ಬೆಂಗಳೂರು: ವಿಜಯಪುರದಲ್ಲಿ ವಕ್ಫ್ ಆಸ್ತಿ ವಿವಾದಕ್ಕೆ ಸಂಬಂಧಿಸಿದಂತೆ ಯಾವುದೇ ರೈತರನ್ನು ಒಕ್ಕಲೆಬ್ಬಿಸಲ್ಲ ಎಂಬುದಾಗಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಮೊದಲ ಪ್ರತಿಕ್ರಿಯೆಯಲ್ಲಿ ತಿಳಿಸಿದ್ದಾರೆ.
ವಿಧಾನಸೌಧದಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು ವಿಜಯಪುರದಲ್ಲಿ ವಕ್ಫ್ ಆಸ್ತಿ ಸಂಬಂಧ ಯಾವುದೇ ರೈತರನ್ನು ಒಕ್ಕಲೆಬ್ಬಿಸೋದಿಲ್ಲ. ನೋಟಿಸ್ ಕೊಟ್ಟಿದ್ದರೇ ಹಿಂಪಡೆಯಲಾಗುತ್ತದೆ ಎಂಬುದಾಗಿ ಹೇಳಿದರು.
ರಾಜ್ಯದ ಇತರೆ ಜಿಲ್ಲೆಗಳಲ್ಲಿಯೂ ರೈತರಿಗೆ ನೋಟಿಸ್ ಕೊಟ್ಟಿದ್ದರೇ ಆ ಬಗ್ಗೆ ಸಚಿವರು ಪರಿಶೀಲನೆ ನಡೆಸಲಿದ್ದಾರೆ. ನಿನ್ನೆ ಕಂದಾಯ ಸಚಿವ ಕೃಷ್ಣಬೈರೇಗೌಡ, ಜಮೀರ್ ಅಹ್ಮದ್ ಹಾಗೂ ಎಂ.ಬಿ ಪಾಟೀಲ್ ಅವರು ಸುದ್ದಿಗೋಷ್ಠಿಯಲ್ಲಿ ವಿವಾದದ ಬಗ್ಗೆ ಸಂಪೂರ್ಣ ಮಾಹಿತಿಯನ್ನು ನೀಡಿದ್ದಾರೆ ಎಂದರು.
ರೈತರಿಗೆ ಮಂಜೂರಾದ ಭೂಮಿಗೆ ವಕ್ಫ್ ಬೋರ್ಡ್ ನೋಟಿಸ್ ನೀಡಿಲ್ಲ: ಕಂದಾಯ ಸಚಿವ ಕೃಷ್ಣಬೈರೇಗೌಡ
BIG NEWS : ದೇವಸ್ಥಾನಗಳಲ್ಲಿ `VIP’ ದರ್ಶನ ಸಮಾನತೆಯ ಹಕ್ಕಿನ ಉಲ್ಲಂಘನೆ : ಸುಪ್ರೀಂಕೋರ್ಟ್ ಗೆ ಅರ್ಜಿ ಸಲ್ಲಿಕೆ!