ವಿಜಯಪುರ : ರಾಜ್ಯಾದ್ಯಂತ ವಕ್ಫ್ ವಿವಾದ ಭುಗಿಲೆದ್ದಿದ್ದು, ಈಗಾಗಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಧಿಕಾರಿಗಳಿಗೆ ರೈತರಿಗೆ ನೋಟಿಸ್ ನೀಡಿದ್ದನ್ನು ಕೂಡಲೇ ಹಿಂಪಡೆಯಿರಿ ಎಂದು ಖಡಕ್ ಸೂಚನೆ ಕೊಟ್ಟಿದ್ದಾರೆ. ಆದರೆ ಬಿಜೆಪಿ ನಾಳೆ ಕೋಲಾರದಲ್ಲಿ ಬೃಹತ್ ಪ್ರತಿಭಟನೆ ಹಮ್ಮಿಕೊಂಡಿದ್ದು. ಇತ್ತ ವಿಜಯಪುರದಲ್ಲಿ ನಾಳೆಯಿಂದ ಬಿಜೆಪಿ ನಗರ ಶಾಸಕ ವಸನಗೌಡ ಪಾಟೀಲ್ ಯತ್ನಾಳ್ ಅಹೋರಾತ್ರಿ ಧರಣಿ ಆರಂಭಿಸಲಿದ್ದಾರೆ.
ಹೌದು ವಕ್ಫ್ ಆಸ್ತಿ ವಿವಾದ ಸಂಬಂಧ ನಾಳೆಯಿಂದ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅಹೋರಾತ್ರಿ ಧರಣಿ ಹಮ್ಮಿಕೊಂಡಿದ್ದಾರೆ. ಅಹೋರಾತ್ರಿ ಧರಣಿಯ ಬಗ್ಗೆ ಶಾಸಕರ ಕಚೇರಿಯಿಂದ ಮಾಧ್ಯಮ ಪ್ರಕಟಣೆ ಹೊರಡಿಸಲಾಗಿದೆ. ರೈತರು, ಸಂಘ ಸಂಸ್ಥೆಗಳು, ಶಾಲೆಗಳು, ಮಠಮಾನ್ಯಗಳ ಜಮೀನು ಹಾಗೂ ಸರ್ಕಾರಿ ಜಮೀನಿನ ಪಹಣಿಯಲ್ಲಿ ವಕ್ಫ್ ಆಸ್ತಿ ಎಂದು ನಮೂದು ಮಾಡಲಾಗಿದೆ.
ವಕ್ಫ್ ಆಸ್ತಿ ಎಂದು ನಮೂದಿಸಿದ್ದನ್ನು ತೆಗೆಯುವಂತೆ ಒತ್ತಾಯ ಕೇಳಿ ಬಂದಿದ್ದು, ನಾಳೆಯಿಂದ ಹೋರಾಟ ನಡೆಸುವುದಾಗಿ ಶಾಸಕರ ಕಚೇರಿಯಿಂದ ಮಾಧ್ಯಮ ಪ್ರಕಟಣೆ ಹೊರಡಿಸಿದ್ದಾರೆ. ಅಲ್ಲದೆ ನವೆಂಬರ್ ಆರರಂದು ಜೆಪಿಸಿ ಅಧ್ಯಕ್ಷರು ರಾಜ್ಯಕ್ಕೆ ಆಗಮಿಸಲಿದ್ದಾರೆ. ಅಲ್ಲದೆ ಬಿಜೆಪಿ ಕೂಡ ದೊಡ್ಡ ಮಟ್ಟದಲ್ಲಿ ಹೋರಾಟ ನಡೆಸಲು ಸಿದ್ಧತೆ ಮಾಡಿಕೊಂಡಿದೆ ಎನ್ನಲಾಗಿದೆ.