದ ಐತಿಹಾಸಿಕ ಬಸವೇಶ್ವರ ದೇವಸ್ಥಾನದ ಹಿಂಭಾಗದ ಗೋಡೆ ಕುಸಿದು ಬಿದ್ದಿದೆ.
BREAKING NEWS : ದೀಪಾವಳಿ ಬಳಿಕ ರಾಜ್ಯ ಸಚಿವ ಸಂಪುಟ ವಿಸ್ತರಣೆ : ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹೇಳಿಕೆ
ಆದರೆ ಯಾವುದೇ ಅಹಿತಕರ ಘಟನೆ ಸಂಭವಿಸಿಲ್ಲ.ದೇವಸ್ಥಾನದ ಒಳಭಾಗದಲ್ಲಿನ ಕೆಲವು ದೇವರ ಮೂರ್ತಿಗಳು ಮಣ್ಣಿನಲ್ಲಿ ಮುಚ್ಚಿ ಹೋಗಿವೆ. ಆದಷ್ಟು ಬೇಗ ಸರ್ಕಾರ ಹಾಗೂ ಜಿಲ್ಲಾಡಳಿತ ಕುಸಿತಗೊಂಡಿರುವ ದೇವಸ್ಥಾನದ ಅಭಿವೃದ್ಧಿಗೆ ಮುಂದಾಗಬೇಕು ಎಂದು ಗ್ರಾಮಸ್ಥರು ಒತ್ತಾಯಿಸಿದ್ದಾರೆ.ಬಸವೇಶ್ವರ ದೇವಸ್ಥಾನವು 11ನೇ ಶತಮಾನದಲ್ಲಿ ನಿರ್ಮಾಣವಾಗಿದೆ. ಇದು ಚಾಲುಕ್ಯರ ಕಾಲದಲ್ಲಿ ನಿರ್ಮಾಣವಾದ ಪ್ರಮುಖ ದೇವಸ್ಥಾನಗಳಲ್ಲಿ ಒಂದು. ವರದಾ ನದಿ ತಟದಲ್ಲಿರುವ ದೇವಸ್ಥಾನವು ಹಲವು ಐತಿಹಾಸಿಕ ಪುರಾವೆಗಳನ್ನು ಹೊಂದಿದೆ. ಇಲ್ಲಿರುವ ಬೃಹದಾಕಾರದ ನಂದಿ ವಿಗ್ರಹ ಪ್ರಮುಖ ಆಕರ್ಷಣೆಯಾಗಿದೆ.